ಮೈಸೂರು, : ಜೆಡಿಎಸ್ ರಾಜ್ಯಾಧ್ಯಕ್ಷಗಿರಿಯನ್ನೇ ಮಾಡಲಾಗದೆ ರಾಜೀನಾಮೆ ನೀಡಿರುವ ಎಚ್.ವಿಶ್ವನಾಥ್ ನಮ್ಮ ಬಗ್ಗೆ ಏನು ಮಾತನಾಡುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ
ಮೈತ್ರಿ ಸರಕಾರವನ್ನು ಹೊಂದಾಣಿಕೆಯಾಗಿ ಕೊಂಡೊಯ್ಯುವಲ್ಲಿ ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಸಿಎಂ ಎಚ್.ಡಿ.ಕುಮಾರಸ್ವಾಮಿ ವಿಫಲರಾಗಿದ್ದಾರೆ ಎಂದು ಎಚ್.ವಿಶ್ವನಾಥ್ ಬುಧವಾರ ದಿಲ್ಲಿಯಲ್ಲಿ ನೀಡಿದ್ದ ಹೇಳಿಕೆ ಕುರಿತಂತೆ ಇಂದು ಮಾಧ್ಯಮದವರ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.
ಜೆಡಿಎಸ್ ಅಧ್ಯಕ್ಷಗಿರಿಯನ್ನೆ ಮಾಡಲಾಗದವರು ನಮ್ಮ ಬಗ್ಗೆ ಏನು ಮಾತನಾಡುವುದು. ಅಧ್ಯಕ್ಷರಾಗಿ ಎಷ್ಟು ದಿನ ಆಯ್ತು, ಇನ್ನೂ 6 ತಿಂಗಳಾಗಿಲ್ಲ, ಆಗಲೇ ಮೂರು ಬಾರಿ ರಾಜೀನಾಮೆ ನೀಡಿದ್ದಾರೆ. ಇನ್ನು ನಮ್ಮ ಬಗ್ಗೆ ಏನು ಮಾತನಾಡುವುದು ಎಂದು ವ್ಯಂಗ್ಯವಾಡಿದರು.
ಬುಧವಾರ ದೆಹಲಿಯಲ್ಲಿ ಮಾತನಾಡಿದ್ದ ಎಚ್ ವಿಶ್ವನಾಥ್, ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದನ್ನು ಟಿವಿಯಲ್ಲಿ ನೋಡಿದ್ದೇನೆ. ಮೈತ್ರಿ ಸರ್ಕಾರ ಪ್ರಯೋಗವಿದ್ದಂತೆ ಅದನ್ನು ನಿಭಾಯಿಸುವುದು ರಾಜಕೀಯ ಚತುರತೆ. ಈ ಪ್ರಯೋಗ ಯಶಸ್ವಿ ಮಾಡಲು ಕಾಂಗ್ರೆಸ್ ಮತ್ತು ಜೆಡಿಎಸ್ ಪ್ರಯತ್ನ ಮಾಡುತ್ತಿಲ್ಲ. ಮೈತ್ರಿ ನಿಭಾಯಿಸುವಲ್ಲಿ ರಾಜ್ಯ ನಾಯಕರು ವಿಫಲವಾಗಿದ್ದು, ರಾಷ್ಟ್ರ ರಾಜಕಾರಣದ ಮುಂದೆ ರಾಜ್ಯ ನಾಯಕರು ಬೆತ್ತಲಾಗಿದ್ದಾರೆ ಬೇಸರ ವ್ಯಕ್ತಪಡಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…