ದೆಹಲಿ: ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿ ಜೆ.ಎನ್.ಯು ವಿದ್ಯಾರ್ಥಿಗಳ ಒಕ್ಕೂಟದ ಅಧ್ಯಕ್ಷೆ ಐಶೆ ಘೋಶ್ ಸೇರಿದಂತೆ 19 ವಿದ್ಯಾರ್ಥಿಗಳ ಮೇಲೆ ದಿಲ್ಲಿ ಪೊಲೀಸರು ಎಫ್.ಐ.ಆರ್ ದಾಖಲಿಸಿದ್ದಾರೆ.
ಜೆಎನ್ಯು ಹಿಂಸಾಚಾರ ನಡೆದ ಹಿಂದಿನ ದಿನ, ಅಂದರೆ ಜನವರಿ 4ರಂದು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಸರ್ವರ್ ಕೊಠಡಿಯಲ್ಲಿ ದಾಂಧಲೆ ನಡೆಸಿದ್ದಾರೆ ಎಂಬ ಆರೋಪದ ಮೇಲೆ ಐಶೆ ಘೋಶ್ ಮತ್ತು ಇತರ ವಿದ್ಯಾರ್ಥಿಗಳ ಮೇಲೆ ಎಫ್.ಐ.ಆರ್ ದಾಖಲಿಸಲಾಗಿದೆ.
ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ ಮತ್ತು ಸರ್ವರ್ ಕೊಠಡಿಗಳಲ್ಲಿ ದಾಂಧಲೆ ನಡೆಸಿದ್ದಾರೆ ಎಂದು ಜೆ.ಎನ್.ಯು ಆಡಳಿತ ಮಂಡಳಿ ಐಶೆ ಘೋಶ್ ಮತ್ತು ಇತರ ವಿದ್ಯಾರ್ಥಿಗಳ ವಿರುದ್ಧ ದೂರು ನೀಡಿತ್ತು. ಜನವರಿ 5ರಂದು ಎಫ್.ಐ.ಆರ್ ದಾಖಲಿಸಲಾಗಿದೆ. ಜೆಎನ್ಯು ಹಿಂಸಾಚಾರಕ್ಕೆ ಸಂಬಂಧಿಸಿ ಮೂರು ಎಫ್.ಐ.ಆರ್.ಗಳು ದಾಖಲಾಗಿವೆ.
ಜೆ.ಎನ್.ಯು ಕಾಲೇಜು ಆವರಣದೊಳಗೆ ನುಗ್ಗಿ, ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಮುಸುಕುಧಾರಿ ಗೂಂಡಾಗಳ ಪೈಕಿ ಒಬ್ಬರನ್ನೂ ಇದುವರೆಗೆ ಬಂಧಿಸಿಲ್ಲ. ಕಬ್ಬಿಣದ ರಾಡ್ ಮತ್ತು ದೊಣ್ಣೆಗಳೊಂದಿಗೆ ಕ್ಯಾಂಪಸ್ ಗೆ ನುಗ್ಗಿದ್ದ ದುಷ್ಕರ್ಮಿಗಳು ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಥಳಿಸಿದ್ದರು. ಗೂಂಡಾಗಳ ಕೃತ್ಯ ವಿಡಿಯೋದಲ್ಲಿ ದಾಖಲಾಗಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿವೆ. ದುರ್ಘಟನೆಯಲ್ಲಿ ವಿದ್ಯಾರ್ಥಿ ನಾಯಕಿ ಐಶೆ ಘೋಶ್ ತಲೆಯಿಂದ ರಕ್ತ ಸೋರುತ್ತಿರುವುದು ವಿಡಿಯೋದಲ್ಲಿ ದಾಖಲಾಗಿದೆ. ಘಟನೆಯಲ್ಲಿ ಸುಮಾರು 30 ವಿದ್ಯಾರ್ಥಿಗಳು ಗಂಭೀರ ಗಾಯಗೊಂಡಿದ್ದರು.
ವಿದ್ಯಾರ್ಥಿಗಳು ಮತ್ತು ವಿಶ್ವವಿದ್ಯಾಲಯದ ನಡುವೆ ಹಾಸ್ಟೆಲ್ ಶುಲ್ಕ ದರ ವಿಚಾರವಾಗಿ ಪ್ರಸ್ತುತ ನಡೆಯುತ್ತಿರುವ ತಿಕ್ಕಾಟಕ್ಕೂ ಮತ್ತು ಸರ್ವರ್ ಘಟನೆಗೂ ಸಂಬಂಧವಿದೆ. ಅಲ್ಲದೆ, ಭಾನುವಾರ ನಡೆದ ಹಿಂಸಾತ್ಮಕ ಘಟನೆಗೂ ಸರ್ವರ್ ಘಟನೆಗೂ ಸಂಬಂಧವಿದೆ ಎಂದು ವಿಶ್ವವಿದ್ಯಾಲಯ ವಾದಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…