ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ 850 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭವನ್ನು ಜನವರಿ 24 ಶನಿವಾರ ಮಧ್ಯಾಹ್ನ 3 ಗಂಟೆಗೆ ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನದ ಸಭಾಂಗಣದಲ್ಲಿ ಅಯೋಜಿಸಿರುವುದಾಗಿ ದ.ಕ. ಮೀನು ಮಾರಾಟ ಫೆಡರೇಶನ್ ಹಾಗೂ ಮಹಾಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.
ಸಮಾರಂಭವನ್ನು ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ಉದ್ಘಾಟಿಸಲಿದ್ದು, ಸಂಸ್ಥೆಯ ಅಧ್ಯಕ್ಷರಾದ ಶ್ರೀ ಯಶ್ ಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಂಗಳೂರು ದಕ್ಷಿಣ ಶಾಸಕರಾದ ಶ್ರೀ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಸದಸ್ಯರಾದ ಶ್ರೀ ಕಿಶೋರ್ ಕುಮಾರ್ ಪುತ್ತೂರು, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ದ. ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಶ್ರೀ ಜಯ ಸಿ. ಕೋಟ್ಯಾನ್, ಉರ್ವ ಮಾರಿಯಮ್ಮ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಲಕ್ಷ್ಮಣ ಕೋಡಿಕಲ್, ದ. ಕ. ಮೊಗವೀರ ಮಹಾಜನ ಸಂಘದ ಉಪಾಧ್ಯಕ್ಷರಾದ ಶ್ರೀ ಮೋಹನ್ ಬೆಂಗ್ರೆ, ದ. ಕ. ಜಿಲ್ಲಾ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷರಾದ ಶ್ರೀ ಭರತ್ ಉಳ್ಳಾಲ, ಬಿಜೆಪಿ ಮಂಗಳೂರು ನಗರ ದಕ್ಷಿಣ ಉಪಾಧ್ಯಕ್ಷರಾದ ಶ್ರೀ ಗೌತಮ್ ಕೋಡಿಕಲ್, ಮಂಗಳೂರು ಏಳು ಪಟ್ಣ ಮೊಗವೀರ ಸಂಯುಕ್ತ ಸಭಾ ಅಧ್ಯಕ್ಷರಾದ ಶ್ರೀ ಲೋಕೇಶ್ ಸುವರ್ಣ, ಮಂಗಳೂರು ಟ್ರಾಲ್ ಬೋಟ್ ಮೀನುಗಾರರ ಪ್ರಾಥಮಿಕ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ಅನಿಲ್ ಕುಮಾರ್ ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…