ಶಿವಮೊಗ್ಗ: ಜೋಗ ಜಲಪಾತ ನೋಡಲು ಬರುವ ಪ್ರವಾಸಿಗರಿಗೆ ಜೋಗ ನಿರ್ವಹಣಾ ಪ್ರಾಧಿಕಾರ ಶುಲ್ಕ ಹೆಚ್ಚಳ ಮಾಡಿದ್ದಕ್ಕೆ ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಜೋಗ ಜಲಪಾತದಲ್ಲಿ ಅಭಿವೃದ್ದಿ ಕಾರ್ಯ ಪೂರ್ಣಗೊಳಿಸುವ ಮೊದಲೇ ಶುಲ್ಕ ಹೆಚ್ಚಿಸಿ, ಜೋಗ ನಿರ್ವಹಣಾ ಪ್ರಾಧಿಕಾರವು ಪ್ರವಾಸಿಗರಿಂದ ಹಣ ವಸೂಲಿಗೆ ಇಳಿದಿದೆ. ಹಾಗೆಯೇ ಜೋಗದ ಸೌಂದರ್ಯ ನೋಡಲು 2 ಗಂಟೆಯ ಅವಧಿ ನಿಗದಿ ಮಾಡಿದೆ. ಇದರಿಂದಾಗಿ 2 ಗಂಟೆಯೊಳಗೆ ಜೋಗದ ಪರಿಸರ ನೋಡಲು ಸಾಧ್ಯವೇ? ಎಂದು ನಿರ್ವಹಣಾ ಪ್ರಾಧಿಕಾರದ ನಡೆಗೆ ಪ್ರವಾಸಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಬಸ್‌ಗೆ 150 ರೂ. ಇದ್ದ ಶುಲ್ಕ 200 ರೂ., ಕಾರಿಗೆ 50 ರೂ. ಇದ್ದ ಶುಲ್ಕ 80 ರೂ. ಮತ್ತು ಒಬ್ಬ ಪ್ರವಾಸಿಗನಿಗೆ 10 ರೂ. ಇದ್ದ ಶುಲ್ಕ 20 ರೂ.ಗೆ ಏರಿಕೆ ಮಾಡಲಾಗಿದೆ.
ಪ್ರಕೃತಿದತ್ತವಾಗಿರುವ ಜಲಪಾತ ವೀಕ್ಷಣೆಗೆ ಶುಲ್ಕ ದುಬಾರಿ ಮಾಡಲಾಗುತ್ತಿದೆ ಏಕೆ? ಪ್ರವಾಸಿಗರಿಂದ ಈ ರೀತಿ ಸುಲಿಗೆ ಏಕೆ? ಜಲಪಾತ ಪೂರ್ಣ ಅಭಿವೃದ್ಧಿಗೊಳಿಸದೇ ಶುಲ್ಕ ಹೆಚ್ಚಳ ಬೇಡ ಎಂದು ಸ್ಥಳಿಯರಿಂದಲೇ ಜೋಗ ನಿರ್ವಾಹಣಾ ಪ್ರಾಧಿಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…
ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…
ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್ ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…
ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್ ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ…
ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…
ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…