ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ಜ. 22 ರಂದು ಉದ್ಘಾಟನೆಯಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಏರ್ ಇಂಡಿಯಾ ಎಕ್ಸಪ್ರೆಸ್ ಜ. 17ರಿಂದ ಬೆಂಗಳೂರು ಮತ್ತು ಕೋಲ್ಕತದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ.
ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನವು ಜ. 17 ರಂದು ಬೆಳಿಗ್ಗೆ 8.05 ಕ್ಕೆ ಹೊರಟು 10.35 ಕ್ಕೆ ಅಯೋಧ್ಯೆಯನ್ನು ತಲುಪಲಿದೆ. ಅದೇ ರೀತಿ ಹಿಂತಿರುಗುವ ವಿಮಾನವು ಅಯೋಧ್ಯೆಯಿಂದ ಮಧ್ಯಾಹ್ನ 3.40 ಕ್ಕೆ ಹೊರಡಲಿದ್ದು, ಸಂಜೆ 6.10 ಕ್ಕೆ ಬೆಂಗಳೂರಿಗೆ ತಲುಪಲಿದೆ ಎಂದು ತಿಳಿದು ಬಂದಿದೆ.
ಅದೇ ರೀತಿ ಅಯೋಧ್ಯೆ-ಕೋಲ್ಕತ್ತಾ ಮಾರ್ಗದ ವಿಮಾನವು ಅಯೋಧ್ಯೆಯಿಂದ ಬೆಳಿಗ್ಗೆ 11.05 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12.50 ಕ್ಕೆ ಕೋಲ್ಕತ್ತಾದಲ್ಲಿ ಲ್ಯಾಂಡ್ ಆಗಲಿದೆ. ಕೋಲ್ಕತ್ತಾ-ಅಯೋಧ್ಯೆ ವಿಮಾನವು ಕೋಲ್ಕತ್ತಾದಿಂದ ಮಧ್ಯಾಹ್ನ 1:25 ಕ್ಕೆ ಹೊರಡಲಿದ್ದು, ಮಧ್ಯಾಹ್ನ 3.10 ಕ್ಕೆ ಅಯೋಧ್ಯೆಯನ್ನು ತಲುಪಲಿದೆ.
ಇನ್ನು ಅಯೋಧ್ಯೆ, ಬೆಂಗಳೂರು, ಕೋಲ್ಕತ್ತ ನಡುವೆ ವಾರಕ್ಕೆ ಮೂರು ತಡೆರಹಿತ, ನೇರ ವಿಮಾನ ಯಾನ ಇರಲಿದೆ. ಇದರ ವೇಳಾಪಟ್ಟಿ ಮತ್ತು ಬುಕ್ಕಿಂಗ್ ವ್ಯವಸ್ಥೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ವೆಬ್‌ಸೈಟ್ (airindiaexpress.com), ಆಪ್‌ಗಳಲ್ಲಿ ಲಭ್ಯವಿದೆ ಎಂದು ಕಂಪನಿ ಶುಕ್ರವಾರ ಪ್ರಕಟನೆಯಲ್ಲಿ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…