ಕೊಲ್ಕತ್ತಾ (Vishwanews24): ಪಶ್ಚಿಮ ಬಂಗಾಳ ಜೈಲಿನಲ್ಲಿರುವ ಮಹಿಳಾ ಕೈದಿಗಳು ಗರ್ಭಿಣಿಯರಾಗುತ್ತಿದ್ದು ರಾಜ್ಯದ ವಿವಿಧ ಜೈಲುಗಳಲ್ಲಿ ಸುಮಾರು 196 ಶಿಶುಗಳು ಜನಿಸಿವೆ ಎಂದು ಕೋಲ್ಕತ್ತಾ ಹೈಕೋರ್ಟ್‌ಗೆ ಗುರುವಾರ ಮಾಹಿತಿ ನೀಡಲಾಗಿದೆ.
ಪಶ್ಚಿಮ ಬಂಗಾಳ ರಾಜ್ಯದಲ್ಲಿ ಜೈಲು ಸುಧಾರಣೆಗಳು ಮತ್ತು ಸುಧಾರಣಾ ಗೃಹಗಳಿಗೆ ಸಂಬಂಧಿಸಿದ ಪ್ರಕರಣವನ್ನು ಉಲ್ಲೇಖಿಸುವಾಗ ಅಮಿಕಸ್ ಕ್ಯೂರಿ ಈ ಹೇಳಿಕೆ ನೀಡಿದ್ದಾರೆ.
ಈ ಮಾಹಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯ ನ್ಯಾಯಮೂರ್ತಿ ಟಿ.ಎಸ್.ಶಿವಜ್ಞಾನಂ ಮತ್ತು ನ್ಯಾಯಮೂರ್ತಿ ಸುಪ್ರತಿಮ್ ಭಟ್ಟಾಚಾರ್ಯ ಅವರಿದ್ದ ವಿಭಾಗೀಯ ಪೀಠ ಮುಂದಿನ ಸೋಮವಾರ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ವಿಭಾಗೀಯ ಪೀಠದ ಎದುರು ಪ್ರಕರಣ ಪ್ರಸ್ತಾಪಿಸುವಂತೆ ಸೂಚಿಸಿದೆ.
ಈ ಅವಘಡ ತಡೆಗಟ್ಟಲು ಸುಧಾರಣಾ ಗೃಹಗಳ ಪುರುಷ ಉದ್ಯೋಗಿಗಳು ಮಹಿಳಾ ಕೈದಿಗಳಿರುವ ಆವರಣ ಪ್ರವೇಶಿಸುವುದನ್ನು ನಿಷೇಧಿಸಬೇಕು ಎಂದು ಅಮಿಕಸ್ ಸಲಹೆ ನೀಡಿದರು. ಅವರು ನೀಡಿರುವ ಸಲಹೆ, ಮಾಹಿತಿಯನ್ನು ನ್ಯಾಯಾಲಯ ದಾಖಲಿಸಿಕೊಂಡಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…