Featured

ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತ : ಅರವಿಂದ್ ಕೇಜ್ರಿವಾಲ್  – Vishwanews24

ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತ : ಅರವಿಂದ್ ಕೇಜ್ರಿವಾಲ್

ನವದೆಹಲಿ: ಜೈಲಿನ ಒಳಗಿರಲಿ ಅಥವಾ ಹೊರಗಿರಲಿ, ನನ್ನ ಜೀವನವು ದೇಶಕ್ಕಾಗಿ ಸಮರ್ಪಿತವಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಮದ್ಯ ಹರಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿಯನ್ನು ಇಂದು ರೋಸ್ ಅವೆನ್ಯೂ ನ್ಯಾಯಾಲಯಕ್ಕೆ  ಹಾಜರುಪಡಿಸುವ ಸಂದರ್ಭದಲ್ಲಿ ಪ್ರಶ್ನೆಯೊಂದಕ್ಕೆ ಈ ರೀತಿಯಾಗಿ ಪ್ರತಿಕ್ರಿಯಿಸಿದರು. ಜೈಲಿನಲ್ಲಿದ್ದರೂ ಹೊರಗಿದ್ದರೂ ದೇಶಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿರುವುದಾಗಿ ತಿಳಿಸಿದ್ದಾರೆ.

ದೆಹಲಿ ಅಬಕಾರಿ ನೀತಿಯಲ್ಲಿನ ಅಕ್ರಮಗಳಲ್ಲಿ ಪಾತ್ರ ವಹಿಸಿದ್ದಕ್ಕಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಗುರುವಾರ ಕೇಜ್ರಿವಾಲ್ ಅವರನ್ನು ಬಂಧಿಸಿದ್ದಾರೆ. ಬಳಿಕ ಇಂದು 10 ದಿನಗಳ ಕಸ್ಟಡಿಗೆ ಕೋರಿದೆ.

ಇತ್ತ ಕೇಜ್ರಿವಾಲ್ ಬಂಧನ ಪ್ರತಿಭಟನೆಗೆ ಕಾರಣವಾಯಿತು. ‌ಪ್ರತಿಭಟನೆಯ ವೇಳೆ ದೆಹಲಿ ಸಚಿವ ಸೌರಭ್ ಭಾರದ್ವಾಜ್ ಅವರು ಕೇಜ್ರಿವಾಲ್ ಅವರ ಕುಟುಂಬವನ್ನು ಗೃಹಬಂಧನದಲ್ಲಿ ಇರಿಸಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಕೇಜ್ರಿವಾಲ್ ಅವರ ತಾಯಿ ಆರೋಗ್ಯವಾಗಿಲ್ಲ ಮತ್ತು ಇತ್ತೀಚೆಗಷ್ಟೇ ಅವರು ಆಸ್ಪತ್ರೆಯಿಂದ ವಾಪಸ್ಸಾಗಿದ್ದಾರೆ. ಕುಟುಂಬದ ಸದಸ್ಯರಿಗೆ ಯಾರನ್ನೂ ಭೇಟಿಯಾಗಲು ಅವಕಾಶವಿಲ್ಲ ಎಂದು ಕಿಡಿಕಾರಿದ್ದಾರೆ.

ಶಾಂತಿಯುತ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಪಕ್ಷದ ಕಾರ್ಯಕರ್ತರಿಗೆ ಪ್ರತಿಭಟನೆಯಲ್ಲಿ ಭಾಗವಹಿಸಲು ಅವಕಾಶವಿಲ್ಲ. ಇದು ಸಂಪೂರ್ಣ ಸರ್ವಾಧಿಕಾರ. ಲೋಕಸಭಾ ಚುನಾವಣೆ ಗೆಲ್ಲಲು ಹೀಗೆ ಮಾಡಲಾಗುತ್ತಿದೆ. ಜನರು ಎಲ್ಲೇ ಇದ್ದರೂ ಪ್ರತಿಭಟನೆ ಮಾಡುತ್ತಾರೆ, ಇದು ನಿಲ್ಲುವುದಿಲ್ಲ. ಕ್ರಾಂತಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಅವರು ಆಕ್ರೋಶದ ಮಾತುಗಳನ್ನಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago