Featured

ಜೆಡಿಎಸ್‌‌ ಪಕ್ಷ ತೊರೆದು ಕಾಂಗ್ರೆಸ್‌ ಸೇರುವ ಬಗ್ಗೆ ಸುಳಿವು ನೀಡಿದ ಶಾಸಕ ಜಿ.ಟಿ ದೇವೇಗೌಡ -Vishwanews24

ಜೆಡಿಎಸ್‌‌ ಪಕ್ಷ ತೊರೆದು ಕಾಂಗ್ರೆಸ್‌ ಸೇರುವ ಬಗ್ಗೆ ಸುಳಿವು ನೀಡಿದ ಶಾಸಕ ಜಿ.ಟಿ ದೇವೇಗೌಡ -Vishwanews24

ಮೈಸೂರು : ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ ದೇವೇಗೌಡ ಅವರು ಜೆಡಿಎಸ್‌‌ ಪಕ್ಷ ತೊರೆದು ಕಾಂಗ್ರೆಸ್‌ ಸೇರುವ ಬಗ್ಗೆ ಸುಳಿವು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ಕಡೆಗೆ ಹೋಗಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ಕಾಂಗ್ರೆಸ್‌ ಸೇರಿದರೆ ನಾನು ಹಾಗೂ ನನ್ನ ಮಗ ಜಿ.ಡಿ ಹರೀಶ್‌‌ ಗೌಡನಿಗೆ ಟಿಕೆಟ್‌ ನೀಡಬೇಕಾಗುತ್ತದೆ ಎಂದು ತಿಳಿಸಿದ್ದೇನೆ. ನಾನು ಪಕ್ಷಕ್ಕೆ ಸೇರಿದ್ದಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ತಾನು ಮತ್ತೆ ಸ್ಪರ್ಧಿಸುವುದಿಲ್ಲ ಎಂದು ಸಿ‌ದ್ದರಾಮಯ್ಯ ಅವರು ಹೇಳಿದ್ದಾರೆ” ಎಂದಿದ್ದಾರೆ.

“ಜೆಡಿಎಸ್‌ ವರಿಷ್ಠ ಹೆಚ್‌.ಡಿ ದೇವೇಗೌಡ ಅವರನ್ನು ಇತ್ತೀಚೆಗೆ ಭೇಟಿಯಾಗಿ ಪಕ್ಷ ತೊರೆಯುವ ಬಗ್ಗೆ ಹೇಳಿದ್ದೇನೆ. ಈ ವೇಳೆ ಅವರು ತಮ್ಮ ಜೊತೆ ಇರುವಂತೆ ಕೋರಿದರು. ಆಗದು ಎಂದು ನಾನು ಕ್ಷಮೆ ಕೇಳಿದೆ. ಈ ಬಗ್ಗೆ ಡಿ.ಕೆ ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಅವರೊಂದಿಗೆ ಮಾತನಾಡಿದ್ದೇನೆ ಎಂದು ತಿಳಿಸಿದೆ” ಎಂದು ಹೇಳಿದ್ದಾರೆ.

“ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಹುಣಸೂರು ಕ್ಷೇತ್ರದಿಂದ ನನ್ನ ಮಗ ಹರೀಶ್‌ ಗೌಡನಿಗೆ ಟಿಕೆಟ್‌ ನೀಡಲಿಲ್ಲ. ಎಂಡಿಸಿಸಿ ಬ್ಯಾಂಕ್‌ ಅಧ್ಯಕ್ಷನಾಗಿ ಆತ ಭೇಟಿ ಮಾಡಿದ ಸಂದರ್ಭ ಮಾಜಿ ಸಿಎಂ ಹೆಚ್‌.ಡಿ ಕುಮಾರಸ್ವಾಮಿ ಅವರು ಸರಿಯಾದ ಸ್ಪಂದಿಸಿಲ್ಲ. ನನಗೆ ಪ್ರತಿ ಹಂತದಲ್ಲೂ ಅವಮಾನ ಮಾಡಿದ್ದಾರೆ” ಎಂದಿದ್ದಾರೆ.

Vishwa News 24

Recent Posts

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ -vishwanews24

ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…

4 hours ago

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

12 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

12 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

12 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

13 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

13 hours ago