Featured

ಜೈಶ್ ಎ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಭಾರತಕ್ಕೆ ಒಪ್ಪಿಸಿ : ಪಾಕ್ ಗೆ ಸುಷ್ಮಾ ಸ್ವರಾಜ್ – Vishwanews24

ನವದೆಹಲಿ: ತನ್ನ ನೆಲದಲ್ಲಿರುವ ಭಯೋತ್ಪಾದಕ ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಪಾಕಿಸ್ತಾನದ ಜೊತೆಗೆ ಶಾಂತಿ ಮಾತುಕತೆ ನಡೆಸಲು ಸಾಧ್ಯವಿಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಹೇಳಿದ್ದಾರೆ.

ಅವರು ನಿನ್ನೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿ, ಕೆಲವರು ಪಾಕಿಸ್ತಾನ ಪ್ರಧಾನಿ ಉತ್ತಮ ಆಡಳಿತಗಾರ ಎಂದು ಹೇಳುತ್ತಾರೆ. ಅವರು ಅಷ್ಟು ಪ್ರಾಮಾಣಿಕ, ಉದಾರ ಮನಸ್ಸಿನ ವ್ಯಕ್ತಿಯಾಗಿದ್ದರೆ ಜೈಶ್ ಎ ಮೊಹಮ್ಮದ್ ಸಂಘಟನೆ ಮುಖ್ಯಸ್ಥ ಮಸೂದ್ ಅಜರ್ ನನ್ನು ಭಾರತಕ್ಕೆ ಹಸ್ತಾಂತರಿಸಲಿ. ಆಗ ಅವರ ಪ್ರಾಮಾಣಿಕತೆಯನ್ನು ಒಪ್ಪುತ್ತೇವೆ ಎಂದರು.

ಉಗ್ರವಾದಕ್ಕೆ ಪ್ರೇರಣೆ ನೀಡುತ್ತಲೇ ಮಾತುಕತೆಗೆ ಆಹ್ವಾನಿಸುತ್ತೀರಿ. ಉಗ್ರವಾದ ಹಾಗೂ ಮಾತುಕತೆ ಒಮ್ಮೆಗೇ ಸಾಧ್ಯವಿಲ್ಲ ಎಂದು ಪಾಕ್ ಸರ್ಕಾರವನ್ನು ಕುಟುಕಿದ ಅವರು, ಭಯೋತ್ಪಾದನೆ ನಿರ್ನಾಮಗೊಳಿಸಲು ಪಾಕ್​ ಸರ್ಕಾರದ ಜೊತೆಗೆ ಭಾರತ ಕೈಜೋಡಿಸುವುದಾಗಿ ಭರವಸೆ ನೀಡಿದರು.ಶಾಂತಿ ಮಾತುಕತೆ ಒಟ್ಟೊಟ್ಟಿಗೆ ಸಾಗುವುದಿಲ್ಲ ಎಂದು ಹೇಳಿದರು.

ಬಾಲಕೋಟ್ ನಲ್ಲಿ ಭಾರತೀಯ ವಾಯುದಾಳಿಗೆ ಪಾಕಿಸ್ತಾನದ ಪ್ರತ್ಯುತ್ತರದ ಬಗ್ಗೆ ಪ್ರಶ್ನಿಸಿದಾಗ ಸುಷ್ಮಾ ಸ್ವರಾಜ್, ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನೇ ಗುರಿಯಾಗಿಟ್ಟುಕೊಂಡು ಭಾರತ ವಾಯುದಾಳಿ ಮಾಡಿದೆ. ಆದರೆ ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಜೈಶ್ ಎ ಮೊಹಮ್ಮದ್ ಪರವಾಗಿ ನಮ್ಮ ಮೇಲೇಕೆ ದಾಳಿ ಮಾಡಬೇಕು ಎಂದು ಪ್ರಶ್ನಿಸಿದರು.

ನೀವು ಜೆಇಎಂ ಸಂಘಟನೆಯನ್ನು ನಿಮ್ಮ ಮಣ್ಣಿನಲ್ಲಿ ಸಾಕಿ ಬೆಳೆಸಿ ಪೋಷಿಸುತ್ತಿದ್ದೀರಿ. ಭಾರತ ಅದಕ್ಕೆ ಪ್ರತಿಯಾಗಿ ದಾಳಿ ಮಾಡಿದಾಗ ಭಯೋತ್ಪಾದಕರ ಪರವಾಗಿ ನೀವು ದಾಳಿ ಮಾಡುತ್ತೀರಿ ಎಂದು ಪಾಕಿಸ್ತಾನ ಸರ್ಕಾರದ ಮೇಲೆ ಸುಷ್ಮಾ ಸ್ವರಾಜ್ ಹರಿಹಾಯ್ದರು. ಭಾರತ ಮತ್ತು ಪಾಕಿಸ್ತಾನದ ದ್ವಿಪಕ್ಷೀಯ ಸಂಬಂಧವನ್ನು ನಾಶಗೊಳಿಸಲು ಹೊರಟಿರುವ ಐಎಸ್ಐ ಮತ್ತು ಅದರ ಸೇನೆಯನ್ನು ನಿಯಂತ್ರಿಸಬೇಕಾದ ಅಗತ್ಯವಿದೆ ಎಂದರು.

 

 

 

 

 

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago