2022ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶ ಈಗಾಗಲೇ ಪ್ರಕಟವಾಗಿದೆ. ಮೇ 19ರಂದು ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಿದ್ದು, ಈ ಪರೀಕ್ಷೆಯಲ್ಲಿ ಅನುತೀರ್ಣರಾದ ವಿದ್ಯಾರ್ಥಿಗಳಿಗಾಗಿ ಪೂರಕ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಈಗಾಗಲೇ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ಮುಕ್ತಾವಗಿದ್ದು, ಈಗ ಕರ್ನಾಟಕ ಶಿಕ್ಷಣ ಇಲಾಖೆ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು 2021-22ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜೂನ್ 27 ರಿಂದ ಜುಲೈ 4ರ ವರಗೆ ಪೂರಕ ಪರೀಕ್ಷೆಯನ್ನು ನಡೆಸಲು ಶಿಕ್ಷಣ ಮಂಡಳಿ ನಿರ್ಧರಿಸಿದೆ. ಪೂರಕ ಪರೀಕ್ಷೆಗೆ ನೋಂದಾಯಿಸಿಕೊಂಡಿರುವ ವಿದ್ಯಾರ್ಥಿಗಳು ತಮ್ಮ ತಮ್ಮ ಶಾಲೆಗಳಲ್ಲಿ ಪ್ರವೇಶ ಪತ್ರವನ್ನು ಪಡೆಯಬಹುದಾಗಿದೆ.
ಪೂರಕ ಪರೀಕ್ಷೆಯ ವೇಳಾ ಪಟ್ಟಿ
ಜೂನ್ 27 ಸೋಮವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45ರವರೆಗೆ-ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ 1.45 ರಿಂದ 5.15 ರವರೆಗೆ ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ
ಜೂನ್ 28 ಮಂಗಳವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಇಂಗ್ಲಿಷ್ (ಎನ್‌ಸಿಆರ್‌ಟಿ), ಸಂಕ್ಕೃತ.
ಜೂನ್ 29 ಬುಧವಾರ -ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ದ್ವಿತೀಯ ಭಾಷೆ- ಕನ್ನಡ, ಇಂಗ್ಲಿಷ್.
ಜೂನ್ 30 ಗುರುವಾರ -ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ಸಮಾಜ ವಿಜ್ಞಾನ.
ಜುಲೈ 01 ಶುಕ್ರವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರವರೆಗೆ ತೃತೀಯ ಭಾಷೆ- ಹಿಂದಿ(ಎನ್‌ಸಿಆರ್‌ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಪರ್ಷಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು. ಎನ್‌ಎಸ್‌ಕ್ಯೂಎಫ್ ಪರೀಕ್ಷಾ ವಿಷಯಗಳು: ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.45 ರವರೆಗೆ -ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಆಂಡ್ ವೆಲ್‌ನೆಸ್.
ಜುಲೈ 02 ಶನಿವಾರ – ಬೆಳಗ್ಗೆ9.30 ರಿಂದ ಮಧ್ಯಾಹ್ನ 12.45 ವರೆಗೆ-ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ, ಮಧ್ಯಾಹ್ನ 2 ರಿಂದ ಸಂಜೆ 5.15ವರೆಗೆ- ಇಂಜಿನಿಯರಿಂಗ್ ಗ್ರಾಫಿಕ್ಸ್-2
ಜುಲೈ 04 ಸೋಮವಾರ – ಬೆಳಗ್ಗೆ 10.30 ರಿಂದ ಮಧ್ಯಾಹ್ನ 12 .45 ರವರೆಗೆ – ಗಣಿತ, ಸಮಾಜ ಶಾಸ್ತ್ರ.
2022ನೇ ಸಾಲಿನಲ್ಲಿ ಕರ್ನಾಟಕ ಎಸ್‌ಎಸ್‌ಎಲ್ಸಿ ಪರೀಕ್ಷೆಗೆ ಒಟ್ಟು 8,73,859 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರ ಪೈಕಿ 8,53,436 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಇನ್ನು 20,423 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದರು. ಈ ಬಾರಿ ಪರೀಕ್ಷೆ ಬರೆದವರ ಪೈಕಿ 1,22,555 ವಿದ್ಯಾರ್ಥಿಗಳು ಅನುತೀರ್ಣರಾಗಿದ್ದರು. ಈ ವಿದ್ಯಾರ್ಥಿಗಳಿಗೆ ಈಗ ಜೂನ್ 27 ರಿಂದ ಜುಲೈ 4ರ ವರಗೆ ಪರೀಕ್ಷೆ ನಡೆಸಲಾಗುತ್ತದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…