ವಾರಾಣಸಿ: ಜ್ಞಾನವಾಪಿ ಮಸೀದಿ ಸಂಕೀರ್ಣದ ಸಮೀಕ್ಷೆಯ ಸಂದರ್ಭ ಹಿಂದೂ ಪರ ವಕೀಲರು ಕೊಳದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಿದ್ದು, ಆದರೆ ಇದನ್ನು ಮಸೀದಿಯ ಆಡಳಿತ ಮಂಡಳಿ ತಳ್ಳಿಹಾಕಿದೆ. ಕೊಳದಲ್ಲಿ ಶಿವಲಿಂಗ ಪತ್ತೆಯಾಗಿಲ್ಲ. ಅಲ್ಲಿರುವುದು ಕೇವಲ ಕಾರಂಜಿ ( ಫೌಂಟನ್) ಇದನ್ನೇ ಅವರು ಶಿವಲಿಂಗ ಎಂದು ಅಂದುಕೊಂಡಿದ್ದಾರೆ ಎಂದು ಹೇಳಿದೆ. ಹಾಗೆಯೇ, ಕೊಳಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿದ್ದನ್ನು ವಿರೋಧಿಸಿದ್ದಾರೆ.
ಇನ್ನೊಂದೆಡೆ ಇದು ಕಾರಂಜಿ, ‘ಶಿವಲಿಂಗ’ ಅಲ್ಲ. ಪ್ರತಿ ಮಸೀದಿಯಲ್ಲಿ ಈ ಕಾರಂಜಿ ಇದೆ. ನ್ಯಾಯಾಲಯದ ಆಯುಕ್ತರು ಏಕೆ ಹಕ್ಕು ಮಂಡಿಸಲಿಲ್ಲ? ಸ್ಥಳವನ್ನು ಸೀಲಿಂಗ್ ಮಾಡುವ ಆದೇಶವು 1991 ರ ಕಾಯಿದೆಯ ಉಲ್ಲಂಘನೆಯಾಗಿದೆ” ಎಂದು ಎಐಎಂಐಎಂ ಮುಖ್ಯಸ್ಥ ಎ ಒವೈಸಿ ಹೇಳಿದ್ದಾರೆ.
ಮೂರು ದಿನಗಳ ಜ್ಞಾನವಾಪಿ ಮಸೀದಿ ಸಮೀಕ್ಷೆ ಸೋಮವಾರ ಮುಕ್ತಾಯಗೊಂಡ ನಂತರ, ಹಿಂದೂ ಪರ ವಕೀಲರು ಮಸೀದಿ ಸಂಕೀರ್ಣದ ವಝುಖಾನಾ ಅಥವಾ ಜಲಾಶಯದಲ್ಲಿ ಶಿವಲಿಂಗ ಕಂಡುಬಂದಿದೆ ಎಂದು ಹೇಳಿದ್ದು ಈ ಕೊಳಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಮಸೀದಿ ಒಳಗಡೆ ಶಿವಲಿಂಗ ಪತ್ತೆಯಾಗಿದೆ ಎಂಬ ವಕೀಲರ ಹೇಳಿಕೆ ದೇಶಾದದ್ಯಾಂತ ಸಂಚಲನಕ್ಕೆ ಕಾರಣವಾಗಿದೆ.
ಬಾಬರಿ ಮಸೀದಿಯ ನಂತರ ಮುಸ್ಲಿಮರು ಮತ್ತೊಂದು ಮಸೀದಿಯನ್ನು ಕಳೆದುಕೊಳ್ಳಲು ಸಿದ್ಧರಿಲ್ಲ ಎಂದು ಓವೈಸಿ ಹೇಳಿದ್ದಾರೆ. ಈ ಬೆಳವಣಿಗೆ ಬಗ್ಗೆ ಪ್ರತಿಕ್ರಿಯಿಸಿರುವ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, “ನೀವು ಎಷ್ಟೇ ಸತ್ಯವನ್ನು ಮುಚ್ಚಿಟ್ಟರೂ ಮುಂದೊಂದು ದಿನ ಅದು ಹೊರಬರುತ್ತದೆ, ಸತ್ಯ ಹಿ ಶಿವ ಹೈ” ಎಂದು ಟ್ವೀಟ್ ಮಾಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…