Featured

ಜೆಡಿಎಸ್‌ಗೆ ಯಾರೂ ಅನಿವಾರ್ಯವಲ್ಲ, ಜೆಡಿಎಸ್ ನಮಗೆ ಅನಿವಾರ್ಯ : ಸಾರಾ ಮಹೇಶ್ – Vishwanews24

ಜೆಡಿಎಸ್‌ಗೆ ಯಾರೂ ಅನಿವಾರ್ಯವಲ್ಲ. ಜೆಡಿಎಸ್ ನಮಗೆ ಅನಿವಾರ್ಯ : ಸಾರಾ ಮಹೇಶ್ – Vishwanews24

ಮೈಸೂರು: ಸಂದೇಶ್ ನಾಗರಾಜ್ ಕುಟುಂಬಕ್ಕೆ ಜೆಡಿಎಸ್ ಯಾವುದೇ ಮೋಸ ಮಾಡಿಲ್ಲ. ಅವರು ಯಾಕೆ ನಮ್ಮ ಪಕ್ಷವನ್ನು ದೂರುತ್ತಿದ್ದಾರೆ ಗೊತ್ತಿಲ್ಲ ಎಂದು ಜೆಡಿಎಸ್‌ನ ಮಾಜಿ ಸಚಿವ ಸಾರಾ ಮಹೇಶ್ ವಾಗ್ದಾಳಿ ನಡೆಸಿದ್ದಾರೆ.

ಮೈಸೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್‌ಗೆ ಯಾರೂ ಅನಿವಾರ್ಯವಲ್ಲ. ಜೆಡಿಎಸ್ ನಮಗೆ ಅನಿವಾರ್ಯ. ಹಾಗೆಯೇ ನಮಗೇ ಹೆಚ್.ಡಿ ದೇವೆಗೌಡರೇ ಯಾವತ್ತಿದ್ದರೂ ನಾಯಕ. ನೀವು ನೆನಪಿಟ್ಟುಕೊಳ್ಳಿ ಪಕ್ಷದ ಕಾರ್ಯಕರ್ತರ ದುಡಿಮೆಯಿಂದ ನೀವು ಶಾಸಕರಾಗಿರುವುದು. ನಿಮ್ಮ ಅವಧಿ ಮುಗಿಯೋವರೆಗೂ ನೀವು ಪಕ್ಷದ ಪರವಾಗಿ ಇರಿ ಎಂದು ಜಿ.ಟಿ ದೇವೆಗೌಡರಿಗೆ ಸಾರಾ ಮಹೇಶ್ ತಿರುಗೇಟು ಕೊಟ್ಟಿದ್ದಾರೆ.

ತಾಲೂಕು ಪಂಚಾಯತ್, ಜಿಲ್ಲಾ ಪಂಚಾಯತ್ ಸದಸ್ಯರು ಮತದಾನದಿಂದ ವಂಚಿತರಾಗಿದ್ದಾರೆ ನಿಜ. ಆದರೆ ಕೆಲ ವ್ಯಕ್ತಿಗಳಿಂದ ನಮಗೆ ಗೆಲುವು ಕಷ್ಠ ಆಯಿತು ಎಂಬುವುದು ಸುಳ್ಳು. ಜೆಡಿಎಸ್ ಶಕ್ತಿ ಹಳೆ ಮೈಸೂರು ಭಾಗದಲ್ಲಿ ಇನ್ನೂ ಇದೇ. ಮುಂದಿನ ಚುನಾವಣೆಯಲ್ಲಿ ಎರಡು ರಾಷ್ಟ್ರೀಯ ಪಕ್ಷಗಳಿಂದ ದೂರ ಇರಬೇಕೋ ಅಥವಾ ಯಾರ ಜೊತೆ ಮೈತ್ರಿ ಮಾಡಿಕೊಳ್ಳಬೇಕು ಎಂಬುವುದು ಹೆಚ್.ಡಿ ದೇವೇಗೌಡ ಮಾಡುತ್ತಾರೆ. ಆದರೆ ಎರಡು ಪಕ್ಷಗಳಿಂದ ದೂರ ಇರಬೇಕು ಎಂಬುವುದು ನನ್ನ ವೈಯುಕ್ತಿಕ ತೀರ್ಮಾನ ಎಂದು ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಗೆದ್ದ ಅಭ್ಯರ್ಥಿಯು ಜೆಡಿಎಸ್ ವರಿಷ್ಠಿಗೆ ವರದಿ ಕೊಡುತ್ತಾರೆ. ಬಳಿಕ ವರದಿಯ ಅನುಸಾರವಾಗಿ ನಮ್ಮ ಪಕ್ಷದ ಶಾಸಕರಿಂದಲೇ ಆದ ತೊಂದರೆ ಬಗ್ಗೆಯೂ ವಿವರಿಸಿ ಜೆಡಿಎಸ್ ವರಿಷ್ಠರು ಕ್ರಮ ಕೈಗೊಳ್ಳುತ್ತಾರೆ ಎಂದು ಸಾರಾ ಮಹೇಶ್ ಹೇಳಿದ್ದಾರೆ

Vishwa News 24

Recent Posts

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

2 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

2 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

21 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

23 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

23 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

23 hours ago