ಬೆಂಗಳೂರು,: ಕೊರೊನಾ ಸೋಂಕು ಕೊಂಚ ನಿಯಂತ್ರಣಕ್ಕೆ ಬಂದಿರುವ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಸಡಿಲಿಸಲು ಸರ್ಕಾರ ಮುಂದಾಗಿದೆ. ಕೊರೊನಾ ಎರಡನೇ ಅಲೆ ನಿಯಂತ್ರಿಸಲು ಪ್ರಸ್ತುತ ರಾಜ್ಯ ಸರ್ಕಾರ ಜಾರಿ ಮಾಡಿರುವ ಲಾಕ್ ಡೌನ್ ಜೂನ್ 14ಕ್ಕೆ ಮುಗಿಯಲಿದ್ದು, ಜೂನ್ 14ರ ಬಳಿಕ ರಾಜ್ಯದಲ್ಲಿ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಪ್ರಾರಂಭವಾಗಲಿರುವ ಸಾಧ್ಯತೆ ಇದೆ. ಇದಕ್ಕೆ ಕಂದಾಯ ಸಚಿವ ಆರ್ ಅಶೋಕ್ ಅವರ ಹೇಳಿಕೆಯೂ ಪುಷ್ಟಿ ನೀಡಿದೆ.
” ರಾಜ್ಯದಲ್ಲಿ ಜೂನ್ 14ರ ಬಳಿಕ ತಕ್ಷಣ ಅನ್ ಲಾಕ್ ಮಾಡುವುದರ ಬದಲಾಗಿ ಹಂತ ಹಂತವಾಗಿ ಅನ್ ಲಾಕ್ ಮಾಡಲಾಗುತ್ತಿದೆ. ಸರ್ಕಾರವೂ ಸುಮಾರು ಐದು ಹಂತಗಳಲ್ಲಿ ಅನ್ ಲಾಕ್ ಮಾಡುವ ಚಿಂತನೆ ಮಾಡಲಾಗಿದೆ. ಮೊದಲ ಹಂತದಲ್ಲಿ ಖರೀದಿಯ ಅವಧಿಯನ್ನು ವಿಸ್ತರಣೆ ಮಾಡುವ ಚಿಂತನೆ ಇದೆ. ಬೆಳಿಗ್ಗೆ 6 ರಿಂದ 10ರವರೆಗೆ ನೀಡಲಾಗಿರುವ ಅವಕಾಶವನ್ನು 12 ಗಂಟೆಯವರೆಗೆ ವಿಸ್ತರಿಸುವ ಚಿಂತನೆ ಇದೆ” ಎಂದು ಸಚಿವ ಆರ್ ಅಶೋಕ್ ಹೇಳಿದ್ದಾರೆ
ಇನ್ನೂ ಪಾರ್ಕ್ ಗಳಲ್ಲಿ ವಾಕಿಂಗ್ ಮಾಡೋದಕ್ಕೆ ಅವಕಾಶ ನೀಡಬಹುದು ಎಂಬುದಾಗಿ ತಜ್ಞರು ಸೂಚಿಸಿದ್ದಾರೆ. ಹೀಗಾಗಿ ಅನ್ ಲಾಕ್ ಮೊದಲ ಹಂತದಲ್ಲಿಯೇ ಪಾರ್ಕ್ ನಲ್ಲಿ ವಾಕಿಂಗ್ ಮಾಡೋದಕ್ಕೂ ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಲಾಗಿದೆ. ಜೂನ್.14ರ ನಂತ್ರ ಹಂತ ಹಂತವಾಗಿ ಅನ್ ಲಾಕ್ ಜಾರಿಗೊಳಿಸೋ ಬಗ್ಗೆ ಅಂತಿಮವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತೀರ್ಮಾನ ಕೈಗೊಳ್ಳಲಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…