Featured

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ

ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ ಜಾಗತಿಕ ಮಟ್ಟದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿರುವ ಶಾರುಖ್ ಖಾನ್ ಜೂನ್ 25ರಂದು ಮಂಗಳೂರಿಗೆ ಆಗಮಿಸಲಿದ್ದಾರೆ. ಕರಾವಳಿಯ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾದ ರೋಹನ್ ಕಾರ್ಪೊರೇಶನ್ ಆಯೋಜಿಸಿರುವ ‘ಆನ್ ಈವಿನಿಂಗ್ ವಿತ್ ಶಾರುಖ್ ಖಾನ್’ ಎಂಬ ಕಾರ್ಯಕ್ರಮದಲ್ಲಿ ಅವರು ವಿಶೇಷ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಮಂಗಳೂರಿನ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಸಂಜೆ 4 ಗಂಟೆಯಿಂದ ಪ್ರವೇಶ ಆರಂಭವಾಗಲಿದ್ದು, ವಿವಿಧ ಕ್ಷೇತ್ರಗಳ ಗಣ್ಯರು, ಉದ್ಯಮಿಗಳು, ಸಾರ್ವಜನಿಕ ಪ್ರತಿನಿಧಿಗಳು ಹಾಗೂ ಪೂರ್ವ ನೋಂದಣಿ ಮಾಡಿಕೊಂಡಿರುವ ಅತಿಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದನ್ನೂ ಓದಿ :

“ಭಾರತದ ಅತ್ಯಂತ ಜನಪ್ರಿಯ ಕಲಾವಿದರಲ್ಲಿ ಒಬ್ಬರಾದ ಶಾರುಖ್ ಖಾನ್ ಅವರನ್ನು ಮಂಗಳೂರಿನ ನೆಲದಲ್ಲಿ ಸ್ವಾಗತಿಸುವ ಅವಕಾಶ ದೊರೆತಿರುವುದು ನಮಗೆ ಹೆಮ್ಮೆಯ ವಿಷಯ. ಈ ಕಾರ್ಯಕ್ರಮವು ರೋಹನ್ ಕಾರ್ಪೊರೇಶನ್ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಕ್ಷಣವಾಗಿದ್ದು, ಭಾಗವಹಿಸುವ ಪ್ರತಿಯೊಬ್ಬರಿಗೂ ವಿಶಿಷ್ಟ ಅನುಭವವನ್ನು ನೀಡಲಿದೆ” ಎಂದು ರೋಹನ್ ಕಾರ್ಪೊರೇಶನ್ ಸಂಸ್ಥಾಪಕ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ರೋಹನ್ ಮೊಂತೇರೊ ಹೇಳಿದ್ದಾರೆ.

ಕಾರ್ಯಕ್ರಮದ ಸಿದ್ದತೆಗಳ ಕುರಿತು ಮಾಹಿತಿ ನೀಡಿದ ಸಂಸ್ಥೆಯ ನಿರ್ದೇಶಕ ಡಿಯಾನ್ ಮೊಂತೇರೊ, “ಇದು ಮಂಗಳೂರಿನಲ್ಲಿ ನಡೆಯಲಿರುವ ಅತಿದೊಡ್ಡ ಕಾರ್ಪೊರೇಟ್ ಕಾರ್ಯಕ್ರಮಗಳಲ್ಲಿ ಒಂದಾಗಲಿದೆ. ನಮ್ಮ ಸಂಸ್ಥೆಗೆ ಮತ್ತು ನಗರಕ್ಕೆ ಮಹತ್ವದ ಕ್ಷಣವಾಗಿರುವ ಈ ಕಾರ್ಯಕ್ರಮವು ಸುರಕ್ಷಿತವಾಗಿ ಹಾಗೂ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು ಮತ್ತು ಸಾರ್ವಜನಿಕರ ಸಹಕಾರ ಅಗತ್ಯ’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ :

ಕಾರ್ಯಕ್ರಮದಲ್ಲಿ ಭಾಗವಹಿಸಲು ಪೂರ್ವ ನೋಂದಣಿ ಕಡ್ಡಾಯವಾಗಿದ್ದು, ಅಧಿಕೃತವಾಗಿ ನೋಂದಾಯಿತ ಪಾಸ್ ಹೊಂದಿರುವವರಿಗೆ ಮಾತ್ರ ಪ್ರವೇಶ ಅವಕಾಶ ಕಲ್ಪಿಸಲಾಗುತ್ತದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.

ರೋಹನ್ ಕಾರ್ಪೊರೇಶನ್ ಕರಾವಳಿ ಕರ್ನಾಟಕದ ಪ್ರಮುಖ ರಿಯಲ್ ಎಸ್ಟೇಟ್ ಸಂಸ್ಥೆಗಳಲ್ಲಿ ಒಂದಾಗಿದ್ದು, ಗುಣಮಟ್ಟ, ವಿಶ್ವಾಸಾರ್ಹತೆ ಮತ್ತು ಗ್ರಾಹಕರ ವಿಶ್ವಾಸವನ್ನು ತನ್ನ ಪ್ರಮುಖ ಮೌಲ್ಯಗಳಾಗಿ ಹೊಂದಿದೆ. ಸಂಸ್ಥೆಯು ಹಲವು ವಸತಿ ಹಾಗೂ ವಾಣಿಜ್ಯ ಯೋಜನೆಗಳ ಮೂಲಕ ತನ್ನದೇ ಆದ ಗುರುತನ್ನು ನಿರ್ಮಿಸಿಕೊಂಡಿದೆ.

ಶಾರುಖ್ ಖಾನ್ ಅವರ ಮಂಗಳೂರು ಭೇಟಿ ಮಂಗಳೂರಿನ ಕಾರ್ಪೊರೇಟ್ ಹಾಗೂ ಸಾಮಾಜಿಕ ವಲಯದಲ್ಲಿ ವಿಶೇಷ ಗಮನ ಸೆಳೆಯುವ ನಿರೀಕ್ಷೆಯಿದೆ ಎಂದು ಪ್ರಕಟನೆ ತಿಳಿಸಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

22 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

22 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

23 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 day ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

1 day ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

1 day ago