Featured

ಜೂನ್ 16 ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟೀಯ ಓಬಿಸಿ ಮೋರ್ಚಾ ಪ್ರಶಿಕ್ಷಣ ಕಾರ್ಯಾಗಾರ : ಯಶ್ ಪಾಲ್ ಸುವರ್ಣ – VIshwnaews24

ಜೂನ್ 16 ರಿಂದ ಬೆಂಗಳೂರಿನಲ್ಲಿ ಬಿಜೆಪಿ ರಾಷ್ಟೀಯ ಓಬಿಸಿ ಮೋರ್ಚಾ ಪ್ರಶಿಕ್ಷಣ ಕಾರ್ಯಾಗಾರ : ಯಶ್ ಪಾಲ್ ಸುವರ್ಣ

ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟೀಯ ಪ್ರಶಿಕ್ಷಣ ಕಾರ್ಯಗಾರ ಜೂನ್ 16 ರಿಂದ 18  ರವರೆಗೆ ಬೆಂಗಳೂರಿನ ಹೋಟೆಲ್ ರಮಡ ದಲ್ಲಿ ಆಯೋಜಿಸಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಪ್ರಶಿಕ್ಷಣ ಕಾರ್ಯಗಾರವನ್ನು ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಉದ್ಘಾಟಿಸಲಿದ್ದಾರೆ.
ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ  ಕೆ ಲಕ್ಷ್ಮಣ ಅಧ್ಯಕ್ಷತೆ ವಹಿಸಲಿದ್ದು,  ಬಿಜೆಪಿ ರಾಷ್ಟ್ರಾಧ್ಯಕ್ಷರಾದ ಶ್ರೀ ಜೆ ಪಿ ನಡ್ಡಾ, ರಾಷ್ಟೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಶ್ರೀ ಬಿ ಎಲ್ ಸಂತೋಷ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಕರ್ನಾಟಕ ಬಿಜೆಪಿ ಉಸ್ತುವಾರಿ ಶ್ರೀ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲು, ಬಿಜೆಪಿ ಪ್ರಶಿಕ್ಷಣ ವಿಭಾಗದ ರಾಷ್ಟ್ರೀಯ ಪ್ರಭಾರಿ ಶ್ರೀ ಮುರಳೀಧರ ರಾವ್ ಹಾಗೂ ಪಕ್ಷದ ವಿವಿಧ ಹಿರಿಯ ಮುಖಂಡರು ಭಾಗವಹಿಸಲಿದ್ದಾರೆ.
ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಶಿಕ್ಷಣ ಕಾರ್ಯಾಗಾರದ ಬಗ್ಗೆ ಪೂರ್ವಭಾವಿ ಸಭೆ ನಡೆಸಿ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಬಗ್ಗೆ ಚರ್ಚಿಸಿದ್ದು, ಪೂರ್ವ ಸಭೆಯಲ್ಲಿ ಯಲಹಂಕ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಸ್ ಆರ್ ವಿಶ್ವನಾಥ್, ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಶ್ರೀ ನಿಖಿಲ್ ಅನಂದ್,  ಮೋರ್ಚಾದ ರಾಷ್ಟ್ರೀಯ ಕಾರ್ಯಾಲಯ ಕಾರ್ಯದರ್ಶಿ ಶ್ರೀ ಸಂಜಯ್ ಗುಜ್ಜರ್, ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷರಾದ ಶ್ರೀ ನೆ ಲ ನರೇಂದ್ರ ಬಾಬು, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಸುರೇಶ್ ಬಾಬು, ಮೋರ್ಚಾದ ಪದಾಧಿಕಾರಿಗಳು, ಕಾರ್ಯಕಾರಿಣಿ ಸದಸ್ಯರು ಉಪಸ್ಥಿತರಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

8 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 hour ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 hour ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago