ಮುಂಬೈ: ಜೆಟ್ ಏರ್‌ವೇಯ್ಸ್ ಸಿಬ್ಬಂದಿ ವಿಮಾನದೊಳಗಿನ ತಾಂತ್ರಿಕ ದೋಷದ ಕಾರಣ ಪ್ರಯಾಣಿಕರ ಮೂಗು, ಕಿವಿಯಲ್ಲಿ ರಕ್ತ ಸೋರಿಕೆಯಾಗಿದ್ದು, ಇನ್ನು ಕೆಲವರಿಗೆ ತಲೆನೋವು ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ಮುಂಬೈಯಿಂದ ಜೈಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರನ್ನು ಮುಂಬೈ ವಿಮಾನ ನಿಲ್ದಾಣ ಆಸ್ಪತ್ರೆಗೆ ದಾಖಲಿಸಲಾಗಿದೆ.
ಈ ವೇಳೆ ಹಾಜರಿದ್ದ ಸಿಬ್ಬಂದಿಯ ವಿರುದ್ಧ ವಿಮಾನ ಅಪಘಾತ ತನಿಖಾ ದಳ (ಎಎಐಬಿ) ತನಿಖೆ ಕೈಗೊಂಡಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಉಪನಿರ್ದೇಶಕ ಜನರಲ್ ಲಲಿತ್ ಗುಪ್ತಾ ತಿಳಿಸಿದ್ದಾರೆ.
ಘಟನೆ ವಿವರ:
ಜೆಟ್ ಏರ್‌ವೇಯ್ಸ್ 9W 697 ವಿಮಾನವು ಗುರುವಾರ ಮುಂಬೈಯಿಂದ ಜೈಪುರಕ್ಕೆ ಹೊರಟಿತ್ತು. ಇದರಲ್ಲಿ 166 ಮಂದಿ ಪ್ರಯಾಣಿಕರಿದ್ದರು.
ಈ ವೇಳೆ ವಿಮಾನ ಸಿಬ್ಬಂದಿ ಕ್ಯಾಬಿನ್ ಒತ್ತಡ ನಿರ್ವಹಿಸುವ ಸ್ವಿಚ್ ಹಾಕಲು ಮರೆತಿದ್ದಾರೆ. ಇದರಿಂದ ಆಮ್ಲಜನಕ ಮುಖವಾಡಗಳು ಸಿಗುವಲ್ಲಿ ವಿಳಂಬವಾಗಿದೆ. ಇದರ ಪರಿಣಾಮ 30 ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.
ಈಗಾಗಲೇ ಪರಿಸ್ಥಿತಿ ಸುಧಾರಿಸಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಕಿವಿ, ಮೂಗಿನಲ್ಲಿ ರಕ್ತಸೋರಿಕೆಯಾದವರಿಗೆ ಸಿಬ್ಬಂದಿ ಪ್ರಥಮ ಚಿಕಿತ್ಸೆ ಮಾಡಿದ್ದಾರೆ. ತುರ್ತಾಗಿ ತೆರಳಬೇಕಾದ ಪ್ರಯಾಣಿಕರಿಗೆ ಬೇರೊಂದು ವಿಮಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರಿಗಾದದ ಅನಾನುಕೂಲತೆಗೆ ಜೆಟ್ ಏರ್‌ವೇಯ್ಸ್ ಕ್ಷಮೆಯಾಚಿಸುತ್ತದೆ ಎಂದು ಜೆಟ್‌ಏರ್ ವೇಯ್ಸ್ ಹೇಳಿಕೆ ಬಿಡುಗಡೆ ಮಾಡಿದೆ.
ಈ ಸಂಬಂಧ ಸತೀಶ್ ನಾಯರ್ ಎಂಬುವರು ಮೂಗಿನಲ್ಲಿ ರಕ್ತಸೋರಿಕೆಯಾದರೂ ವಿಮಾನದ ಸಿಬ್ಬಂದಿ ಸಹಾಯಕ್ಕೆ ಬರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…