ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ – vishwanews24

Featured, ರಾಷ್ಟ್ರ ನ್ಯೂಸ್

ಜೂನ್ 15 ರಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ : ಕೇರಳ ಸರ್ಕಾರ ಘೋಷಣೆ

ತಿರುವನಂತಪುರಂ: ಕೇರಳ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಜೂನ್ 15ರಿಂದ ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಸಾಮಾನ್ಯ ಬಸ್ ಸೇವೆಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಕಲ್ಪಿಸಲಾಗುತ್ತಿದೆ.

ಈ ಕುರಿತು ಘೋಷಣೆ ಮಾಡಿದ ಮುಖ್ಯಮಂತ್ರಿ ವಿ.ಡಿ. ಸತೀಶನ್, ಯೋಜನೆಯಿಂದ ರಾಜ್ಯ ಸರ್ಕಾರಕ್ಕೆ ಪ್ರತಿ ತಿಂಗಳು ಸುಮಾರು ರೂ.70 ಕೋಟಿ ಹಾಗೂ ವಾರ್ಷಿಕವಾಗಿ ಸುಮಾರು ರೂ. 800 ಕೋಟಿ ವೆಚ್ಚವಾಗಲಿದೆ ಎಂದು ತಿಳಿಸಿದ್ದಾರೆ. ಈ ಸಂಪೂರ್ಣ ಮೊತ್ತವನ್ನು ಸರ್ಕಾರವೇ ಕೆಎಸ್‌ಆರ್‌ಟಿಸಿಗೆ ಮರುಪಾವತಿಸಲಿದೆ ಎಂದರು.

ಈಗಾಗಲೇ ಕೆಎಸ್‌ಆರ್‌ಟಿಸಿಗೆ ವಾರ್ಷಿಕ ರೂ.1,500 ಕೋಟಿ ಆರ್ಥಿಕ ನೆರವು ನೀಡಲಾಗುತ್ತಿದ್ದು, ಹೊಸ ಯೋಜನೆಯ ಹೆಚ್ಚುವರಿ ವೆಚ್ಚವನ್ನೂ ಸರ್ಕಾರವೇ ಭರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು. ಯೋಜನೆ ಜಾರಿಯಾದ ಆರು ತಿಂಗಳೊಳಗೆ ಸಾರಿಗೆ ನಿಗಮದ ಆದಾಯದಲ್ಲೂ ಸುಧಾರಣೆ ಕಾಣಬಹುದು ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

ಮೊದಲ ಹಂತದಲ್ಲಿ ಈ ಸೌಲಭ್ಯ ಸಾಮಾನ್ಯ ಕೆಎಸ್‌ಆರ್‌ಟಿಸಿ ಬಸ್‌ಗಳಿಗೆ ಮಾತ್ರ ಅನ್ವಯವಾಗಲಿದೆ. ಯಾವುದೇ ವಯೋಮಿತಿ ಇಲ್ಲದೆ ಎಲ್ಲಾ ಮಹಿಳೆಯರು ಉಚಿತ ಪ್ರಯಾಣಕ್ಕೆ ಅರ್ಹರಾಗಿರುತ್ತಾರೆ ಎಂದು ಮುಖ್ಯಮಂತ್ರಿ ತಿಳಿಸಿದರು.

ವಿಧಾನಸಭೆ ಚುನಾವಣೆಯ ವೇಳೆ ಯುಡಿಎಫ್ ನೀಡಿದ್ದ ಪ್ರಮುಖ ಭರವಸೆಗಳಲ್ಲಿ ಈ ಯೋಜನೆಯೂ ಒಂದಾಗಿತ್ತು. ಮಹಿಳೆಯರ ಸಂಚಾರ ಸುಗಮಗೊಳಿಸುವುದು, ಕುಟುಂಬಗಳ ಸಾರಿಗೆ ವೆಚ್ಚ ಕಡಿಮೆ ಮಾಡುವುದು ಹಾಗೂ ಶಿಕ್ಷಣ ಮತ್ತು ಉದ್ಯೋಗ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಇದರ ಮುಖ್ಯ ಉದ್ದೇಶವಾಗಿದೆ.

ಆದರೆ, ಸಾಮಾನ್ಯ ಬಸ್ ಸೇವೆಗಳು ಕಡಿಮೆ ಇರುವ ಪ್ರದೇಶಗಳಲ್ಲಿ ಯೋಜನೆಯ ಪರಿಣಾಮಕಾರಿತ್ವದ ಬಗ್ಗೆ ಪ್ರಶ್ನೆಗಳು ಕೇಳಿಬಂದಿವೆ. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಕ್ಷೇತ್ರಮಟ್ಟದ ಮೌಲ್ಯಮಾಪನ ಹಾಗೂ ಸಾರ್ವಜನಿಕರ ಪ್ರತಿಕ್ರಿಯೆ ಆಧರಿಸಿ ಯೋಜನೆಯನ್ನು ಮುಂದಿನ ದಿನಗಳಲ್ಲಿ ವಿಸ್ತರಿಸಿ ಅಗತ್ಯ ಬದಲಾವಣೆಗಳನ್ನು ತರಲಾಗುವುದು ಎಂದು ಹೇಳಿದರು.

ರೇಣುಕಾಸ್ವಾಮಿ ಕೊಲೆ ಪ್ರಕರಣ : ಐವರು ಆರೋಪಿಗಳ ಜಾಮೀನು ರದ್ದು ಅರ್ಜಿ ವಜಾಗೊಳಿಸಿದ ಹೈಕೋರ್ಟ್ – vishwanews24

Leave a Reply