Featured

ಜೈ ಶ್ರೀರಾಮ್‌‘ ಎನ್ನುವುದು ರಾಜಕೀಯ ಘೋಷಣೆಯಲ್ಲ, ಭಗವಾನ್ ರಾಮ ಈ ದೇಶದ ಹೆಮ್ಮೆ : ಶಿವಸೇನೆ ಮುಖಂಡ ಸಂಜಯ್ ರಾವುತ್ -Vishwanews24

ಜೈ ಶ್ರೀರಾಮ್‌‘ ಎನ್ನುವುದು ರಾಜಕೀಯ ಘೋಷಣೆಯಲ್ಲ, ಭಗವಾನ್ ರಾಮ ಈ ದೇಶದ ಹೆಮ್ಮೆ : ಶಿವಸೇನೆ ಮುಖಂಡ ಸಂಜಯ್ ರಾವುತ್ -Vishwanews24

ಮುಂಬೈ: ‘ಜೈ ಶ್ರೀರಾಮ್‌‘ ಎನ್ನುವುದು ರಾಜಕೀಯ ಘೋಷಣೆಯಲ್ಲ. ಇದು ನಂಬಿಕೆಯ ವಿಷಯ. ಈ ಘೋಷಣೆಯಿಂದ ಯಾರೊಬ್ಬರ ಜಾತ್ಯತೀತತೆಗೂ ಧಕ್ಕೆ ಆಗುವುದಿಲ್ಲ’ ಎಂದು ರಾಜ್ಯಸಭೆ ಸದಸ್ಯ, ಶಿವಸೇನೆ ಮುಖಂಡ ಸಂಜಯ್ ರಾವುತ್ ಹೇಳಿದ್ದಾರೆ.

‘ಈಚೆಗೆ ಕೋಲ್ಕತ್ತದಲ್ಲಿ ನಡೆದ ಕಾರ್ಯಕ್ರಮದಲ್ಲಿ ‘ಜೈ ಶ್ರೀರಾಮ್’ ಘೋಷಣೆ ಕೂಗಿದಾಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನೋವಾಗಿದೆ’ ಎಂಬ ಬಿಜೆಪಿ ಆರೋಪಿಸಿರುವ ಕುರಿತು ಗಮನಸೆಳೆದಾಗ ರಾವುತ್ ಹೀಗೆ ಪ್ರತಿಕ್ರಿಯಿಸಿದರು.

ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ರಾವುತ್, ‘ಭಗವಾನ್ ರಾಮ ಈ ದೇಶದ ಹೆಮ್ಮೆ. ಇದು, ನಂಬಿಕೆಗೆ ಸಂಬಂಧಿಸಿದೆ. ಮಮತಾ ದೀದಿಗೂ ಭಗವಾನ್ ಶ್ರೀರಾಮನ ಮೇಲೆ ನಂಬಿಕೆ ಇರುವ ಬಗ್ಗೆ ನನಗೆ ಖಾತ್ರಿಯಿದೆ‘ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಜೈ ಶ್ರೀರಾಮ್‌‘ ಎಂದು ಘೋಷಣೆ ಕೂಗುವಂತೆ ಯಾರನ್ನೂ ಒತ್ತಾಯಿಸುವುದಿಲ್ಲ : ಯೋಗಿ ಆದಿತ್ಯನಾಥ್ -Vishwanews24

ಈ ಕುರಿತು ಶಿವಸೇನೆ ಮುಖವಾಣಿ ‘ಸಾಮ್ನಾ’ದ ಸಂಪಾದಕೀಯದಲ್ಲಿ, ‘ಅಂದು ‘ಜೈ ಶ್ರೀರಾಮ್‘ ಘೋಷಣೆ ಕೇಳಿ ಮಮತಾ ಬ್ಯಾನರ್ಜಿ ವಿಚಲಿತರಾಗುವ ಅಗತ್ಯವಿರಲಿಲ್ಲ. ಅಲ್ಲದೆ, ಘೋಷಣೆ ಕೂಗಿದವರ ಜೊತೆ ಮಮತಾ ಮಾತು ಮುಂದುವರಿಸಿದ್ದರೆ ಗಲಾಟೆ ಆಗುತ್ತಿತ್ತೇನೋ? ಆದರೆ, ಎಲ್ಲ ಮತ ಬ್ಯಾಂಕ್‌ಗಳತ್ತ ಗಮನ ಕೇಂದ್ರೀಕರಿಸಿದ್ದಾರೆ’ ಎಂದು ಉಲ್ಲೇಖಿಸಿದೆ.
‘ಮಮತಾ ಬ್ಯಾನರ್ಜಿ ಅವರಲ್ಲಿರುವ ‘ದೌರ್ಬಲ್ಯ ಅಂಶ‘ಗಳನ್ನು ಬಿಜೆಪಿ ಗುರುತಿಸಿದೆ. ವಿಧಾನಸಭಾ ಚುನಾವಣೆ ಮುಗಿಯವವರೆಗೂ ಅವರ ಇಂಥ ಸೂಕ್ಷ್ಮ, ಭಾವನಾತ್ಮಕ ಅಂಶಗಳನ್ನು ಬಳಸಿ ಆಟವಾಡಲಿದೆ’ ಎಂದು ಸಂಪಾದಕೀಯದಲ್ಲಿ ಶಿವಸೇನೆ ತರಾಟೆ ತೆಗೆದುಕೊಂಡಿದೆ.

ಸಂಪಾದಕೀಯದಲ್ಲಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಲಾಗಿದ್ದು, ಚುನಾವಣೆಯಲ್ಲಿ ಮಮತಾ ಅವರನ್ನು ಸೋಲಿಸಲು ಅವರದೇ ಪಕ್ಷ ಟಿಎಂಸಿ ಮುಖಂಡರನ್ನು ಸೆಳೆಯುತ್ತಿದೆ ಎಂದಿದೆ.
ಸದ್ಯ, ಪಶ್ಚಿಮ ಬಂಗಾಳ, ಪಂಜಾಬ್‌ ಮತ್ತು ಮಹಾರಾಷ್ಟ್ರ ರಾಜ್ಯಗಳು ‘ದೇಶದ ಸ್ವಾತಂತ್ರ್ಯ ಹೋರಾಟ’ದ ಮುಂಚೂಣಿಯಲ್ಲಿವೆ. ಈ ರಾಜ್ಯಗಳು ಸದ್ಯ, ತನ್ನ ಆತ್ಮಗೌರವಕ್ಕಾಗಿ ಹೋರಾಟ ನಡೆಸುತ್ತಿವೆ. ಕೇಂದ್ರ ಇದರ ವಿರುದ್ಧವಾಗಿದೆ ಎಂದು ಬರೆಯಲಾಗಿದೆ.

ಇದನ್ನೂ ಓದಿ : ಮಂಗಳೂರು: ಕೇಂದ್ರ ಸರಕಾರದ ರೈತ ವಿರೋಧಿ ಮಸೂದೆ ಖಂಡಿಸಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ.. Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

7 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

8 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

12 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

12 hours ago