Featured

ಜೆಡಿಎಸ್‌ಗೆ ಐದು ವರ್ಷದ ಅಧಿಕಾರ ಕೊಟ್ಟರೆ ಸಂಪೂರ್ಣ ಬಡತನ ನಿವಾರಣೆಗೆ ಬದ್ಧನಾಗುವೆ : ಎಚ್‌.ಡಿ.ಕುಮಾರಸ್ವಾಮಿ ಭರವಸೆ – Vishwanews24

ಜೆಡಿಎಸ್‌ಗೆ ಐದು ವರ್ಷದ ಅಧಿಕಾರ ಕೊಟ್ಟರೇ ಸಂಪೂರ್ಣ ಬಡತನ ನಿವಾರಣೆಗೆ ಬದ್ಧನಾಗುವೆ : ಎಚ್‌.ಡಿ.ಕುಮಾರಸ್ವಾಮಿ ಭರವಸೆ

ರಾಮನಗರ : ರಾಜ್ಯದಲ್ಲಿ ಶೇ.70 ರಷ್ಟು ಬಡತನವಿದ್ದು, ಶೇ.30 ರಷ್ಟು ಜನರು ಮಾತ್ರ ಆರ್ಥಿಕವಾಗಿ ಸ್ಥಿತಿವಂತರಿದ್ದಾರೆ. ಜೆಡಿಎಸ್‌ಗೆ ಐದು ವರ್ಷದ ಅಧಿಕಾರ ಕೊಟ್ಟರೇ ಸಂಪೂರ್ಣ ಬಡತನ ನಿವಾರಣೆಗೆ ಬದ್ಧನಾಗುವೆ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.

ತಾಲೂಕಿನ ಕಸಬಾ ಹೋಬಳಿ ಕೆಂಪೇಗೌಡನದೊಡ್ಡಿ ಗ್ರಾಮದಲ್ಲಿ ಹರೀಸಂದ್ರ ಗ್ರಾಪಂ ವ್ಯಾಪ್ತಿಯ ನಾನಾ ಗ್ರಾಮಗಳ 110 ಜನ ಫಲಾನುಭವಿಗಳಿಗೆ ಇ-ಖಾತಾ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ರಾಮನಗರ ಕ್ಷೇತ್ರದ ಜನರು ಕೊಟ್ಟ ಶಕ್ತಿಯನ್ನು ರಾಜ್ಯದಲ್ಲಿ ಲಕ್ಷಾಂತರ ಜನರಿಗೆ ಧಾರೆ ಎರೆದಿದ್ದೇನೆ. ನನ್ನ ಮತ್ತು ಕ್ಷೇತ್ರದ ಜನರ ಸಂಬಂಧ ತಾಯಿ ಮಗನ ಸಂಬಂಧ. ನನ್ನ ಜೀವನದ ಸವಾಲು ಪಂಚರತ್ನ ಯೋಜನೆಯಾಗಿದೆ. ಐದು ವರ್ಷದ ಅಧಿಕಾರ ಸಿಕ್ಕಿದರೆ ಬಡವರು ಬೇರೆಯವರ ಬಳಿ ಕೈಚಾಚದಂತೆ ನೋಡಿಕೊಳ್ಳುವುದಾಗಿ, ನಾನು ಬದುಕಿರುವವರೆಗೆ ರೈತರು ಮತ್ತು ಬಡವರಿಗಾಗಿ ಕೆಲಸ ಮಾಡುತ್ತಿದ್ದೇನೆ ಎಂದರು.

ಇದನ್ನೂ ಓದಿ : ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ಕಾಂಗ್ರೆಸ್ ಜನತೆಗೆ ಬಗೆದ ಘೋರ ದ್ರೋಹವನ್ನು ಪುಷ್ಠೀಕರಿಸಿದೆ: ಜಿಲ್ಲಾ ಬಿಜೆಪಿ – Vishwanews24 

ಮುಂದಿನ 50 ವರ್ಷಗಳ ದೂರ ದೃಷ್ಠಿಯನ್ನು ಗಮನದಲ್ಲಿಟ್ಟುಕೊಂಡು ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದ್ದೇನೆ. ಬೇರೆ ಪಕ್ಷದವರು ನನಗೊಂದು ಅವಕಾಶ ಕೊಡಿ ಆರ್ಶೀವದಿಸಿ ಎಂದು ಹೇಳಿದ್ದಾರೆ. ಅವರು ಜನರ ಕಷ್ಟಗಳಿಗೆ ಸ್ಪಂದಿಸಿದ್ದಾರೆಯೇ? ಬಡವರ ಜಮೀನನ್ನು ಕಬಳಿಸಿ ಶಿಕ್ಷಣ ಸಂಸ್ಥೆ ಕಟ್ಟಿಕೊಂಡಿದ್ದಾರೆ. ಕನಕಪುರದಲ್ಲಿ ಗಣಿಗಾರಿಕೆ ಮಾಡಿ ಬಹಳಷ್ಟು ಜನರನ್ನು ಒಕ್ಕಲೆಬ್ಬಿಸಿದ್ದಾರೆ. ಇದೀಗ ಮುಖ್ಯಮಂತ್ರಿ ಆಗುವ ಆಸೆಯೊಂದಿಗೆ ಡ್ರಾಮಾ ಮಾಡುತ್ತಿದ್ದಾರೆ. ಅಂತಹವರ ಮಾತಿ ಮರುಳಾಗದಿರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರ ಹೆಸರೇಳದೆ ವಾಗ್ದಾಳಿ ನಡೆಸಿದರು.

ಹರೀಸಂದ್ರ ಗ್ರಾಪಂ ಅಧ್ಯಕ್ಷೆ ಆಶಾ ಮಂಚೇಗೌಡ, ಉಪಾಧ್ಯಕ್ಷೆ ವಿಜಯಲಕ್ಷ್ಮೀ, ತಾಲ್ಲೂಕು ಜೆಡಿಎಸ್‌ ಅಧ್ಯಕ್ಷ ರಾಜಶೇಖರ್‌, ಜೆಡಿಎಸ್‌ ವಕ್ತಾರ ಬಿ.ಉಮೇಶ್‌, ಮುಖಂಡರಾದ ಮೋಹನರಾಮ್‌, ಕೃಷ್ಣೇಗೌಡ, ರಾಜಣ್ಣ, ಜಯಕುಮಾರ್‌, ರವಿ, ಸುರೇಶ್‌, ಮಲ್ಲಪ್ಪ ಮುಂತಾದವರು ಕಾರ್ಯಕ್ರಮದಲ್ಲಿ ಇದ್ದರು.

ಇದನ್ನೂ ಓದಿ : ಶಿವಮೊಗ್ಗ: ಕಾಲೇಜು ಮುಂದೆ ಅಮಲಿನಲ್ಲಿ ವಿದ್ಯಾರ್ಥಿಗಳ ತೂರಾಟ ; ವಿಡಿಯೋ ವೈರಲ್ – Vishwanews24 

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

5 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

6 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

6 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

6 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

6 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

6 hours ago