Featured

ಜೆಡಿಎಸ್‌ ಸ್ವಾಭಿಮಾನಿ ಕನ್ನಡಿಗರ ಪಕ್ಷ,  ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ : ಕುಮಾರಸ್ವಾಮಿ -Vishwanews24

ಜೆಡಿಎಸ್‌ ಸ್ವಾಭಿಮಾನಿ ಕನ್ನಡಿಗರ ಪಕ್ಷ,  ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ : ಕುಮಾರಸ್ವಾಮಿ -Vishwanews24

ಜೆಡಿಎಸ್ ಪಕ್ಷವನ್ನು ಯಾವುದೇ ಪಕ್ಷಗಳ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ..

ನಾನು ಬದುಕಿರುವವರೆಗೂ ಜೆಡಿಎಸ್ ಪಕ್ಷವನ್ನು ಬೇರೆ ಪಕ್ಷದೊಂದಿಗೆ ವಿಲೀನ ಇಲ್ಲ..

ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗಲಿದೆ’ ಎಂಬ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಅವರ ಹೇಳಿಕೆ ಜೆಡಿಎಸ್‌ ಪಕ್ಷವು ಬಿಜೆಪಿಯಲ್ಲಿ ವಿಲೀನಗೊಳ್ಳುವುದೇ ಎಂಬ ಚರ್ಚೆಗೆ ನಾಂದಿ ಹಾಡಿದೆ.

ಎಚ್‌.ಡಿ.ಕುಮಾರಸ್ವಾಮಿ ಅವರು  ಈ ಸಾಧ್ಯತೆಯನ್ನು ಸ್ಪಷ್ಟವಾಗಿ ಅಲ್ಲಗಳೆದಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಪಕ್ಷವನ್ನು ಯಾವುದೇ ಪಕ್ಷಗಳ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ. ನಾನು ಬದುಕಿರುವವರೆಗೂ ಜೆಡಿಎಸ್ ಪಕ್ಷವನ್ನು ಬೇರೆ ಪಕ್ಷದೊಂದಿಗೆ ವಿಲೀನ ಇಲ್ಲ ಎಂದು ಹೇಳಿದರು.

ಕಳೆದ 10 ವರ್ಷಗಳಿಂದ ವಿರೋಧ ಪಕ್ಷದಲ್ಲಿ ಕೆಲಸ ಮಾಡಿದ್ದೇವೆ. ದೇವೇಗೌಡರು ಸಹ 60 ವರ್ಷದ ರಾಜಕಾರಣದಲ್ಲಿ ವೈಯಕ್ತಿಕವಾಗಿ ಹೋರಾಟ ಮಾಡಿ ಜೆಡಿಎಸ್ ಪಕ್ಷವನ್ನು ಕಟ್ಟಿದ್ದಾರೆ. ಅಧಿಕಾರ ಹಿಡಿಯಲು ಬೇರೆ ಪಕ್ಷದ ಜೊತೆ ವಿಲೀನ ಮಾಡುವ ಪ್ರಶ್ನೆಯೇ ಇಲ್ಲ ಎಂದರು.

ಇದೇ ವಿಚಾರ ಕುರಿತು ಸರಣಿ ಟ್ವೀಟ್‌ ಮಾಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ‘ಜೆಡಿಎಸ್‌ ಸ್ವಾಭಿಮಾನಿ ಕನ್ನಡಿಗರ ಪಕ್ಷ. ಎಂದಿಗೂ ವಿಲೀನದ ಆಲೋಚನೆ ಮಾಡುವುದಿಲ್ಲ. ಅಗತ್ಯವಿದ್ದಾಗ ವಿಷಯಾಧಾರಿತವಾಗಿ ಬಿಜೆಪಿ ಜತೆ ವಿಶ್ವಾಸಪೂರ್ವಕವಾಗಿ ನಡೆಯಬಹುದಷ್ಟೆ’ ಎಂದು ಹೇಳಿದ್ದಾರೆ.

‘ಜೆಡಿಎಸ್‌ ಬಿಜೆಪಿಯ ‘ಬಿ ಟೀಂ’ ಎಂದು ಕಾಂಗ್ರೆಸ್‌ ಮುಖಂಡರು ಆರೋಪಿಸಿದ್ದರು. ಆ ಬಳಿಕ ನಮ್ಮ ಮನೆ ಬಾಗಿಲಿಗೆ ಬಂದು ಸಮ್ಮಿಶ್ರ ಸರ್ಕಾರ ಮಾಡಿದರು. ಕಾಂಗ್ರೆಸ್‌ ಆರೋಪಿಸುವಂತೆ ಒಳ ಒಪ್ಪಂದವೇನೂ ಇಲ್ಲ. ವಿಷಯಾಧಾರಿತ ಹೊಂದಾಣಿಕೆ ಮಾತ್ರ ಸಾಧ್ಯ’ ಎಂದು ತಿಳಿಸಿದ್ದಾರೆ.

 

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago