Featured

ಜೆಡಿಎಸ್ ನೊಂದಿಗಿನ ಹೊಂದಾಣಿಕೆಯೇ ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಕಾರಣ : ವೀರಪ್ಪಮೊಯ್ಲಿ – Vishwanews24

ಮುಂದಿನ ದಿನಗಳಲ್ಲಿ ಬಿಜೆಪಿಯಷ್ಟೇ ಮುಖ್ಯವಾಗಿ ಜೆಡಿಎಸ್ ಅನ್ನು ಸಹ ವಿರೋಧಿಸಬೇಕು..

ಈ ದೇಶದ ಕಾನೂನು, ಪೊಲೀಸ್ ವ್ಯವಸ್ಥೆ ಬಗ್ಗೆ ಬಿಜೆಪಿಗೆ ಗೌರವ ಇಲ್ಲದಾಗಿದೆ..

ಬಿಜೆಪಿಗೆ  ಮುಂದಿನ ದಿನಗಳಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ..

ದೊಡ್ಡಬಳ್ಳಾಪುರ: ನನ್ನ ರಾಜಕೀಯ ಜೀವನದಲ್ಲಿ ಮಾಡಿದ ದೊಡ್ಡ ತಪ್ಪು, 2018ರ ಲೋಕಸಭಾ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಮನೆಗೆ ಹೋಗಿ ಬೆಂಬಲ ನೀಡುವಂತೆ ಕೇಳಿದ್ದು. ಇವರೊಂದಿಗಿನ ಹೊಂದಾಣಿಕೆಯಿಂದಾಗಿಯೇ ನಾನು ಸೋಲುವ ಜೊತೆಗೆ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಸೋಲಿಗೆ ಕಾರಣವಾಯಿತು ಎಂದು ಕಾಂಗ್ರೆಸ್ ಹಿರಿಯ ನಾಯಕ ಎಂ.ವೀರಪ್ಪಮೊಯ್ಲಿ ಹೇಳಿದರು.

ಅವರು ನಗರದ ಬೆಸೆಂಟ್ ಪಾರ್ಕ್‌ನಲ್ಲಿ ಮಂಗಳವಾರ ಪ್ರಾರಂಭವಾದ “ನವ ಚಿಂತನ” ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ದೇವೇಗೌಡರು ದ್ವೇಷದ ರಾಜಕಾರಣ ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದಾರೆ. ಅವರನ್ನು ಪ್ರಧಾನ ಮಂತ್ರಿಗಳನ್ನಾಗಿ ಮಾಡಿದ ಪಕ್ಷದ ಮುಂಖಡರ ಮೇಲೆಯೇ ದೂರುಗಳನ್ನು ದಾಖಲಿಸಲು ಆರಂಭಿಸಿದರು. ಇದರಿಂದಾಗಿಯೇ ಪ್ರಧಾನ ಮಂತ್ರಿ ಪಟ್ಟ ಕಳೆದುಕೊಂಡಿದ್ದು. ನಮ್ಮ ವಿರೋಧಿಗಳ ವಿರುದ್ದ ದೂರು ದಾಖಲಿಸುವ ಪ್ರವೃತ್ತಿಯನ್ನು ಇಂದಿಗೂ ದೇವೇಗೌಡರು ಬಿಟ್ಟಿಲ್ಲ. ಜೆಡಿಎಸ್ ನಂಬಿಯೇ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಸೋಲು ಕಾಣಲು ಕಾರಣವಾಯಿತು. ಮುಂದಿನ ದಿನಗಳಲ್ಲಿ ಬಿಜೆಪಿಯಷ್ಟೇ ಮುಖ್ಯವಾಗಿ ಜೆಡಿಎಸ್ ಅನ್ನು ಸಹ ವಿರೋಧಿಸಬೇಕು. ತಂದೆ ಮಕ್ಕಳು ಇಬ್ಬರು ನಂಬಿಕೆಗೆ ಅರ್ಹರಲ್ಲ ಎಂದು ದೂರಿದರು.

ಬಿಜೆಪಿ ಮುಖಂಡರು ಒಂದು ವರ್ಗದ ಜನರನ್ನು ಗುರಿಯಾಗಿಸಿಕೊಂಡು ಬುಲ್ಡೋಜರ್ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ದೇಶದ ಕಾನೂನು, ಪೊಲೀಸ್ ವ್ಯವಸ್ಥೆ ಬಗ್ಗೆ ಬಿಜೆಪಿಗೆ ಗೌರವ ಇಲ್ಲದಾಗಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ಶಿಬಿರದಲ್ಲಿ ವಿಧಾನ ಪರಿಷತ್ ಸದಸ್ಯ ಎಸ್.ರವಿ, ಶಾಸಕ ಟಿ.ವೆಂಕಟರಮಣಯ್ಯ, ಶರತ್ ಬಚ್ಚೇಗೌಡ, ಮಾಜಿ ಸಚಿವ ರಾಮಲಿಂಗಾರೆಡ್ಡಿ ಸೇರಿಸಂತೆ ಜಿಲ್ಲೆಯ ಮುಖಂಡರು ಭಾಗವಹಿಸಿದ್ದಾರೆ.

Vishwa News 24

Recent Posts

ಮಹಾರಾಷ್ಟ್ರ : ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ- vishwanews24

ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…

2 minutes ago

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  – vishwanews24

ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ  ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…

14 minutes ago

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ – vishwanews24

ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…

39 minutes ago

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ – vishwanews24

ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…

45 minutes ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

3 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

3 days ago