Featured

ಜೂಜಾಟ, ಡ್ರಗ್ಸ್‌ ಪ್ರಕರಣಗಳಿಗೆ ಕಡಿವಾಣ : ಬಸವರಾಜ ಬೊಮ್ಮಾಯಿ -Vishwanews24

ಜೂಜಾಟ, ಡ್ರಗ್ಸ್‌ ಪ್ರಕರಣಗಳಿಗೆ ಕಡಿವಾಣ : ಬಸವರಾಜ ಬೊಮ್ಮಾಯಿ -Vishwanews24

ಡ್ರಗ್ಸ್ ಪ್ರಕರಣಗಳನ್ನು ಬೇರುಮಟ್ಟದಿಂದ ಕಿತ್ತುಹಾಕುವುದು ನಮ್ಮ ಸರ್ಕಾರದ ಉದ್ದೇಶ..

ಬೆಂಗಳೂರು, : ರಾಜ್ಯದಲ್ಲಿ ಹೆಚ್ಚುತ್ತಿರುವ ಜೂಜಾಟ ಮತ್ತು ಡ್ರಗ್ಸ್ ಪ್ರಕರಣಗಳಿಗೆ ಕಡಿವಾಣ ಹಾಕಿ ತಪ್ಪಿತಸ್ಥರ ವಿರುದ್ದ ಕಠಿಣ ಕಾನೂನು ಜರುಗಿಸುವ ನಿಟ್ಟಿನಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ನಮ್ಮ ಸರ್ಕಾರ ಡ್ರಗ್ ಮಾಫಿಯಾ ವಿರುದ್ಧ ಸಮರ ಸಾರಿದ್ದು, ಅನೇಕ ಒತ್ತಡಗಳು ನಮ್ಮ ಮೇಲೆ ಬಂದಿವೆ. ಆದರೆ ನಾವು ಯಾವುದೇ ಒತ್ತಡಕ್ಕೆ ಮಣಿಯುವ ಪ್ರಶ್ನೆಯೇ ಇಲ್ಲ. ಈ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಕಠಿಣ ಕಾನೂನು ಕ್ರಮ ಜರುಗಿಸಲು ಹಾಲಿ ಇರುವ ಕಾನೂನಿಗೆ ತಿದ್ದುಪಡಿ ಮಾಡಲಾಗುವುದು ಎಂದು ಹೇಳಿದ್ದಾರೆ.

ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಈಶ್ವರ್ ಖಂಡ್ರೆ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಜೂಜಾಟ ಒಂದು ಸಾಮಾಜಿಕ ಪಿಡುಗಾಗಿದ್ದು, ಇದಕ್ಕೆ ಕಡಿವಾಣ ಹಾಕಲೇಬೇಕಾದ ಅಗತ್ಯವಿದೆ. ಹಿಂದಿನ ಸರ್ಕಾರಗಳಿಗಿಂತಲೂ ನಮ್ಮ ಸರ್ಕಾರ ಬಿಗಿಯಾದ ಕ್ರಮ ತೆಗೆದುಕೊಂಡಿದೆ.

ಕರ್ನಾಟಕ ಪೊಲೀಸ್ ಕಾಯ್ದೆಗೆ ತಿದ್ದುಪಡಿ ಮಾಡುವ ಸಂಬಂಧ ಈಗಾಗಲೇ ರಾಷ್ಟ್ರೀಯ ಕಾನೂನು ಕಾಲೇಜಿನ ಮುಖ್ಯಸ್ಥರ ಜೊತೆ ಮಾತುಕತೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಕಾನೂನು ರಾಜ್ಯದಲ್ಲಿ ಜಾರಿಯಾಗಲಿದೆ. ಇದು ಕೇವಲ ಕಾನೂನಿನಿಂದ ಮಾತ್ರ ತಡೆಯಲು ಸಾಧ್ಯವಿಲ್ಲ. ಜನರಲ್ಲೂ ಜಾಗೃತಿ ಬರಬೇಕೆಂದು ಮನವಿ ಮಾಡಿದರು.

ಡ್ರಗ್ಸ್ ಪ್ರಕರಣಗಳನ್ನು ಬೇರುಮಟ್ಟದಿಂದ ಕಿತ್ತುಹಾಕುವುದು ನಮ್ಮ ಸರ್ಕಾರದ ಉದ್ದೇಶವಾಗಿದೆ. ಹೀಗಾಗಿ ಕೇಂದ್ರ ಸರ್ಕಾರಕ್ಕೆ ಬಿಗಿಯಾದ ಕಾನೂನು ತರಲು ಮಾತುಕತೆ ನಡೆಸಲಾಗಿದೆ. ಸರ್ಕಾರ ತೆಗೆದುಕೊಂಡಿರುವ ಕಾನೂನು ಕಾರ್ಯಾಚರಣೆ ನಿಲ್ಲುವುದಿಲ್ಲ ಎಂದು ಗುಡುಗಿದರು.

ಎನ್‍ಡಿಪಿಎಸ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಅಕಾರ ನಮಗಿಲ್ಲ. ಅದು ಸಂಸತ್‍ನಲ್ಲಿ ತಿದ್ದುಪಡಿ ಮಾಡಬೇಕು. ಈ ಕಾಯ್ದೆಯಡಿ ಕ್ರಮ ಜರುಗಿಸಲು ನಮಗೆ ಅವಕಾಶವಿದೆ ಎಂದರು.

ಎನ್‍ಡಿಪಿಎಸ್ ಕಾಯ್ದೆಯಡಿ 2017ರಲ್ಲಿ 1126 ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 1095 ಪ್ರಕರಣಗಳ ವಿರುದ್ಧ ಚಾರ್ಜ್‍ಶೀಟ್ ಸಲ್ಲಿಸಲಾಗಿದ್ದು, 197 ಪ್ರಕರಣಗಳಿಗೆ ಶಿಕ್ಷೆಯಾಗಿದೆ. 2018ರಲ್ಲಿ 1031 ಪ್ರಕರಣಗಳು ದಾಖಲಾಗಿದ್ದರೆ, 951 ಪ್ರಕರಣಗಳ ವಿರುದ್ಧ ಚಾರ್ಜ್‍ಶೀಟ್ ದಾಖಲಾಗಿ 167 ಮಂದಿಗೆ ಶಿಕ್ಷೆಯಾಗಿದೆ.

2019ರಲ್ಲಿ 1161 ಪ್ರಕರಣಗಳ ಪೈಕಿ 1374 ಪ್ರಕರಣಗಳಿಗೆ ಚಾರ್ಜ್‍ಶೀಟಾಗಿದ್ದು, 256 ಪ್ರಕರಣಗಳಿಗೆ ಶಿಕ್ಷೆಯಾಗಿದೆ. 2020ರಲ್ಲಿ 3852 ಪ್ರಕರಣಗಳಲ್ಲಿ 2285 ಚಾರ್ಜ್‍ಶೀಟ್, 233 ಪ್ರಕರಣಗಳಿಗೆ ಶಿಕ್ಷೆಯಾಗಿವೆ. ಈವರೆಗೂ ಬೆಂಗಳೂರಿನಲ್ಲಿ ಮಾತ್ರ ಎಫ್‍ಎಸ್‍ಎಲ್ ಮಾತ್ರ ಇತ್ತು ಎಂದು ಹೇಳಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

17 minutes ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

60 minutes ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

1 hour ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

2 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

2 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

2 hours ago