ಉಡುಪಿ

ಜೂ 13ಕ್ಕೆ ಗೋವಿಂದ ಕಲ್ಯಾಣ ಮಂಟಪದಲ್ಲಿ ಪೇಜಾವರ ಶ್ರೀಗಳ ಇಫ್ತಾರ್ ಕೂಟ

ಉಡುಪಿ, : ಈಗ ಮತ್ತೆ ಇಫ್ತಾರ್ ಸದ್ದು ಮಾಡುತ್ತಿದೆ. ಈ ಬಾರಿಯೂ ಮುಸಲ್ಮಾನರಿಗೆ ಇಫ್ತಾರ್ ಏರ್ಪಡಿಸುವ ಯೋಚನೆ ಪೇಜಾವರ ಶ್ರೀಗಳದ್ದು. ಈ ಸಂಬಂಧ ಅವರು ಮುಸ್ಲಿಂರ ಜೊತೆ ಚರ್ಚೆಯನ್ನೂ ಮಾಡಿದ್ದಾರೆ. ಈ ಬಾರಿ ಯಾವುದೇ ವಿವಾದ ಬೇಡ ಅಂತ ಕೃಷ್ಣಮಠದ ಬದಲು ಹೊರಗಡೆ ಗೋವಿಂದ ಕಲ್ಯಾಣ ಮಂಟಪದಲ್ಲಿ ಇಫ್ತಾರ್ ಏರ್ಪಡಿಸುವ ಕುರಿತು ಮಾತುಕತೆಗಳಾಗುತ್ತಿವೆ. ಜೂನ್ 13ನೇ ತಾರೀಕಿಗೆ ಮಾಡುವ ನಿರ್ಧಾರಕ್ಕೂ ಬರಲಾಗಿದೆ. ಖುದ್ದು ಪೇಜಾವರ ಶ್ರೀಗಳೂ ಇದರಲ್ಲಿ ಭಾಗವಹಿಸಲಿದ್ದಾರೆ. ಆದರೆ ಈ ಬಾರಿಯೂ ಕಳೆದ ಬಾರಿಯಂತೆ ವಿವಾದವಾಗುವ ಎಲ್ಲ ಸಾಧ್ಯತೆಗಳೂ ಕಂಡು ಬರುತ್ತಿವೆ.

ಕಳೆದ ವರ್ಷ ರಮ್ಝಾನ್ ತಿಂಗಳಲ್ಲಿ ಮುಸಲ್ಮಾನರಿಗೆ ಪೇಜಾವರ ಶ್ರೀಗಳು ಇಫ್ತಾರ್ ಕೂಟ ಏರ್ಪಡಿಸಿದ್ದು ಭಾರೀ ಪರ- ವಿರೋಧ ಚರ್ಚೆಗೆ ಕಾರಣವಾಗಿತ್ತು. ಈ ಸಲ ಮತ್ತೆ ರಮ್ಝಾನ್ ತಿಂಗಳು ಬಂದಿದೆ. ಈ ಬಾರಿಯೂ ಮುಸಲ್ಮಾನರಿಗೆ ಇಫ್ತಾರ್ ಕೂಟ ಏರ್ಪಡಿಸುವ ಇಚ್ಛೆ ಪೇಜಾವರ ಶ್ರೀಗಳದ್ದು.

ರಮ್ಜಾನ್ ತಿಂಗಳು ಬಂತೆಂದರೆ ಜಾತಿ- ಭೇದ ಮರೆತು ಸೌಹಾರ್ದ ಇಫ್ತಾರ್ ಕೂಟಗಳು ನಡೆಯುತ್ತವೆ. ಹಿಂದೂ, ಕ್ರಿಶ್ಚಿಯನ್ನರೂ ರಮ್ಝಾನ್ ತಿಂಗಳ ಇಫ್ತಾರ್ ಕೂಟಗಳನ್ನು ಏರ್ಪಡಿಸಿ ಸೌಹಾರ್ದತೆ ಮೆರೆಯುವುದು ನಡೆದುಕೊಂಡು ಬಂದಿದೆ. ಕಳೆದ ವರ್ಷ ಹಿರಿಯ ಯತಿ ಪೇಜಾವರ ಶ್ರೀಗಳು ಇಂತಹದ್ದೊಂದು ನಿರ್ಧಾರಕ್ಕೆ ಬಂದು, ಕ್ರಾಂತಿಯೊಂದಕ್ಕೆ ನಾಂದಿ ಹಾಡಿದರು. ಕೃಷ್ಣಮಠಕ್ಕೆ ಮುಸಲ್ಮಾನರನ್ನು ಆಹ್ವಾನಿಸಿ ಇಫ್ತಾರ್ ಕೊಡುವ ಮೂಲಕ ಸೌಹಾರ್ದದ ವಾತಾವರಣ ನಿರ್ಮಿಸುವುದು ಪೇಜಾವರ ಶ್ರೀಗಳ ಉದ್ದೇಶವಾಗಿತ್ತು. ಈ ಕ್ರಾಂತಿಕಾರಿ ಹೆಜ್ಜೆಗೆ ಸಾಕಷ್ಟು ಮೆಚ್ಚುಗೆಯೂ ವ್ಯಕ್ತವಾಯಿತು. ಆದರೆ ಅದರ ಜತೆಗೆ ವಿರೋಧವೂ ವ್ಯಕ್ತವಾಯಿತು. ಮುಖ್ಯವಾಗಿ ಶ್ರೀರಾಮ ಸೇನೆಯಂತಹ ಹಿಂದೂಪರ ಸಂಘಟನೆಗಳು ಇದಕ್ಕೆ ವಿರೋಧ ಮಾಡಿದವು. ಆದರೆ ಪೇಜಾವರ ಶ್ರೀಗಳು ತಮ್ಮ ಕ್ರಮವನ್ನು ಸಮರ್ಥಿಸಿಕೊಂಡರು. ಕೃಷ್ಣಮಠಕ್ಕೆ ಜಾಗ ನೀಡಿದ್ದೇ ಮುಸಲ್ಮಾನರು. ಈ ಸೌಹಾರ್ದ ಪರಂಪರೆ ಇವತ್ತಿನದಲ್ಲ, ಹಿಂದಿನಿಂದಲೂ ಇದೆ ಅಂತ ಹೇಳಿ ವಿವಾದಕ್ಕೆ ತೆರೆ ಎಳೆದರು.

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

4 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

4 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

24 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago