Featured

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ : ಸಿದ್ದರಾಮಯ್ಯಗೆ  ಹೆಚ್ ಡಿಕೆ – VIshwanews24

ಬಣ್ಣ ಬದಲಿಸುವ ಊಸರವಳ್ಳಿ, ಗೊಬೆಲಪ್ಪ,ಬ್ರೋಕರಪ್ಪ ಸಿದ್ದರಾಮಯ್ಯಗೆ  ಚಿತ್ರವಿಚಿತ್ರ ಹೆಸರುಗಳಿಂದ ಟಾಂಗ್ ನೀಡಿದ ಹೆಚ್ ಡಿಕೆ – Vishwanews24

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ…

ಬೆಂಗಳೂರು: ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಹೇಳಿಕೆ ನೀಡಿರುವ ಕಾಂಗ್ರೆಸ್ ನ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ಸಿಡಿದೆದ್ದಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್‌ ಪಕ್ಷದ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಸಿದ್ದು ವಿರುದ್ದ ಹರಿಹಾಯ್ದು ” ಬಣ್ಣ ಬದಲಿಸುವ ಊಸರವಳ್ಳಿ, ಗೊಬೆಲಪ್ಪ,ಬ್ರೋಕರಪ್ಪ ಎಂದು ಚಿತ್ರವಿಚಿತ್ರ ಹೆಸರುಗಳಿಂದ ಟಾಂಗ್ ನೀಡಿದ್ದಾರೆ.

ಈ ಬಗ್ಗೆ ತಮ್ಮ ಅಧಿಕೃತ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ “ಸುಳ್ಳು ಹೇಳುವ ಚಾಳಿಗೆ ಚಿಕಿತ್ಸೆ ಇಲ್ಲ. ʼಸಿದ್ದಕಲೆʼಯ ನಿಷ್ಣಾತರಿಗೆ ಸುಳ್ಳೇ ದೇವರು, ಸುಳ್ಳೇ ಸರ್ವಸ್ವ. ಜೆಡಿಎಸ್ ಮುಳುಗುತ್ತಿರುವ ಹಡಗು ಎಂದು ಸುಳ್ಳು ಹೇಳಿಕೊಂಡು ಓಡಾಡುವ ʼಗೊಬೆಲಪ್ಪʼನ ʼಬೂಸಿಭಜನೆʼ ಹೊಸದೇನೂ ಅಲ್ಲ. ರಾಜಕೀಯ ಜನ್ಮಕೊಟ್ಟ ಪಕ್ಷದ ಬಗ್ಗೆಯೇ ಹಗುರವಾಗಿ ಮಾತನಾಡುವ ʼಕೃತಘ್ನʼತೆಗೆ ಇದೇ ಸಾಕ್ಷಿ ಎಂದು ಹರಿಹಾಯ್ದಿದ್ದಾರೆ.

ಒಬ್ಬ ನಾಯಕನನ್ನು ಸೃಷ್ಟಿಸುವ ಯೋಗ್ಯತೆ ಇಲ್ಲ. ಇರುವ ಪಕ್ಷದ ಮೇಲೆ ವಿಶ್ವಾಸವಿಲ್ಲ. ʼಬ್ರೂಟಸ್ ಮನಃಸ್ಥಿತಿʼ, ಸಂದರ್ಭಕ್ಕೆ ತಕ್ಕಂತೆ ʼಬಣ್ಣ ಬದಲಿಸುವ ಊಸರವಳ್ಳಿ ದುಸ್ಥಿತಿʼ. ಆಪರೇಷನ್ ಕಮಲದಲ್ಲಿ ಕುಮ್ಮಕ್ಕಾಗಿ ಮೈತ್ರಿ ಸರಕಾರ ಕೆಡವಿದ ಸಿದ್ದಶೂರನ ಸಾರಥ್ಯದಲ್ಲಿ ʼಆಪರೇಷನ್ ಹಸ್ತʼ ನಡೆಯುತ್ತಿದೆ.ಜೆಡಿಎಸ್ ಜಟ್ಟಿಗಳನ್ನು ಸೃಷ್ಟಿಸುವ ಪಕ್ಷ. ನಮ್ಮ ಜಟ್ಟಿಗಳನ್ನು ಎಗರಿಸಿಕೊಂಡು ಹೋಗುವ ʼಬ್ರೋಕರಪ್ಪʼನ ಕುತಂತ್ರಕ್ಕೆ ಹೆದರುವ ಪ್ರಶ್ನೆ ಇಲ್ಲ. ಹಿಂದೆ ದೇವರಾಜ ಅರಸು ಅವರಿಗೆ ನರಕಯಾತನೆ ನೀಡಿದ್ದ ಕಾಂಗ್ರೆಸ್, ಈಗ ʼಅಭಿನವ ಅರಸುʼ ಎಂದು ಪುಂಗಿ ಬಿಡುವ ʼಸುಳ್ಳುಸಿದ್ದಪ್ಪʼನಿಗೆ ಶರಣಾಗಿದೆ. ಈ ವ್ಯಕ್ತಿಗೆ ಅರಸು ಹೆಸರೇಳುವ ಅರ್ಹತೆಯೇ ಇಲ್ಲ ಎಂದು ಕಿಡಿಕಾರಿದ್ದಾರೆ

ಜೆಡಿಎಸ್ ಮುಳುಗುವ ಪಕ್ಷವಾ? ತೇಲುವಾ ಪಕ್ಷವಾ? ಎನ್ನುವುದನ್ನು 2023ರ ವಿಧಾನಸಭೆ ಚುನಾವಣೆಯಲ್ಲಿ ನಾಡಿನ ಜನರೇ ತೋರಿಸುತ್ತಾರೆ. ಅಲ್ಲಿವರೆಗೆ ಸಿದ್ದಸೂತ್ರಧಾರನ ʼಆಪರೇಷನ್ ಹಸ್ತವೆಂಬ ಅಸಹ್ಯʼ ನಡೆಯಲಿ. ಅದಕ್ಕೆ ಎಷ್ಟೇ ʼಕೋನʼಗಳನ್ನು ಸೃಷ್ಟಿಸಿದರೂ ಜೆಡಿಎಸ್ ಜಗ್ಗುವುದಿಲ್ಲ ಎಂದು ಎಚ್ಚರಿಕೆ ಸಿದ್ದರಾಮಯ್ಯಗೆ ತಿರುಗೇಟು ನೀಡಿದ್ದಾರೆ.

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

8 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

1 day ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

1 day ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

1 day ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

1 day ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

1 day ago