ಚಿಕ್ಕಮಗಳೂರು:ಖಾಸಗಿ ಕ್ಲಿನಿಕ್ ವೈದ್ಯ ನೀಡಿದ ಇಂಜೆಕ್ಷನ್ನಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಏಳು ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ.
ಅಜ್ಜಂಪುರ ಸಮೀಪದ ಕೆಂಚಾಪುರ ಗ್ರಾಮದ ಅಶೋಕ್ ಅವರ 7 ವರ್ಷದ ಮಗ ಸೋನೇಶ್ ಕಳೆದ ನಾಲ್ಕು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ. ಪೋಷಕರು ಸೋನೇಶ್ ನನ್ನು ಅಜ್ಜಂಪುರ ಪಟ್ಟಣದ ಖಾಸಗಿ ಕ್ಲಿನಿಕ್ ವೈದ್ಯ ವರುಣ್ ಬಳಿ ಸೆಪ್ಟೆಂಬರ್ 24 ರಂದು ಚಿಕಿತ್ಸೆಗಾಗಿ ಕರೆದೊಯ್ದಿದ್ರು. ವೈದ್ಯ ವರುಣ್, ಬಾಲಕನ ಸೊಂಟಕ್ಕೆ ಇಂಜೆಕ್ಷನ್ ಮಾಡಿದ್ದು ಇದೆ ಇಂಜೆಕ್ಷನ್ ಓವರ್ ಡೋಸ್ ಆಗಿ ಬಾಲಕನ ಜೀವವನ್ನೇ ತೆಗೆದಿದೆ.
ವೈದ್ಯ ವರುಣ್ ನೀಡಿದ ಓವರ್ ಡೋಸ್ ಇಂಜೆಕ್ಷನ್ ನಿಂದ ಬಾಲಕನ ಸೊಂಟದ ಭಾಗದಲ್ಲಿ ಬೊಬ್ಬೆಗಳು ಕಾಣಿಸಿಕೊಂಡಿದ್ದವು ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಿನ್ನೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸೋನೇಶ್ ಮೃತಪಟ್ಟಿದ್ದಾರೆ.
ಶವ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಸರ್ಕಾರಿ ಆಸ್ಪತ್ರೆಗೆ ಬಾಲಕನ ಮೃತದೇಹವನ್ನು ರವಾನೆ ಮಾಡಲಾಗಿದೆ. ಈ ಸಂಬಂಧ ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಡಾ ವರುಣ್ ವಿರುದ್ಧ ಪ್ರಕರಣ ದಾಖಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…