Featured

ಜೂ.15ರಿಂದ ಮಂಗಳೂರು-ಮುಂಬೈ ದೈನಂದಿನ ರೈಲು ಸಂಚಾರ ಪುನರಾರಂಭ – Vishwanews24

ಜೂ.15ರಿಂದ ಮಂಗಳೂರು-ಮುಂಬೈ ದೈನಂದಿನ ರೈಲು ಸಂಚಾರ ಪುನರಾರಂಭ – Vishwanews24

ಉಡುಪಿ, : ರೈಲು ನಂ.02620/02619 ಮಂಗಳೂರು ಸೆಂಟ್ರಲ್- ಲೋಕಮಾನ್ಯ ತಿಲಕ್ ಮುಂಬೈ- ಮಂಗಳೂರು ಸೆಂಟ್ರಲ್ ದೈನಂದಿನ ಹಬ್ಬದ ವಿಶೇಷ ರೈಲು ಸಂಚಾರವನ್ನು ದಕ್ಷಿಣ ರೈಲ್ವೆಯ ಸಹಯೋಗದೊಂದಿಗೆ ಜೂ.15ರಿಂದ ಪುನರಾರಂಭಿಸುವುದಾಗಿ ಕೊಂಕಣ ರೈಲ್ವೆ ಇಂದು ಪ್ರಕಟಿಸಿದೆ.

ಮಂಗಳೂರು ಸೆಂಟ್ರಲ್-ಮುಂಬಯಿ ದೈನಂದಿನ ಸೂಪರ್‌ಫಾಸ್ಟ್ ರೈಲು ಜೂ.15ರಿಂದ 30ರವರೆಗೆ ಪ್ರತಿದಿನ ಅಪರಾಹ್ನ 12:40ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಡಲಿದ್ದು, ಮರುದಿನ ಮುಂಜಾನೆ 6:35ಕ್ಕೆ ಮುಂಬೈ ಲೋಕಮಾನ್ಯ ತಿಲಕ್ ತಲುಪಲಿದೆ.

ಜೂ.16ರಿಂದ ಜುಲೈ1ರವರೆಗೆ ಪ್ರತಿದಿನ ಅಪರಾಹ್ನ 3:20ಕ್ಕೆ ಮುಂಬೈಯಿಂದ ಹೊರಡುವ ರೈಲು, ಮರುದಿನ ಬೆಳಗ್ಗೆ 10:10ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ. ಈ ರೈಲಿಗೆ ಮಂಗಳೂರಿನಿಂದ ಹೋಗುವಾಗ ಸುರತ್ಕಲ್, ಮುಲ್ಕಿ, ಉಡುಪಿ, ಕುಂದಾಪುರ, ಮೂಕಾಂಬಿಕಾ ರೋಡ್ ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟ, ಗೋಕರ್ಣ ರೋಡ್, ಅಂಕೋಲ, ಕಾರವಾರ, ಮಡಗಾಂವ್ ಜಂಕ್ಷನ್, ಕುಡಾಲ್, ರತ್ನಗಿರಿ, ಚಿಪ್ಳೂಣ್, ಪನ್ವೇಲ್ ಹಾಗೂ ಠಾಣೆ ನಿಲ್ದಾಣಗಳಲ್ಲಿ ನಿಲುಗಡೆ ಇರುತ್ತದೆ. ಮುಂಬಯಿಯಿಂದ ಬರುವಾಗ ಇವುಗಳೊಂದಿಗೆ ಮಂಗೋನ್ ಹಾಗೂ ಖೇಡ್ ನಿಲ್ದಾಣಗಳಲ್ಲಿ ಹೆಚ್ಚುವರಿ ನಿಲುಗಡೆ ಇರುತ್ತದೆ.

ಈ ರೈಲು ಒಟ್ಟು 22 ಎಲ್‌ಎಚ್‌ಬಿ ಕೋಚ್‌ಗಳನ್ನು ಒಳಗೊಂಡಿರುತ್ತದೆ. ಇವುಗಳಲ್ಲಿ ಎರಡು ಟೂ ಟಯರ್ ಎಸಿ, ಮೂರು ತ್ರಿಟಯರ್ ಎಸಿ, 10 ಸ್ಲೀಪರ್ ಕೋಚ್, ಐದು ಸೆಕೆಂಡ್ ಸೀಟಿಂಗ್ ಕೋಚ್, ಎರಡು ಎಸ್‌ಎಲ್‌ಆರ್ ಇರಲಿವೆ.

ಮೊದಲೇ ಶೀಟು ರಿಸರ್ವ್ ಮಾಡಿ ಈ ರೈಲಿನಲ್ಲಿ ಪ್ರಯಾಣಿಸಬೇಕಿದೆ. ಪ್ರಯಾಣಿಕರು ಕಡ್ಡಾಯ ಮಾಸ್ಕ್ ಧರಿಸಿ, ಸುರಕ್ಷತಾ ಅಂತರ ಕಾಪಾಡುವುದು ಸೇರಿದಂತೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಎಲ್ಲಾ ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಕೊಂಕಣ ರೈಲ್ವೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಗಿರೀಶ್ ಆರ್.ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

1 hour ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

8 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

8 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

8 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

10 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

10 hours ago