desha

ಜೆಟ್‌ ಏರ್‌ವೇಯ್ಸ್‌ನಲ್ಲಿ ತಾಂತ್ರಿಕ ದೋಷ : ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತ ; ಪ್ರಯಾಣಿಕರು ಕಂಗಾಲು!

ಮುಂಬೈ: ಜೆಟ್‌ ಏರ್‌ವೇಯ್ಸ್‌ ಸಿಬ್ಬಂದಿ ವಿಮಾನದೊಳಗಿನ ತಾಂತ್ರಿಕ ದೋಷದ ಕಾರಣ ಪ್ರಯಾಣಿಕರ ಮೂಗು, ಕಿವಿಯಲ್ಲಿ ರಕ್ತ ಸೋರಿಕೆಯಾಗಿದ್ದು, ಇನ್ನು ಕೆಲವರಿಗೆ ತಲೆನೋವು ಕಾಣಿಸಿಕೊಂಡು ಆತಂಕದ ವಾತಾವರಣ ಸೃಷ್ಟಿಯಾಗಿತ್ತು.

ಮುಂಬೈಯಿಂದ ಜೈಪುರಕ್ಕೆ ಹೊರಟಿದ್ದ ವಿಮಾನದಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರನ್ನು ಮುಂಬೈ ವಿಮಾನ ನಿಲ್ದಾಣ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವೇಳೆ ಹಾಜರಿದ್ದ ಸಿಬ್ಬಂದಿಯ ವಿರುದ್ಧ ವಿಮಾನ ಅಪಘಾತ ತನಿಖಾ ದಳ (ಎಎಐಬಿ) ತನಿಖೆ ಕೈಗೊಂಡಿದೆ ಎಂದು ನಾಗರಿಕ ವಿಮಾನಯಾನ ನಿರ್ದೇಶನಾಲಯದ ಉಪನಿರ್ದೇಶಕ ಜನರಲ್‌ ಲಲಿತ್‌ ಗುಪ್ತಾ ತಿಳಿಸಿದ್ದಾರೆ.

ಘಟನೆ ವಿವರ:
ಜೆಟ್‌ ಏರ್‌ವೇಯ್ಸ್‌ 9W 697 ವಿಮಾನವು ಗುರುವಾರ ಮುಂಬೈಯಿಂದ ಜೈಪುರಕ್ಕೆ ಹೊರಟಿತ್ತು. ಇದರಲ್ಲಿ 166 ಮಂದಿ ಪ್ರಯಾಣಿಕರಿದ್ದರು.

ಈ ವೇಳೆ ವಿಮಾನ ಸಿಬ್ಬಂದಿ ಕ್ಯಾಬಿನ್ ಒತ್ತಡ ನಿರ್ವಹಿಸುವ ಸ್ವಿಚ್ ಹಾಕಲು ಮರೆತಿದ್ದಾರೆ. ಇದರಿಂದ ಆಮ್ಲಜನಕ ಮುಖವಾಡಗಳು ಸಿಗುವಲ್ಲಿ ವಿಳಂಬವಾಗಿದೆ. ಇದರ ಪರಿಣಾಮ 30 ಪ್ರಯಾಣಿಕರ ಕಿವಿ, ಮೂಗಿನಲ್ಲಿ ರಕ್ತ ಕಾಣಿಸಿಕೊಂಡಿದೆ.

ಈಗಾಗಲೇ ಪರಿಸ್ಥಿತಿ ಸುಧಾರಿಸಿದೆ. ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಕಿವಿ, ಮೂಗಿನಲ್ಲಿ ರಕ್ತಸೋರಿಕೆಯಾದವರಿಗೆ ಸಿಬ್ಬಂದಿ ಪ್ರಥಮ ಚಿಕಿತ್ಸೆ ಮಾಡಿದ್ದಾರೆ. ತುರ್ತಾಗಿ ತೆರಳಬೇಕಾದ ಪ್ರಯಾಣಿಕರಿಗೆ ಬೇರೊಂದು ವಿಮಾನದ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರಿಗಾದದ ಅನಾನುಕೂಲತೆಗೆ ಜೆಟ್‌ ಏರ್‌ವೇಯ್ಸ್ ಕ್ಷಮೆಯಾಚಿಸುತ್ತದೆ ಎಂದು ಜೆಟ್‌ಏರ್‌ ವೇಯ್ಸ್ ಹೇಳಿಕೆ ಬಿಡುಗಡೆ ಮಾಡಿದೆ.

ಈ ಸಂಬಂಧ ಸತೀಶ್ ನಾಯರ್ ಎಂಬುವರು ಮೂಗಿನಲ್ಲಿ ರಕ್ತಸೋರಿಕೆಯಾದರೂ ವಿಮಾನದ ಸಿಬ್ಬಂದಿ ಸಹಾಯಕ್ಕೆ ಬರಲಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

17 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

17 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

18 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

21 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

21 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago