Featured

ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ : ಹೆಚ್.ಡಿ.ದೇವೇಗೌಡ -Vishwanews24

ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಯಾರಿಂದಲೂ ಸಾಧ್ಯವಿಲ್ಲ..

ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ..

ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ..

ಹೆಚ್.ಡಿ.ದೇವೇಗೌಡ ಹೇಳಿಕೆ

ಬೆಂಗಳೂರು: ರಾಜ್ಯದ ಜನರ ಉಸಿರಿನಲ್ಲಿ ಉಸಿರಾಗಿರುವ ಜೆಡಿಎಸ್ ಪಕ್ಷವನ್ನು ಮುಗಿಸಲು ಸಿದ್ದರಾಮಯ್ಯ ಅವರಿಂದ ಮಾತ್ರವಲ್ಲ ಯಾರಿಂದಲೂ ಸಾಧ್ಯವಿಲ್ಲ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರೂ ಹಾಗೂ ಮಾಜಿ ಪ್ರಧಾನಮಂತ್ರಿಗಳ ಹೆಚ್.ಡಿ.ದೇವೇಗೌಡರು ಹೇಳಿದರು.

2023ಕ್ಕೆ ಜಾತ್ಯತೀತ ಜನತಾದಳದ ಹಾಗೂ ಹೆಚ್.ಡಿ.ಕುಮಾರಸ್ವಾಮಿ ನಾಯಕತ್ವದ ಜನತಾ ಸರಕಾರ ರಚನೆ ಮಾಡುವ ಗುರಿಯೊಂದಿಗೆ ಬಿಡದಿ ಫಾರ್ಮ್ ಹೌಸ್ ನಲ್ಲಿ ಆರಂಭವಾದ 4 ದಿನಗಳ ‘ಜನತಾ ಪರ್ವ 1.0’ ಕಾರ್ಯಗಾರವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಅಪಪ್ರಚಾರ ಮಾಡುವುದಕ್ಕೂ ಒಂದು ಮಿತಿ ಬೇಡವೇ. ತಾವು ನಾಯಕರಾಗಿ ಬಂದಿದ್ದು ಎಲ್ಲಿಂದ, ಬೆಳೆದದ್ದು ಎಲ್ಲಿ? ಎಂಬುದನ್ನು ಅರಿತು ಮಾತನಾಡಬೇಕು. ಅವರ ಜತೆ ಇವರ ಜತೆ ಹೋಗುವ ಪಕ್ಷ ಎಂದು ದೂರುವ ಮುನ್ನ ಸಮ್ಮಿಶ್ರ ಸರಕಾರ ರಚನೆ ಮಾಡುವುದಕ್ಕೆ ಯಾರು ಯಾರ ನಮ್ಮ ಮನೆ ಬಾಗಿಲಿಗೆ ಬಂದರು ಎನ್ನುವುದು ನನಗೆ, ನಿಮಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ದೇಶಕ್ಕೆ ಗೊತ್ತಿದೆ ಎಂದು ಹೇಳಿದರು.

ಅಪಮಾನಗಳನ್ನು ಸಹಿಸಿದ್ದೇನೆ, ಎದುರಿಸಿದ್ದೇನೆ. ಅಪಾರ ಕಾರ್ಯಕರ್ತರ ಜತೆ ಅಂತ ಎಲ್ಲ ನೋವುಗಳನ್ನು ನುಂಗಿದ್ದೇನೆ ಎಂದ ಗೌಡರು, ನಮ್ಮನ್ನು ನೋಡಿ ಅಪಹಾಸ್ಯ ಮಾಡುವವರಿಗೆ 2023 ರಲ್ಲೀ ಉತ್ತರ ನೀಡೋಣ ಎಂದರು.

ಹೈಟೆಕ್ ಕಾರ್ಯಗಾರ , ಹೊಸತನಕ್ಕೆ ಮುನ್ನುಡಿ

ಇರುವುದು ಒಂದೇ ಪರಿಹಾರ, ಪ್ರಾದೇಶಿಕ ಪಕ್ಷಕ್ಕೆ ಅಧಿಕಾರ ಎನ್ನುವ ಘೋಷವಾಕ್ಯ ಹಾಗೂ 2023ಕ್ಕೇ ಜೆಡಿಎಸ್ ಎನ್ನುವ ಗುರಿಯೊಂದಿಗೆ ಆರಂಭವಾದ ಕಾರ್ಯಾಗಾರವೂ ಕರ್ನಾಟಕ ರಾಜಕೀಯದಲ್ಲಿ ಅತ್ಯಂತ ವಿಶೇಷ. ಪಕ್ಷದ ಗುರಿ ಮತ್ತು ದಾರಿಯ ಬಗ್ಗೆ ಸ್ಪಷ್ಟತೆ ಮೂಡಿಸುವುದರ ಜತೆಗೆ, ಮುಂದಿನ ಚುನಾವಣೆಯಲ್ಲಿ ಕಣ್ಣಕ್ಕೆ ಇಳಿಯಲಿರುವ ಅಭ್ಯರ್ಥಿಗಳಿಗೆ ನಿರ್ದಿಷ್ಟ ಗುರಿಗಳನ್ನು ನಿಗದಿ ಮಾಡಲಾಗುವುದು. ಅದಕ್ಕೆ ಅಗತ್ಯವಾದ ತರಬೇತಿಯನ್ನು ಕೊಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದರು.

ಮಿಷನ್ 123 ಎಂಬ ಗುರಿಯೊಂದಿಗೆ ನಾವು ತಯಾರಿ ಆರಂಭ ಮಾಡಿದ್ದೇವೆ. ಈ ಗುರಿ ತಲುಪಲು ನಾವು ಎಲ್ಲಾ ಪ್ರಯತ್ನಗಳನ್ನು ಮಾಡುತ್ತೇವೆ. ಸಮರ್ಥರಾದ ಅಭ್ಯರ್ಥಿಗಳನ್ನು ಮಾತ್ರ ಕಣಕ್ಕೆ ಇಳಿಸುತ್ತೇವೆ. ನಮ್ಮನ್ನು ಹಗುರವಾಗಿ ಕಾಣುವ ಕೆಲವರಿಗೆ ತಕ್ಕ ಉತ್ತರ ನೀಡುತ್ತೇವೆ. 30 ಸೀಟುಗಳ ಪಕ್ಷ ಎಂದು ಜೆಡಿಎಸ್ ಪಕ್ಷವನ್ನು ಲಘುವಾಗಿ ಪರಿಗಣಿಸುವವರಿಗೆ ಮುಂದೆ ಶಕ್ತಿ ಏನೆಂಬುದನ್ನು ತೋರಿಸುತ್ತೇವೆ ಎಂದು ಗುಡುಗಿದರು.

ಪಕ್ಷದ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ವೇದಿಕೆಯಲ್ಲಿದ್ದರು. ಇಡೀ ವೇಳೆ ಮಾಜಿ ಶಾಸಕ ವೈಎಸ್ವಿ ದತ್ತ ಅವರು ‘ ಪಕ್ಷ ಸಂಘಟನೆ ಹಾಗೂ ಪಕ್ಷದ ಪರಂಪರೆ ‘ ಎಂಬ ವಿಷಯದ ಬಗ್ಗೆ ಮಾತನಾಡಿದರು.

ಪಕ್ಷದ ಹಾಲಿ ಶಾಸಕರು, ಮಾಜಿ ಶಾಸಕರು, ಹಿಂದಿನ ಚುನಾವಣೆಯಲ್ಲಿ ಪರಾಜಿತರಾಗಿದ್ದ ಅಭ್ಯರ್ಥಿಗಳು, ಮಾಜಿ ಸಚಿವರು ಸೇರಿದಂತೆ 200ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿಯಾಗಿದ್ದರು.

Vishwa News 24

Recent Posts

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ – vishwanews24

ಅಯೋಧ್ಯೆ ರಾಮಮಂದಿರ ಹುಂಡಿ ಹಗರಣ : ಎಲ್ಲಾ ಹಗರಣಗಳ ಸತ್ಯಾಂಶ ಹೊರಗೆ ಬರಬೇಕು : ವಿನಯಕುಮಾರ್ ಸೊರಕೆ ಆಗ್ರಹ ಉಡುಪಿ:…

13 hours ago

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ – vishwanews24

ಉಡುಪಿ ಜಿಲ್ಲೆಯಾದ್ಯಂತ ಎಎನ್‌ಪಿಆರ್ ಕ್ಯಾಮೆರಾ ಅಳವಡಿಕೆ: ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಶೇ. 40-70ರಷ್ಟು ಇಳಿಕೆ ಉಡುಪಿ: ಸ್ವಯಂ ಚಾಲಿತ…

14 hours ago

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ – vishwanews24

ಹೆಬ್ರಿ: ಕೂಡ್ಲು ಫಾಲ್ಸ್ ಪ್ರವೇಶಕ್ಕೆ ಅರಣ್ಯ ಇಲಾಖೆಯಿಂದ ತಾತ್ಕಾಲಿಕ ನಿಷೇಧ ಹೆಬ್ರಿ: ಪುವಾಸಿ ತಾಣವಾದ ಕೂಡು ಫಾಲ್ಸ್ ಪುವೇಶಕ್ಕೆ ಅರಣ್ಯ…

14 hours ago

ಉಡುಪಿ : ವ್ಯಕ್ತಿ ನಾಪತ್ತೆ – vishwanews24

ಉಡುಪಿ : ವ್ಯಕ್ತಿ ನಾಪತ್ತೆ      ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಕುಶಾಲ್ ಶೆಟ್ಟಿ (55) ಎಂಬ…

15 hours ago

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ – vishwanews24

ಸ್ಥಳ ಮಹಜರು ವೇಳೆ ತಪ್ಪಿಸಿಕೊಳ್ಳಲು ಯತ್ನ : ಅತ್ಯಾಚಾರ , ಕೊಲೆ ಪ್ರಕರಣದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ ಕೊಲ್ಕತ್ತಾ: ಪಶ್ಚಿಮ…

15 hours ago

ಉಡುಪಿ : ಜು. 10 ರಂದು ನೇರ ಸಂದರ್ಶನ – vishwanews24

ಉಡುಪಿ : ಜು. 10 ರಂದು ನೇರ ಸಂದರ್ಶನ      ಉಡುಪಿ : ಉಡುಪಿಯ ವಿ.ಪಿ ನಗರದ ಸುಧಾ ಫರ್ನೀರ‍್ಸ್ ಬಿಲ್ಡಿಂಗ್s…

15 hours ago