Featured

ಜೋಗ ಜಲಪಾತ  ನೋಡಲು ಬರುವ ಪ್ರವಾಸಿಗರಿಗೆ 2 ಗಂಟೆ ಸಮಯ ನಿಗದಿ ಹಾಗೂ ಶುಲ್ಕ ಹೆಚ್ಚಳ ; ಪ್ರವಾಸಿಗರು ಆಕ್ರೋಶ – vishwanews24

ಜೋಗ ಜಲಪಾತ  ನೋಡಲು ಬರುವ ಪ್ರವಾಸಿಗರಿಗೆ 2 ಗಂಟೆ ಸಮಯ ನಿಗದಿ ಹಾಗೂ ಶುಲ್ಕ ಹೆಚ್ಚಳ ; ಪ್ರವಾಸಿಗರು ಆಕ್ರೋಶ

ಶಿವಮೊಗ್ಗ: ಜೋಗ ಜಲಪಾತ  ನೋಡಲು ಬರುವ ಪ್ರವಾಸಿಗರಿಗೆ ಜೋಗ ನಿರ್ವಹಣಾ ಪ್ರಾಧಿಕಾರ ಶುಲ್ಕ ಹೆಚ್ಚಳ ಮಾಡಿದ್ದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೋಗ ಜಲಪಾತದಲ್ಲಿ ಅಭಿವೃದ್ದಿ ಕಾರ್ಯ ಪೂರ್ಣಗೊಳಿಸುವ ಮೊದಲೇ ಶುಲ್ಕ ಹೆಚ್ಚಿಸಿ, ಜೋಗ ನಿರ್ವಹಣಾ ಪ್ರಾಧಿಕಾರವು ಪ್ರವಾಸಿಗರಿಂದ ಹಣ ವಸೂಲಿಗೆ ಇಳಿದಿದೆ. ಹಾಗೆಯೇ ಜೋಗದ ಸೌಂದರ್ಯ ನೋಡಲು 2 ಗಂಟೆಯ ಅವಧಿ ನಿಗದಿ ಮಾಡಿದೆ. ಇದರಿಂದಾಗಿ 2 ಗಂಟೆಯೊಳಗೆ ಜೋಗದ ಪರಿಸರ ನೋಡಲು ಸಾಧ್ಯವೇ? ಎಂದು ನಿರ್ವಹಣಾ ಪ್ರಾಧಿಕಾರದ ನಡೆಗೆ ಪ್ರವಾಸಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಬಸ್‌ಗೆ 150 ರೂ. ಇದ್ದ ಶುಲ್ಕ 200 ರೂ., ಕಾರಿಗೆ 50 ರೂ. ಇದ್ದ ಶುಲ್ಕ 80 ರೂ. ಮತ್ತು ಒಬ್ಬ ಪ್ರವಾಸಿಗನಿಗೆ 10 ರೂ. ಇದ್ದ ಶುಲ್ಕ 20 ರೂ.ಗೆ ಏರಿಕೆ ಮಾಡಲಾಗಿದೆ.

ಪ್ರಕೃತಿದತ್ತವಾಗಿರುವ ಜಲಪಾತ ವೀಕ್ಷಣೆಗೆ ಶುಲ್ಕ ದುಬಾರಿ ಮಾಡಲಾಗುತ್ತಿದೆ ಏಕೆ? ಪ್ರವಾಸಿಗರಿಂದ ಈ ರೀತಿ ಸುಲಿಗೆ ಏಕೆ? ಜಲಪಾತ ಪೂರ್ಣ ಅಭಿವೃದ್ಧಿಗೊಳಿಸದೇ ಶುಲ್ಕ ಹೆಚ್ಚಳ ಬೇಡ ಎಂದು ಸ್ಥಳಿಯರಿಂದಲೇ ಜೋಗ ನಿರ್ವಾಹಣಾ ಪ್ರಾಧಿಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

8 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

8 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

8 hours ago