ಮಂಡ್ಯ: ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯ ಘಟಾನುಘಟಿ ರಾಷ್ಟ್ರೀಯ ನಾಯಕರು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ರಾಜ್ಯಾದ್ಯಂತ ಅಬ್ಬರದ ಪ್ರಚಾರ ನಡೆಸುತ್ತಾ, ಮತದಾರನ್ನ ಸೆಳೆಯಲು ನಾನಾ ತಂತ್ರಗಾರಿಗೆ ಹೆಣೆಯುತ್ತಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೂ ಬುಧವಾರ ಕರ್ನಾಟಕಕ್ಕೆ ಆಗಮಿಸಿದ್ದು, ಜೆಡಿಎಸ್ ಭದ್ರಕೋಟೆಯಾಗಿರುವ ಮಂಡ್ಯ ಜಿಲ್ಲೆಯಲ್ಲಿ ಬಿಜೆಪಿ ಪರವಾಗಿ ಪ್ರಚಾರ ಕಾರ್ಯಕ್ರಮ ನಡೆಸಿದ್ದಾರೆ. ಮಂಡ್ಯಕ್ಕೆ ಬರುತ್ತಿದ್ದಂತೆ ಅದ್ಧೂರಿ ರೋಡ್ ಶೋ ನಡೆಸಿದ ಯುಪಿ ಸಿಎಂ, ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ಕನ್ನಡದಲ್ಲೇ ಮಾತನಾಡಿ ಮಂಡ್ಯ ಜನರ ಮನಗೆದ್ದಿದ್ದಾರೆ.
ಮಂಡ್ಯದಲ್ಲಿಂದು ನಡೆದ ವೇದಿಕೆ ಕಾರ್ಯಕ್ರಮದಲ್ಲಿ `ಸಕ್ಕರೆಯ ನಾಡು ಮಂಡ್ಯದ ಜನತೆಗೆ ನನ್ನ ನಮಸ್ಕಾರಗಳು, ಆದಿಚುಂಚನಗಿರಿ ಮಠಕ್ಕೆ ನನ್ನ ಭಕ್ತಿ ಪೂರ್ವಕ ನಮಸ್ಕಾರಗಳು’ ಎಂದು ವಿನಮ್ರವಾಗಿ ಹೇಳಿದ್ದಾರೆ. ಯೋಗಿ ಆದಿತ್ಯನಾಥ್ ಅವರ ಬಾಯಲ್ಲಿ ಕನ್ನಡ ನುಡಿ ಕೇಳಿ ಮಂಡ್ಯದ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಯ ಭಾರತ ಜನನಿಯ ತನುಜಾತೆ.. ಜಯಹೇ ಕರ್ನಾಟಕ ಮಾತೆ ಎಂದು ಕುವೆಂಪು ಅವರ ನಾಡಗೀತೆಯನ್ನು ಯೋಗಿ ಹಾಡಿದರು. ಅಲ್ಲದೇ, ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲ ಈ ಬಾರಿ ಗೆಲ್ಲಿಸಬೇಕು ಎಂದು ಕನ್ನಡದಲ್ಲೇ ನಾಡಿನ ಜನತೆಗೆ ಮನವಿ ಮಾಡಿದರು.
ದುರಸ್ತಿ ಕಾಮಗಾರಿ: ಅ.7ರಂದು ಹಂದಾಡಿ ರೈಲ್ವೆ ಗೇಟ್ ಬಂದ್ ಕುಂದಾಪುರ : ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್‌ನಲ್ಲಿ ಅಗತ್ಯ ದುರಸ್ತಿ…
ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…
ಎಂಆರ್‌ಪಿಎಲ್ ದುರಂತ: ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…
ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…
ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ: ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (ದ.ಕ)…