ಜ. 1 ರಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಪ್ರಾರಂಭ : ಸಿಎಂ -Vishwanews24

Featured, ರಾಜ್ಯ ನ್ಯೂಸ್

ಜ. 1 ರಿಂದ 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಪ್ರಾರಂಭ : ಸಿಎಂ -Vishwanews24

ಬೆಂಗಳೂರು : ”2021ರ ಜ. 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ ಮಾಡಲಾಗುವುದು” ಎಂದು ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ತಿಳಿಸಿದ್ದಾರೆ.

 

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ”2021ರ ಜನವರಿ 1 ರಿಂದ, 10ನೇ ತರಗತಿ ಮತ್ತು ದ್ವಿತೀಯ ಪಿಯುಸಿ ತರಗತಿ ಹಾಗೂ 6 ರಿಂದ 9ನೇ ತರಗತಿಗೆ ವಿದ್ಯಾಗಮ ಪ್ರಾರಂಭ, ಹದಿನೈದು ದಿನಗಳ ಕಾಲ ಪರಿಸ್ಥಿತಿ ಅವಲೋಕಿಸಿ ಇತರ ತರಗತಿ ಪ್ರಾರಂಭಿಸುವ ಕುರಿತು ನಿರ್ಧಾರ. ಮುಖ್ಯಮಂತ್ರಿ ಬಿ ಎಸ್‌ ಯಡಿಯೂರಪ್ಪ ಅಧ್ಯಕ್ಷತೆಯ ಇಂದಿನ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ” ಎಂದು ತಿಳಿಸಿದ್ದಾರೆ.