ಉಡುಪಿ: ವಿಶ್ವದೆಲ್ಲೆಡೆ ಪ್ರಸಿದ್ಧವಾಗಿರುವ ಉಡುಪಿ ಪುತ್ತಿಗೆ ಮಠದ ಪರ್ಯಾಯೋತ್ಸವ ಜ.17 ಮತ್ತು 18ರಂದು ನಡೆಯಲಿದ್ದು, ಇದೀಗ ಅಂತಿಮ ಹಂತದ ಸಿದ್ದತೆಯಾಗುತ್ತಿದೆ.
ಈ ಬಾರಿ ಅಷ್ಟ ಮಠಗಳಲ್ಲಿ ಒಂದಾದ ಪುತ್ತಿಗೆ ಮಠದ ಶ್ರೀ ಸುಗುಣೇಂಧ್ರತೀರ್ಥಶ್ರೀಪಾದರು ಕೃಷ್ಣ ಪೂಜೆಯನ್ನು ಕೈಗೊಳ್ಳಲು ಅಣಿಯಾಗಿದ್ದಾರೆ. ಭಾರತ ದೇಶದಲ್ಲಿ ಮಾತ್ರವಲ್ಲದೇ ವಿದೇಶಗಳಲ್ಲಿ ಕೂಡಾ ಸನಾತನ ಹಿಂದೂ ಧರ್ಮವನ್ನು ಪ್ರಚುರಪಡಿಸಿ ಅಮೆರಿಕಾ, ಇಂಗ್ಲಂಡ್ ಮಾತ್ರವಲ್ಲದೇ ಇತರ ಹಲವಾರು ಪಾಶ್ಚಿಮಾತ್ಯ ದೇಶಗಳಲ್ಲಿ ಮಂದಿರ, ಮಠಗಳನ್ನು ಸ್ಥಾಪಿಸಿರುವ ಪುತ್ತಿಗೆ ಶ್ರೀಪಾದರು ಈ ಬಾರಿ ನಾಲ್ಕನೇ ಬಾರಿಗೆ ಪರ್ಯಾಯ ಪೀಠವನ್ನೇರಲಿದ್ದಾರೆ.
ಪುತ್ತಿಗೆ ಪರ್ಯಾಯಕ್ಕೆ ಈಗಾಗಲೇ ಉಡುಪಿಯಲ್ಲಿ ಭರದ ತಯಾರಿಗಳು ನಡೆದಿದ್ದು ಅಂತಿಮ ಹಂತದಲ್ಲಿವೆ. ಈ ಬಾರಿ ಪುತ್ತಿಗೆ ಶ್ರೀಪಾದರು ತಮ್ಮ ಪರ್ಯಾಯವನ್ನು ವಿಶ್ವಗೀತಾ ಪರ್ಯಾಯ ಎಂದು ಘೋಷಿಸಿದ್ದು, ಭಗವ್ದಗೀತೆಯನ್ನು ಪ್ರಚುರಪಡಿಸುವ ನಿಟ್ಟಿನಲ್ಲಿ ಕೋಟಿ ಗೀತಾಲೇಖನ ಯಜ್ಞದಂತಹ ವಿಶೇಷ ಯೋಜನೆಗಳನ್ನು ರೂಪಿಸಿದ್ದಾರೆ.
ಈ ಬಾರಿ ನಗರಾಲಂಕಾರಕ್ಕೆ ವಿಶೇಷ ಒತ್ತನ್ನು ಪರ್ಯಾಯ ಸ್ವಾಗತ ಸಮಿತಿ ನೀಡಿದ್ದು ಪರ್ಯಾಯದ ದಿನ ದಂಡತೀರ್ಥದಿಂದ ಉಡುಪಿಗೆ ಆಗಮಿಸುವ ದಾರಿಯುದ್ದಕ್ಕೂ ವಿಶೇಷ ವಿದ್ಯುತ್ ದೀಪಾಲಂಕಾರ, ನಗರದ ಎಲ್ಲಾ ರಸ್ತೆಗಳಿಗೆ ವಿದ್ಯುತ್ ದೀಪಗಳ ಅಲಂಕಾರ, ಮತ್ತು ಇನ್ನಿತರ ಯೋಜನೆಗಳನ್ನು ಹಾಕಿಕೊಂಡು ಇವುಗಳನ್ನು ಕಾರ್ಯಗತಗೊಳಿಸಲಾಗುತ್ತಿದೆ.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…