Featured

ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ : ಕುಮಾರಸ್ವಾಮಿ -Vishwanews24

ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ : ಕುಮಾರಸ್ವಾಮಿ -Vishwanews24

ಬೆಂಗಳೂರು, : ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು  ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ” ಎಂದು ಜೆಡಿಎಸ್‌ ನಾಯಕ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.

ಮಿತಿ, ಭಿನ್ನಮತಗಳ ಮಧ್ಯೆಯೂ ರೈತರ 25 ಸಾವಿರ ಕೋಟಿಗೂ ಅಧಿಕ ಸಾಲ ಮನ್ನಾ ಮಾಡಿದ್ದು ಇದೇ ಕುಮಾರಸ್ವಾಮಿ ಬೇರಾರೂ ಅಲ್ಲ” ಎಂದು ಎಂದಿದ್ದಾರೆ.

ಸರಣಿ ಟ್ವೀಟ್‌ ಮೂಲಕ ಕಾಂಗ್ರೆಸ್‌ ವಿರುದ್ದ ವಾಗ್ದಾಳಿ ನಡೆಸಿರುವ ಅವರು, ”ವಿರೋಧಕ್ಕೆ ಮಾತ್ರ ವಿರೋಧ ಪಕ್ಷವಲ್ಲ. ತನ್ನ ಜವಾಬ್ದಾರಿಗಳನ್ನು ಅದು ರಚನಾತ್ಮಕವಾಗಿ ನಿರ್ವಹಿಸಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್‌ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ. ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್‌ ಕಡೆಯೂ ಇರಲಿಲ್ಲ, ಬಿಜೆಪಿ ಕೆಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್‌ ಮಾಡಿದೆ” ಎಂದು ಹೇಳಿದ್ದಾರೆ.

”ಬಿಜೆಪಿ ಪ್ರಸ್ತಾಪಿಸಿದ ಭೂ ಸುಧಾರಣಾ ತಿದ್ದುಪಡಿ ಮಸೂದೆ, ಅದರಲ್ಲಿದ್ದ ಕೆಲ ಅಂಶಗಳನ್ನು ಜೆಡಿಎಸ್‌ ಆರಂಭದಲ್ಲಿ ವಿರೋಧಿಸಿತ್ತು. ಅದರಲ್ಲಿ ಏನೇನು ಬದಲಾವಣೆಗಳು ಆಗಬೇಕು ಎಂಬುದನ್ನು ಹೇಳಿತ್ತು. ಕಾಂಗ್ರೆಸ್‌ ಕೂಡ ಮಸೂದೆ ವಿರೋಧಿಸಿತ್ತಾದರೂ, ಏನು ಬದಲಾವಣೆ ಆಗಬೇಕು ಎಂಬುದನ್ನು ಹೇಳಿರಲಿಲ್ಲ. ಅದು ವಿರೋಧಕ್ಕೆ ಮಾತ್ರ ಸೀಮಿತವಾಗಿತ್ತು” ಎಂದು ಆರೋಪಿಸಿದ್ದಾರೆ.

”ಜೆಡಿಎಸ್‌ ಸೂಚಿಸಿದಂತೆ ಕಾಯ್ದೆಯಲ್ಲಿ ಮಹತ್ತರ ಬದಲಾವಣೆ ಮಾಡಲಾಗಿದೆ. ಮೊದಲು ಪ್ರಸ್ತಾಪಿಸಿದ ಮಸೂದೆಯಲ್ಲಿ ಯಾವುದೇ ವ್ಯಕ್ತಿ ಗರಿಷ್ಠ 248 ಎಕರೆ ಜಮೀನು ಹೊಂದಲು ಅವಕಾಶವಿತ್ತು. ಆದರೆ, ಈಗ ಅದನ್ನು ತೆಗೆದು ಹಾಕಲಾಗಿದೆ. ಕಲಂ 80ರ ಅಡಿಯ ನೀರಾವರಿ ಜಮೀನನ್ನು ಕೃಷಿ ಉದ್ದೇಶಕ್ಕೆ ಮಾತ್ರವೇ ಬಳಸಬೇಕು ಎಂಬ ನಿಬಂಧನೆ ವಿಧಿಸಲಾಗಿದೆ” ಎಂದಿ‌ದ್ದಾರೆ.

”ಉಳುವವನೇ ಭೂಮಿ ಒಡೆಯ ಎಂಬ ತತ್ವದಲ್ಲಿ ಯಾವುದೇ ಬದಲಾವಣೆ ಮಾಡದಂತೆ ಸೂಚಿಸಲಾಗಿತ್ತು. ಅದನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ. ಇದರಲ್ಲಿ ದೇವರಾಜ ಅರಸರ ಆಶಯವನ್ನು ಕಾಪಾಡಿಕೊಂಡಿದ್ದು ಜೆಡಿಎಸ್‌ನ ಹೆಗ್ಗಳಿಕೆಯಲ್ಲವೇ? ಎಸ್‌ಸಿ/ಎಸ್‌ಟಿ ಜನರ ಭೂಮಿ ವಿಚಾರದಲ್ಲಿ ಯಾವುದೇ ವಿನಾಯಿತಿಯೂ ನೀಡದಂತೆ ನೋಡಿಕೋಳ್ಳುವಲ್ಲಿ ನಾವು ಯಶಸ್ವಿಯಾಗಿದ್ದೇವೆ” ಎಂದು ಹೇಳಿದ್ದಾರೆ.

”ನನ್ನನ್ನು ಟೀಕೆ ಮಾಡುತ್ತಿರುವ ಮನಸ್ಸುಗಳು ಒಮ್ಮೆ ನನ್ನ ರೈತ ಪರ ನಿಲುವುಗಳನ್ನು ಪರಾಮರ್ಶೆ ಮಾಡಲಿ, ಈ ವರೆಗಿನ ನನ್ನ ರೈತ ಪರ ಕಾರ್ಯಕ್ರಮಗಳನ್ನು ಅವಲೋಕಿಸಲಿ. ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ” ಎಂದಿದ್ದಾರೆ.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

22 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

23 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

23 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

24 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

24 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

24 hours ago