ಮಂಗಳೂರು: ಮಂಗಳೂರು ಮತ್ತು ಸಿಂಗಾಪುರ ನಡುವೆ ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 21 ರಿಂದ ವಾರಕ್ಕೆ ಎರಡು ಬಾರಿ ವಿಮಾನ ಸಂಚಾರ ಆರಂಭಿಸಲಿದೆ. ಇದರೊಂದಿಗೆ ಮಂಗಳೂರಿನೊಂದಿಗೆ ವಿಮಾನ ಸಂಪರ್ಕವನ್ನು ಪಡೆಯುವ ಆಗ್ನೇಯ ಏಷ್ಯಾದ ಮೊದಲ ಅಂತರರಾಷ್ಟ್ರೀಯ ತಾಣವಾಗಿ ಸಿಂಗಾಪುರ ಗುರುತಿಸಿಕೊಳ್ಳಲಿದೆ. ಈವರೆಗೆ, ಮಂಗಳೂರಿನಿಂದ ಎಲ್ಲಾ ಅಂತರರಾಷ್ಟ್ರೀಯ ವಿಮಾನಗಳು ಮಧ್ಯಪ್ರಾಚ್ಯ ದೇಶಗಳಿಗೆ ಮಾತ್ರ ಕಾರ್ಯಾಚರಿಸುತ್ತಿವೆ.
ಮಂಗಳವಾರ ಮತ್ತು ಶುಕ್ರವಾರದಂದು ಉಭಯ ನಿಲ್ದಾಣಗಳ ನಡುವೆ ವಿಮಾನಗಳು ಸಂಚಾರ ಮಾಡಲಿವೆ ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್‌ನ ಪ್ರಕಟಣೆ ತಿಳಿಸಿದೆ.
ಮಂಗಳೂರು ಸಿಂಗಾಪುರ ವಿಮಾನದ ಸಮಯ
ವಿಮಾನ ಸಂಖ್ಯೆ IX 0862 ಮಂಗಳೂರಿನಿಂದ 5.55 ಗಂಟೆಗೆ ಹೊರಟು 13.25 ಗಂಟೆಗೆ ಸಿಂಗಾಪುರ ತಲುಪಲಿದೆ. ವಿಮಾನ ಸಂಖ್ಯೆ IX 0861 ಸಿಂಗಾಪುರದಿಂದ 14.25 ಗಂಟೆಗೆ ಹೊರಟು 16.55 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ.
ಮಂಗಳೂರು ದೆಹಲಿ ಮಧ್ಯೆ ಪ್ರತಿ ದಿನ ನೇರ ವಿಮಾನ
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಫೆಬ್ರವರಿ 1 ರಿಂದ ಮಂಗಳೂರು ಮತ್ತು ದೆಹಲಿ ನಡುವೆ ಪ್ರತಿ ದಿನ ನೇರ ವಿಮಾನಯಾನ ಸೇವೆ ಒದಗಿಸಲಿದೆ. ವಿಮಾನ ಸಂಖ್ಯೆ IX 1552 ಮಂಗಳೂರಿನಿಂದ 6.40 ಗಂಟೆಗೆ ಹೊರಟು 9.35 ಗಂಟೆಗೆ ದೆಹಲಿಗೆ ತಲುಪಲಿದೆ. ವಿಮಾನ ಸಂಖ್ಯೆ IX 2768 ದೆಹಲಿಯಿಂದ 6.40 ಗಂಟೆಗೆ ಹೊರಟು ಮಂಗಳೂರಿಗೆ 9.35 ಗಂಟೆಗೆ ತಲುಪಲಿದೆ.
ಮಂಗಳೂರು ಪುಣೆ ನೇರ ವಿಮಾನ ವೇಳಾಪಟ್ಟಿ
ಏರ್ ಇಂಡಿಯಾ ಎಕ್ಸ್‌ಪ್ರೆಸ್ ಜನವರಿ 4 ರಿಂದ ಮಂಗಳೂರು ಮತ್ತು ಪುಣೆ ನಡುವೆ ಎರಡು ನೇರ ವಿಮಾನಗಳನ್ನು ನಿರ್ವಹಿಸಲಿದೆ. ವಿಮಾನ ಸಂಖ್ಯೆ IX 2256 ಪುಣೆಯಿಂದ 8 ಗಂಟೆಗೆ ಹೊರಟು 9.25 ಗಂಟೆಗೆ ಪುಣೆಗೆ ತಲುಪುತ್ತದೆ. ವಿಮಾನ ಸಂಖ್ಯೆ 2257 ಪುಣೆಯಿಂದ 9.55 ಗಂಟೆಗೆ ಹೊರಟು 11.40 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ. ವಿಮಾನ ಸಂಖ್ಯೆ 2236 ಮಂಗಳೂರಿನಿಂದ 18.30 ಗಂಟೆಗೆ ಹೊರಟು 20.00 ಗಂಟೆಗೆ ಪುಣೆಗೆ ಮತ್ತು ವಿಮಾನ ಸಂಖ್ಯೆ 2237 ಪುಣೆಯಿಂದ 20.35 ಗಂಟೆಗೆ ಹೊರಟು 22.05 ಗಂಟೆಗೆ ಮಂಗಳೂರಿಗೆ ಆಗಮಿಸಲಿದೆ.
ಮಂಗಳೂರು ಸಿಂಗಾಪುರ ಮಧ್ಯೆ ನೇರ ವಿಮಾನಯಾನ ಸಂಪರ್ಕವು ಉದ್ಯಮ ಕ್ಷೇತ್ರಕ್ಕೆ ಪೂರಕವಾಗಿರಲಿದ್ದು, ಪ್ರಯಾಣವನ್ನು ಸುಲಭಗೊಳಿಸಲಿದೆ. ಜತೆಗೆ, ಆಸಿಯಾನ್ ಮತ್ತು ಪೂರ್ವ ಏಷ್ಯಾ ರಾಷ್ಟ್ರಗಳೊಂದಿಗೆ ಭಾರತವನ್ನು ಸಂಪರ್ಕಿಸುವ ಗುರಿಯನ್ನು ಹೊಂದಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ನಮ್ಮ ಕೇಂದ್ರ ಸರ್ಕಾರದ ಆಕ್ಟ್ ಈಸ್ಟ್ ನೀತಿಗೆ ಪೂರಕವಾಗಿರಲಿದೆ ಎಂದು ಚೌಟ ಹೇಳಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…