Featured

ಜ. 17ರಿಂದ ಬೆಂಗಳೂರು – ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಆರಂಭ – vishwanews24

ಜ. 17ರಿಂದ ಬೆಂಗಳೂರು-ಅಯೋಧ್ಯೆಗೆ ಏರ್ ಇಂಡಿಯಾ ವಿಮಾನ ಸೇವೆ ಆರಂಭ

ಬೆಂಗಳೂರು : ಅಯೋಧ್ಯೆಯಲ್ಲಿ ನಿರ್ಮಿಸಲಾಗುತ್ತಿರುವ ಭವ್ಯ ರಾಮ ಮಂದಿರ ಜ. 22 ರಂದು ಉದ್ಘಾಟನೆಯಾಗಲಿದೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾಧಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದ್ದು, ಏರ್​ ಇಂಡಿಯಾ ಎಕ್ಸಪ್ರೆಸ್ ​ ಜ. 17ರಿಂದ ಬೆಂಗಳೂರು ಮತ್ತು ಕೋಲ್ಕತದಿಂದ ಅಯೋಧ್ಯೆಗೆ ನೇರ ವಿಮಾನಯಾನ ಆರಂಭಿಸಲಿದೆ.

ಬೆಂಗಳೂರು-ಅಯೋಧ್ಯೆ ಮಾರ್ಗದ ಮೊದಲ ವಿಮಾನವು ಜ. 17 ರಂದು ಬೆಳಿಗ್ಗೆ 8.05 ಕ್ಕೆ ಹೊರಟು 10.35 ಕ್ಕೆ ಅಯೋಧ್ಯೆಯನ್ನು ತಲುಪಲಿದೆ. ಅದೇ ರೀತಿ ಹಿಂತಿರುಗುವ ವಿಮಾನವು ಅಯೋಧ್ಯೆಯಿಂದ ಮಧ್ಯಾಹ್ನ 3.40 ಕ್ಕೆ ಹೊರಡಲಿದ್ದು, ಸಂಜೆ 6.10 ಕ್ಕೆ ಬೆಂಗಳೂರಿಗೆ ತಲುಪಲಿದೆ ಎಂದು ತಿಳಿದು ಬಂದಿದೆ.

ಅದೇ ರೀತಿ ಅಯೋಧ್ಯೆ-ಕೋಲ್ಕತ್ತಾ ಮಾರ್ಗದ ವಿಮಾನವು ಅಯೋಧ್ಯೆಯಿಂದ ಬೆಳಿಗ್ಗೆ 11.05 ಕ್ಕೆ ಹೊರಡಲಿದ್ದು, ಮಧ್ಯಾಹ್ನ 12.50 ಕ್ಕೆ ಕೋಲ್ಕತ್ತಾದಲ್ಲಿ ಲ್ಯಾಂಡ್​ ಆಗಲಿದೆ. ಕೋಲ್ಕತ್ತಾ-ಅಯೋಧ್ಯೆ ವಿಮಾನವು ಕೋಲ್ಕತ್ತಾದಿಂದ ಮಧ್ಯಾಹ್ನ 1:25 ಕ್ಕೆ ಹೊರಡಲಿದ್ದು, ಮಧ್ಯಾಹ್ನ 3.10 ಕ್ಕೆ ಅಯೋಧ್ಯೆಯನ್ನು ತಲುಪಲಿದೆ.

ಇನ್ನು ಅಯೋಧ್ಯೆ, ಬೆಂಗಳೂರು, ಕೋಲ್ಕತ್ತ ನಡುವೆ ವಾರಕ್ಕೆ ಮೂರು ತಡೆರಹಿತ, ನೇರ ವಿಮಾನ ಯಾನ ಇರಲಿದೆ. ಇದರ ವೇಳಾಪಟ್ಟಿ ಮತ್ತು ಬುಕ್ಕಿಂಗ್ ವ್ಯವಸ್ಥೆ ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ವೆಬ್‌ಸೈಟ್ (airindiaexpress.com), ಆಪ್‌ಗಳಲ್ಲಿ ಲಭ್ಯವಿದೆ ಎಂದು ಕಂಪನಿ ಶುಕ್ರವಾರ ಪ್ರಕಟನೆಯಲ್ಲಿ ತಿಳಿಸಿದೆ.

Vishwa News 24

Recent Posts

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

4 minutes ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

12 minutes ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

20 minutes ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

27 minutes ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

40 minutes ago

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ – vishwanews24

ರಾಮನಗರ : ಕ್ರಷರ್ ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 7 ಕಾರ್ಮಿಕರ ದುರ್ಮರಣ, ಹಲವರಿಗೆ ಗಾಯ ರಾಮನಗರ: ರಾಮನಗರ ಜಿಲ್ಲೆಯ ಬೆಂಗಳೂರು…

52 minutes ago