‘ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ರಾಜ್ಯದ ಜನರಿಗೆ ಉಚಿತ ವೈದ್ಯಕೀಯ ಸೇವೆ : ಕುಮಾರಸ್ವಾಮಿ – Vishwanews24

Featured, ರಾಜ್ಯ ನ್ಯೂಸ್

‘ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ರಾಜ್ಯದ ಜನರಿಗೆ ಉಚಿತ ವೈದ್ಯಕೀಯ ಸೇವೆ : ಕುಮಾರಸ್ವಾಮಿ

ಮೈಸೂರು : ‘ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ರಾಜ್ಯದ ಜನರಿಗೆ ಉಚಿತ ವೈದ್ಯಕೀಯ ಸೇವೆ ನೀಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಘೋಷಣೆ ಮಾಡಿದ್ದಾರೆ.

ಮೈಸೂರು ತಾಲೂಕಿನ ಉತ್ತನಹಳ್ಳಿ ಬಳಿ ಜೆಡಿಎಸ್ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭ ಕಾರ್ಯಕ್ರಮದಲ್ಲಿ ಕುಮಾರಸ್ವಾಮಿ ಮಾತನಾಡಿದರು.’ಜೆಡಿಎಸ್’ ಅಧಿಕಾರಕ್ಕೆ ಬಂದ್ರೆ ರಾಜ್ಯದ ಜನರ ಆರೋಗ್ಯ ವೆಚ್ಚವನ್ನ ನಾವೇ ಭರಿಸುತ್ತೇವೆ, ಈ ಬಗ್ಗೆ ಕೂಡ ನಿರ್ಧರಿಸಲಾಗಿದೆ ಎಂದು ಮಾಜಿ ಸಿಎಂ ಘೋಷಣೆ ಮಾಡಿದ್ದಾರೆ.

ಅದೇ ರೀತಿ ಕಿಡ್ನಿ ಡಯಾಲಿಸಿಸ್ ಕೇಂದ್ರ ಸ್ಥಾಪನೆ ಮಾಡುತ್ತೇವೆ, ಬಡವರ ಮಕ್ಕಳಿಗೆ ಶ್ರೀಮಂತರ ಮಕ್ಕಳ ಹಾಗೆ ಸಮಾನವಾದ ಶಿಕ್ಷಣ ನೀಡುತ್ತೇವೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಮುಸ್ಲಿಮರ ಮೀಸಲಾತಿ ರದ್ದು – ಬಿಜೆಪಿಯಿಂದ ದ್ವೇಷದ ರಾಜಕಾರಣ: ಸಿದ್ದರಾಮಯ್ಯ ಆಕ್ರೋಶ – Vishwanews24

Leave a Reply