ಬೆಂಗಳೂರು, : ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ” ಎಂದು ಜೆಡಿಎಸ್ ನಾಯಕ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಮಿತಿ, ಭಿನ್ನಮತಗಳ ಮಧ್ಯೆಯೂ ರೈತರ 25 ಸಾವಿರ ಕೋಟಿಗೂ ಅಧಿಕ ಸಾಲ ಮನ್ನಾ ಮಾಡಿದ್ದು ಇದೇ ಕುಮಾರಸ್ವಾಮಿ ಬೇರಾರೂ ಅಲ್ಲ” ಎಂದು ಎಂದಿದ್ದಾರೆ.
ಸರಣಿ ಟ್ವೀಟ್ ಮೂಲಕ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ”ವಿರೋಧಕ್ಕೆ ಮಾತ್ರ ವಿರೋಧ ಪಕ್ಷವಲ್ಲ. ತನ್ನ ಜವಾಬ್ದಾರಿಗಳನ್ನು ಅದು ರಚನಾತ್ಮಕವಾಗಿ ನಿರ್ವಹಿಸಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ. ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್ ಕಡೆಯೂ ಇರಲಿಲ್ಲ, ಬಿಜೆಪಿ ಕೆಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್ ಮಾಡಿದೆ” ಎಂದು ಹೇಳಿದ್ದಾರೆ.
”ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು” ಎಂದು ಆರೋಪಿಸಿದ್ದಾರೆ.
”ಜೆಡಿಎಸ್ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಮೊದಲು ಪ್ರಸ್ತಾಪಿಸಿದ ಮಸೂದೆಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 248 ಎಕರೆ ಜಮೀನು ಹೊಂದಲು ಅವಕಾಶವಿತ್ತು. ಆದರೆ, ಈಗ ಅದನ್ನು ತೆಗೆದು ಹಾಕಲಾಗಿದೆ. ಕಲಂ 80ರ ಅಡಿಯ ನೀರಾವರಿ ಜಮೀನನ್ನು ಕೃಷಿ ಉದ್ದೇಶಕ್ಕೆ ಮಾತ್ರವೇ ಬಳಸಬೇಕು ಎಂಬ ನಿಬಂಧನೆ ವಿಧಿಸಲಾಗಿದೆ” ಎಂದಿದ್ದಾರೆ.
”ಉಳುವವನೇ ಭೂಮಿ ಒಡೆಯ ಎಂಬ ತತ್ವದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಲಾಗಿತ್ತು. ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದರಲ್ಲಿ ದೇವರಾಜ ಅರಸರ ಆಶಯವನ್ನು ಕಾಪಾಡಿಕೊಂಡಿದ್ದು ಜೆಡಿಎಸ್‌ನ ಹೆಗ್ಗಳಿಕೆಯಲ್ಲವೇ? ಎಸ್‌ಸಿ/ಎಸ್‌ಟಿ ಜನರ ಭೂಮಿ ವಿಚಾರದಲ್ಲಿ ಯಾವುದೇ ವಿನಾಯಿತಿಯೂ ನೀಡದಂತೆ ನೋಡಿಕೋಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ” ಎಂದು ಹೇಳಿದ್ದಾರೆ.
”ನನ್ನನ್ನು ಟೀಕೆ ಮಾಡುತ್ತಿರುವ ಮನಸ್ಸುಗಳು ಒಮ್ಮೆ ನನ್ನ ರೈತ ಪರ ನಿಲುವುಗಳನ್ನು ಪರಾಮರ್ಶೆ ಮಾಡಲಿ, ಈ ವರೆಗಿನ ನನ್ನ ರೈತ ಪರ ಕಾರ್ಯಕ್ರಮಗಳನ್ನು ಅವಲೋಕಿಸಲಿ. ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ” ಎಂದಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…