ಮೈಸೂರು: ಸಂದೇಶ್ ನಾಗರಾಜ್ ಕುಟುಂಬಕ್ಕೆ ಜೆಡಿಎಸ್ ಯಾವುದೇ ಮೋಸ ಮಾಡಿಲ್ಲ. ಅವರು ಯಾಕೆ ನಮ್ಮ ಪಕ್ಷವನ್ನು ದೂರುತ್ತಿದ್ದಾರೆ ಗೊತ್ತಿಲ್ಲ ಎಂದು ಜೆಡಿಎಸ್‌ನ ಮಾಜಿ ಸಚಿವ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.
ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಯಾರೂ ಅನಿವಾರ್ಯವಲ್ಲ. ಜೆಡಿಎಸ್ ನಮಗೆ ಅನಿವಾರ್ಯ. ಹಾಗೆಯೇ ನಮಗೇ ಹೆಚ್.ಡಿ ದೇವೆಗೌಡರೇ ಯಾವತ್ತಿದ್ದರೂ ನಾಯಕ. ನೀವು ನೆನಪಿಟ್ಟುಕೊಳ್ಳಿ ಪಕ್ಷದ ಕಾರ್ಯಕರ್ತರ ದುಡಿಮೆಯಿಂದ ನೀವು ಶಾಸಕರಾಗಿರುವುದು. ನಿಮ್ಮ ಅವಧಿ ಮುಗಿಯೋವರೆಗೂ ನೀವು ಪಕ್ಷದ ಪರವಾಗಿ ಇರಿ ಎಂದು ಜಿ.ಟಿ ದೇವೆಗೌಡರಿಗೆ ಸಾರಾ ಮಹೇಶ್ ತಿರುಗೇಟು ಕೊಟ್ಟಿದ್ದಾರೆ.
ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯರು ಮತದಾನದಿಂದ ವಂಚಿತರಾಗಿದ್ದಾರೆ ನಿಜ. ಆದರೆ ಕೆಲ ವ್ಯಕ್ತಿಗಳಿಂದ ನಮಗೆ ಗೆಲುವು ಕಷ್ಠ ಆಯಿತು ಎಂಬುವುದು ಸುಳ್ಳು. ಜೆಡಿಎಸ್ ಶಕ್ತಿ ಹಳೆ ಮೈಸೂರು ಭಾಗದಲ್ಲಿ ಇನ್ನೂ ಇದೇ. ಮುಂದಿನ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಂದ ದೂರ ಇರಬೇಕೋ ಅಥವಾ ಯಾರ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂಬುವುದು ಹೆಚ್.ಡಿ ದೇವೇಗೌಡ ಮಾಡುತ್ತಾರೆ. ಆದರೆ ಎರಡು ಪಕ್ಷಗಳಿಂದ ದೂರ ಇರಬೇಕು ಎಂಬುವುದು ನನ್ನ ವೈಯುಕ್ತಿಕ ತೀರ್ಮಾನ ಎಂದು ತಿಳಿಸಿದರು.
ವಿಧಾನ ಪರಿಷತ್‌ನಲ್ಲಿ ಗೆದ್ದ ಅಭ್ಯರ್ಥಿಯು ಜೆಡಿಎಸ್ ವರಿಷ್ಠಿಗೆ ವರದಿ ಕೊಡುತ್ತಾರೆ. ಬಳಿಕ ವರದಿಯ ಅನುಸಾರವಾಗಿ ನಮ್ಮ ಪಕ್ಷದ ಶಾಸಕರಿಂದಲೇ ಆದ ತೊಂದರೆ ಬಗ್ಗೆಯೂ ವಿವರಿಸಿ ಜೆಡಿಎಸ್ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ಸಾರಾ ಮಹೇಶ್ ಹೇಳಿದ್ದಾರೆ
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…