ಉಡುಪಿ

ಜೆಡಿಎಸ್ ಮೈತ್ರಿ ಸರಕಾರವನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ; ಬಿಜೆಪಿ ಗದ್ದುಗೆ ಏರುವವರೆಗೆ ನಮ್ಮ ಹೋರಾಟ ನಿಲ್ಲದು : ಲಾಲಾಜಿ ಆರ್. ಮೆಂಡನ್

ಕಾಪು,  : ಕಾಂಗ್ರೆಸ್ ಮತ್ತು ಜೆಡಿಎಸ್ ಅಕಾರದ ಲಾಲಸೆ ನಡೆಸಿ ಅಪವಿತ್ರ ಮೈತ್ರಿ ಮಾಡಿಕೊಂಡಿದ್ದು, ಇದರಿಂದಾಗಿ ರಾಜ್ಯದಲ್ಲಿ ಅಕ್ರಮ ಸರಕಾರ ಆಡಳಿತಕ್ಕೆ ಬರುವಂತಾಗಿದೆ. ಈ ಅಪವಿತ್ರ ಮೈತ್ರಿ ತೀವ್ರ ಖಂಡನೀಯವಾಗಿದೆ. ರಾಜ್ಯದಲ್ಲಿ ಅಪವಿತ್ರ ಮೈತ್ರಿ ಸರಕಾರ ಬಿದ್ದು, ಬಿಜೆಪಿ ಆಡಳಿತಕ್ಕೆ ಬರುವವರೆಗೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನೇತೃತ್ವದ ಸರಕಾರ ಮತ್ತು ಎಚ್. ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಪದಗ್ರಹಣ ಸ್ವೀಕರಿಸುತ್ತಿರುವುದನ್ನು ಖಂಡಿಸಿ ಕಾಪು ಕ್ಷೇತ್ರ ಬಿಜೆಪಿ ವತಿಯಿಂದ ಕಾಪು ಪೇಟೆಯಲ್ಲಿ ಬುಧವಾರ ನಡೆದ ಕರಾಳ ದಿನಾಚರಣೆ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.
ಕಾಪು ಕ್ಷೇತ್ರದಲ್ಲಿ ಬಿಜೆಪಿಗೆ 76 ಸಾವಿರ ಮಂದಿ ಮತದಾರರು ಮತ ನೀಡಿದ್ದಾರೆ. ಕಾಪು ಕ್ಷೇತ್ರವೂ ಸೇರಿದಂತೆ ಕರಾವಳಿ ಜಿಲ್ಲೆ ಮತ್ತು ರಾಜ್ಯದಲ್ಲೂ ಬಿಜೆಪಿಗೆ ಜನಾದೇಶ ನೀಡಿದ್ದಾರೆ. ಆದರೆ ಕಾಂಗ್ರೆಸ್ ಮತ್ತು ಜೆಡಿಎಸ್ ಜನಾದೇಶಕ್ಕೆ ವಿರುದ್ಧವಾಗಿ ಸರಕಾರ ನಡೆಸಲು ಮುಂದಾಗಿದೆ. ಈ ದುರಾಡಳಿತಕ್ಕೆ ಜನರೇ ಉತ್ತರ ನೀಡಲಿದ್ದು, ಲೋಕಸಭಾ ಚುನಾವಣೆಯಲ್ಲಿ ಸೂಕ್ತ ಪ್ರತ್ಯುತ್ತರ ನೀಡಲಿದ್ದೇವೆ ಎಂದರು.

ಕಾಂಗ್ರೆಸ್‍ನ ಇತಿಹಾಸಕ್ಕೆ ಮೊಳೆ : ಗುರ್ಮೆ ಸುರೇಶ್ ಶೆಟ್ಟಿ

ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಜೆಡಿಎಸ್-ಕಾಂಗ್ರೆಸ್ ಪಕ್ಷಗಳ ನಡುವಿನ ಮೈತ್ರಿ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಅಪಮಾನವಾಗಿದೆ. ಕೇವಲ ಬಿಜೆಪಿಯನ್ನು ಅಕಾರದಿಂದ ದೂರವಿರಿಸಬೇಕೆಂಬ ಏಕೈಕ ಉದ್ದೇಶವನ್ನು ಇಟ್ಟುಕೊಂಡು ರಾಜ್ಯದ 125ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಠೇವಣಿಯನ್ನೇ ಕಳೆದುಕೊಂಡಿರುವ ಜೆಡಿಎಸ್‍ಗೆ ಮುಖ್ಯಮಂತ್ರಿ ಹುದ್ದೆಯನ್ನು ನೀಡುವ ಮೂಲಕ ಕಾಂಗ್ರೆಸ್ ತಾನಾಗಿಯೇ ತನ್ನ ಇತಿಹಾಸಕ್ಕೆ ಮೊಳೆ ಹೊಡೆದುಕೊಳ್ಳುತ್ತಿದೆ ಎಂದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಉಡುಪಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ತಾ.ಪಂ. ಸದಸ್ಯೆ ರಜನಿ, ಪುರಸಭೆ ವಿಪಕ್ಷ ನಾಯಕ ಅರುಣ್ ಶೆಟ್ಟಿ ಪಾದೂರು, ಜಿಲ್ಲಾ ಕಾರ್ಯದರ್ಶಿ ರಮಾಕಾಂತ ದೇವಾಡಿಗ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನಯನಾ ಗಣೇಶ್, ಕ್ಷೇತ್ರ ಕಾರ್ಯದರ್ಶಿ ಜಿತೇಂದ್ರ ಶೆಟ್ಟಿ ಉದ್ಯಾವರ, ಯುವಮೋರ್ಚಾ ಕ್ಷೇತ್ರಾಧ್ಯಕ್ಷ ಪ್ರವೀಣ್ ಕುಮಾರ್, ಅಲ್ಪಸಂಖ್ಯಾತ ಮೋರ್ಚಾದ ಅಧ್ಯಕ್ಷ ಶೇಖ್ ನಝೀರ್, ಎಸ್ಸಿ/ಎಸ್ಟಿ ಮೋರ್ಚಾದ ಅಧ್ಯಕ್ಷ ಚಂದ್ರ ಮಲ್ಲಾರು, ಮಹಿಳಾ ಮೋರ್ಚಾ ಅಧ್ಯಕ್ಷ ಕೇಸರಿ ಯುವರಾಜ್, ಮುಖಂಡರಾದ ವೀಣಾ ಶೆಟ್ಟಿ, ಪವಿತ್ರಾ ಶೆಟ್ಟಿ, ಸಂತೋಷ್ ಸುವರ್ಣ, ಸಂದೀಪ್ ಶೆಟ್ಟಿ, ಕಿರಣ್ ಆಳ್ವ, ಅನಿಲ್ ಕುಮಾರ್, ಸರೋಜಿನಿ ಶೆಟ್ಟಿ, ಸತೀಶ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

1 day ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

1 day ago