ಹೊಸದಿಲ್ಲಿ:ಕೋವಿಡ್ -19 ಎರಡನೇ ಅಲೆಯ ಹಿನ್ನೆಲೆಯಲ್ಲಿ ಎರಡು ತಿಂಗಳ ಹಿಂದೆ ಮುಚ್ಚಿದ ತಾಜ್ ಮಹಲ್ ಇತರ ಕೇಂದ್ರ ಸರಕಾರದಿಂದ ಸಂರಕ್ಷಿಸಲ್ಪಡುತ್ತಿರುವ ಸ್ಮಾರಕಗಳು ಜೂನ್ 16 ರಂದು ಮತ್ತೆ ತೆರೆಯಲಿವೆ ಎಂದು ಭಾರತೀಯ ಪುರಾತತ್ವ ಸಮೀಕ್ಷೆ (ಎಎಸ್‌ಐ) ತಿಳಿಸಿದೆ.
ಸಂದರ್ಶಕರು ಆನ್‌ಲೈನ್‌ನಲ್ಲಿ ಪ್ರವೇಶ ಟಿಕೆಟ್‌ಗಳನ್ನು ಕಾಯ್ದಿರಿಸಲು ಸಾಧ್ಯವಾಗುತ್ತದೆ ಹಾಗೂ ಯಾವುದೇ ಆಫ್‌ಲೈನ್ ಬುಕ್ಕಿಂಗ್ ಸೌಲಭ್ಯ ಲಭ್ಯವಿರುವುದಿಲ್ಲ ಎಂದು ಎಎಸ್‌ಐ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
“ಈಗಿನ ಪರಿಸ್ಥಿತಿಯನ್ನು ಪರಿಗಣಿಸಿ, ಎಲ್ಲಾ ಕೇಂದ್ರೀಕೃತ ಸಂರಕ್ಷಿತ ಸ್ಮಾರಕಗಳು / ತಾಣಗಳು ಹಾಗೂ ವಸ್ತುಸಂಗ್ರಹಾಲಯಗಳನ್ನು (ಎಎಸ್ಐ ಅಡಿಯಲ್ಲಿ) 16.06.2021 ರಿಂದ ತೆರೆಯಬೇಕೆಂದು ನಿರ್ಧರಿಸಲಾಗಿದೆ” ಎಂದು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಆದೇಶದಲ್ಲಿ ತಿಳಿಸಿದ್ದಾರೆ.
ಕೋವಿಡ್ -19 ರ ಎರಡನೇ ಅಲೆ ಕಾಣಿಸಿಕೊಂಡ ತಕ್ಷಣ ತಾಜ್ ಮಹಲ್, ಕೆಂಪು ಕೋಟೆ ಹಾಗೂ ಅಜಂತ ಗುಹೆಗಳು ಸೇರಿದಂತೆ ಎಲ್ಲಾ ಕೇಂದ್ರೀಕೃತ ಸಂರಕ್ಷಿತ ಸ್ಮಾರಕಗಳು ಹಾಗೂ ವಸ್ತು ಸಂಗ್ರಹಾಲಯಗಳನ್ನು ಎಪ್ರಿಲ್ 15 ರಂದು ಮುಚ್ಚಲು ಸರಕಾರ ಆದೇಶಿಸಿತ್ತು.
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…
ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…
ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…