Featured

ಜೂನ್ 27 ರಿಂದ ಜುಲೈ 4ರವರೆಗೆ SSLC ಪೂರಕ ಪರೀಕ್ಷೆ ; ವೇಳಾಪಟ್ಟಿ ಪ್ರಕಟ  – Vishwanews24

ಜೂನ್ 27 ರಿಂದ ಜುಲೈ 4ರವರೆಗೆ SSLC ಪೂರಕ ಪರೀಕ್ಷೆ ; ವೇಳಾಪಟ್ಟಿ ಪ್ರಕಟ

2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಮೇ 19ರಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮುಕ್ತಾವಗಿದ್ದು, ಈಗ ಕರ್ನಾಟಕ ಶಿಕ್ಷಣ ಇಲಾಖೆ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.

ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್‌ 27 ರಿಂದ ಜುಲೈ 4ರ ವರಗೆ ಪೂರಕ ಪರೀಕ್ಷೆಯನ್ನು ನಡೆಸಲು ಶಿಕ್ಷಣ ಮಂಡಳಿ ನಿರ್ಧರಿಸಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಗಳಲ್ಲಿ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ.

ಪೂರಕ ಪರೀಕ್ಷೆಯ ವೇಳಾ ಪಟ್ಟಿ

ಜೂನ್‌ 27 ಸೋಮವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರವರೆಗೆ-ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ 1.45 ರಿಂದ 5.15 ರವರೆಗೆ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಜೂನ್‌ 28 ಮಂಗಳವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಆರ್‌ಟಿ), ಸಂಕ್ಕೃತ.
ಜೂನ್‌ 29 ಬುಧವಾರ -ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ದ್ವಿತೀಯ ಭಾಷೆ- ಕನ್ನಡ, ಇಂಗ್ಲಿಷ್.
ಜೂನ್‌ 30 ಗುರುವಾರ -ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಸಮಾಜ ವಿಜ್ಞಾನ.
ಜುಲೈ 01 ಶುಕ್ರವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ತೃತೀಯ ಭಾಷೆ- ಹಿಂದಿ(ಎನ್‌ಸಿಆರ್‌ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್‌ಎಸ್‌ಕ್ಯೂಎಫ್‌ ಪರೀಕ್ಷಾ ವಿಷಯಗಳು: ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.45 ರವರೆಗೆ -ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್‌ ವೆಲ್‌ನೆಸ್‌.
ಜುಲೈ 02 ಶನಿವಾರ – ಬೆಳಗ್ಗೆ9.30 ರಿಂದ ಮಧ್ಯಾಹ್ನ 12.45 ವರೆಗೆ-ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್‌ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ, ಮಧ್ಯಾಹ್ನ 2 ರಿಂದ ಸಂಜೆ 5.15ವರೆಗೆ- ಇಂಜಿನಿಯರಿಂಗ್ ಗ್ರಾಫಿಕ್ಸ್-2
ಜುಲೈ 04 ಸೋಮವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 12 .45 ರವರೆಗೆ – ಗಣಿತ, ಸಮಾಜ ಶಾಸ್ತ್ರ.

2022ನೇ ಸಾಲಿನಲ್ಲಿ ಕರ್ನಾಟಕ ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಒಟ್ಟು 8,73,859 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರ ಪೈಕಿ 8,53,436 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇನ್ನು 20,423 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಈ ಬಾರಿ ಪರೀಕ್ಷೆ ಬರೆದವರ ಪೈಕಿ 1,22,555 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಈಗ ಜೂನ್‌ 27 ರಿಂದ ಜುಲೈ 4ರ ವರಗೆ ಪರೀಕ್ಷೆ ನಡೆಸಲಾಗುತ್ತದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago