Featured

ಜೂ. 25ಕ್ಕೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ – vishwanews24

ಜೂ. 25ಕ್ಕೆ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ

ನವದೆಹಲಿ : ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ಐಎಸ್‌ಎಸ್) ಕಳುಹಿಸುವ ಮಹತ್ವಾಕಾಂಕ್ಷೆಯ ‘ಆ್ಯಕ್ಸಿಯಂ-4’ ಮಿಷನ್ ಉಡಾವಣೆಗೆ ಜೂನ್ 25ರಂದು ದಿನಾಂಕ ನಿಗದಿಪಡಿಸಲಾಗಿದೆ ಎಂದು ನಾಸಾ ಮಂಗಳವಾರ ಪ್ರಕಟಿಸಿದೆ.

ಆ್ಯಕ್ಸಿಯಂ-4 ಮಿಷನ್ ಜೂನ್ 25 ರಂದು ಬೆಳಗಿನ ಜಾವ 2:31ಕ್ಕೆ ಫ್ಲೋರಿಡಾದಲ್ಲಿರುವ ನಾಸಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಸ್ಪೇಸ್‌ಎಕ್ಸ್ ನ ಫಾಲ್ಕನ್-9 ರಾಕೆಟ್ ಉಡಾವಣೆಗೊಳ್ಳಲಿದೆ ಎಂದು ಎಂದು ನಾಸಾ ತಿಳಿಸಿದೆ.

ಕಮಾಂಡರ್ ಪೆಗ್ಗಿ ವಿಟ್ಸನ್ ಅವರು, ಆ್ಯಕ್ಸಿಯಂ-4 ವಾಣಿಜ್ಯ ಕಾರ್ಯಾಚರಣೆಯ ನೇತೃತ್ವವಹಿಸಿದ್ದಾರೆ. ಶುಕ್ಲಾ ಮಿಷನ್ ಪೈಲಟ್ ಆಗಿ, ಹಂಗೇರಿಯನ್ ಗಗನಯಾತ್ರಿ ಟಿಬೋರ್ ಕಾಪು ಮತ್ತು ಪೋಲೆಂಡ್‌ನ ಸ್ಲಾವೋಸ್ಜ್ ಉಜ್ನಾನ್ಸ್ಕಿ ತಜ್ಞರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸ್ಪೇಸ್‌ಎಕ್ಸ್ ನ ಫಾಲ್ಕನ್ 9 ಉಡಾವಣಾ ವಾಹನದಲ್ಲಿ ತಾಂತ್ರಿಕ ಸಮಸ್ಯೆ ಹಿನ್ನೆಲೆ ಬಾಹ್ಯಾಕಾಶ ಯಾನ ಮುಂದೂಡಿಕೆಯಾಗಿದೆ. ಕಳೆದ ವಾರ ಉಡಾವಣಾ ಪ್ಯಾಡ್‌ನಲ್ಲಿ ಏಳು ಸೆಕೆಂಡುಗಳ ಬಿಸಿ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷೆಯ ಸಮಯದಲ್ಲಿ ಪ್ರೊಪಲ್ಷನ್ ಬೇಯಲ್ಲಿ LOX ಸೋರಿಕೆಯಾಗಿತ್ತು. ಈ ಕುರಿತು ಇಸ್ರೋ ತಂಡ ‘ಆ್ಯಕ್ಸಿಯಂ-4’ ಮತ್ತು ಸ್ಪೇಸ್ ಎಕ್ಸ್ ನ ತಜ್ಞರೊಂದಿಗೆ ಚರ್ಚೆ ನಡೆಸಿ, ಸೋರಿಕೆ ಸರಿಪಡಿಸಲು ಮತ್ತು ಉಡಾವಣೆಗೆ ತೆರವುಗೊಳಿಸುವ ಮೊದಲು ಅಗತ್ಯ ಮೌಲ್ಯೀಕರಣ ಪರೀಕ್ಷೆ ನಡೆಸಲು ನಿರ್ಧರಿಸಿತ್ತು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

2 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

2 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

2 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

2 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

3 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

3 days ago