ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ ; ನಾಲ್ವರ ಬಂಧನ – Vishwanews24
ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ಪ್ರಕರಣ- ನಾಲ್ವರ ಬಂಧನ
ಬೆಂಗಳೂರು :ಜೈ ಶ್ರೀರಾಮ್ ಘೋಷಣೆ ಕೂಗಿದ್ದಕ್ಕೆ ಹಲ್ಲೆ ನಡೆಸಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಈಶಾನ್ಯ ವಿಭಾಗ ಡಿಸಿಪಿ ಲಕ್ಷ್ಮಿಪ್ರಸಾದ್, ಘಟನೆಗೆ ಸಂಬಂಧಪಟ್ಟಂತೆ ನಾಲ್ವರನ್ನು ಬಂಧಿಸಲಾಗಿದೆ. ಸಿಸಿಟಿವಿ ದೃಶ್ಯಗಳ ಪರಿಶೀಲನೆ ಕೂಡ ಮಾಡಲಾಗಿದೆ. ಘಟನೆಯಲ್ಲಿ ನಾಲ್ವರು ಭಾಗಿಯಾಗಿರುವುದು ಗೊತ್ತಾಗಿದೆ. ನಾಲ್ವರಲ್ಲಿ ಇಬ್ಬರು ಅಪ್ರಾಪ್ತರಿದ್ದಾರೆ. ಪ್ರಮುಖ ಆರೋಪಿ ಫರ್ಮಾನ್, ಸಮೀರ್ ಎಂದು ತಿಳಿಸಿದ್ದಾರೆ.
ಉಡುಪಿ : ಮಲಬಾರ್ ಗೋಲ್ಡ್ ನಲ್ಲಿ ವಜ್ರಾಭರಣಗಳ ಪ್ರದರ್ಶನಕ್ಕೆ ಚಾಲನೆ – Vishwanews24
ತನಿಖೆ ಮುಂದುವರೆದಿದೆ. ಮತ್ತೆ ಯಾರಾದರೂ ಭಾಗಿಯಾಗಿದ್ದಾರಾ ಎಂದು ಪರಿಶೀಲಿಸಲಾಗುತ್ತಿದೆ. ಆರೋಪಿಗಳು ಹೋಗುತ್ತಿರಬೇಕಾದರೆ ಕಾರನ್ನ ಗಮನಿಸಿದ್ದಾರೆ. ಕಾರಲ್ಲಿ ಬಾವುಟ ಹಿಡಿದು ಹೋಗ್ತಿರೋದು ನೋಡಿ ವಾಪಸ್ ಬಂದಿದ್ದಾರೆ. ಕಾರನ್ನು ಅಡ್ಡ ಹಾಕಿ ಗಲಾಟೆ ಮಾಡಿದ್ದಾರೆ ಎನ್ನಲಾಗಿದೆ.
ವಿದ್ಯಾರಣ್ಯಪುರ ಪೊಲೀಸರಿಂದ ವಿಚಾರಣೆ ನಡೆಸಲಾಗುತ್ತಿದೆ. ಗಾಂಜಾ ನಶೆಯಲ್ಲಿ ಕಾರು ಅಡ್ಡ ಹಾಕಿ ಗಲಾಟೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಪುತ್ತೂರು : ಬೈಕ್ ಗೆ ಜೀಪು ಡಿಕ್ಕಿ – ಸವಾರ ಸ್ಥಳದಲ್ಲೇ ಮೃತ್ಯು ; ಇಬ್ಬರು ಗಂಭೀರ.. Vishwanews24
