ಉಡುಪಿ: ಗೋಲ್ಡ್ ಕೋಸ್ಟ್ ಎಂಟರ್ಟೈನ್ಮೆಂಟ್ ವತಿಯಿಂದ ಕೋಸ್ಟಲ್ ಆಟೋ ಕಾರ್ನಿವಲ್ ಕಾರ್ಯಕ್ರಮವನ್ನು ಇದೇ ಜ.25ರಂದು ಬೆಳಿಗ್ಗೆ 9ರಿಂದ ರಾತ್ರಿ 9ರವರೆಗೆ ಕಾಪುವಿನ ಪ್ಯಾಲೇಸ್ ಗಾರ್ಡನ್ ನಲ್ಲಿ ಆಯೋಜಿಸಲಾಗಿದೆ ಎಂದು ಕಾರ್ಯಕ್ರಮದ ಸಂಯೋಜಕ ಸುದೀಪ್ ಶೆಟ್ಟಿ ತಿಳಿಸಿದರು.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಈ ಕಾರ್ಯಕ್ರಮದಲ್ಲಿ ಕಸ್ಟಮ್ ಕಾರುಗಳು, ಮೋಟಾರ್ ಸೈಕಲ್ಗಳು ಮತ್ತು ವಿಂಟೇಜ್ ವಾಹನಗಳ ಪ್ರದರ್ಶನ ನಡೆಯಲಿದೆ. ಪರ್ಫಾರ್ಮೆನ್ಸ್ ಮತ್ತು ವಿಶೇಷ ಪ್ರದರ್ಶನಗಳು, ಲೈವ್ ಆಕ್ಷನ್ ವಲಯಗಳು ಮತ್ತು ಸ್ಟಂಟ್ ಪ್ರದರ್ಶನಗಳು, ಆಹಾರ ಮಳಿಗೆಗಳು, ಆಟೋಮೊಬೈಲ್ ವಲಯದ ವಾಹನ ವಿತರಕರಿಂದ ಹೊಸ ವಾಹನಗಳ ಪ್ರದರ್ಶನ ನಡೆಯಲಿದೆ ಎಂದರು.
ಟೀಮ್ ನೆವರ್ ಇನಫ್ (ಕೊಯಮತ್ತೂರು) ಅವರಿಂದ ಸ್ಪಂಟ್ ಪ್ರದರ್ಶನ, ಆಲ್ ಓಕೆ (ಕನ್ನಡ ರ್ಯಾಪರ್ / ಗಾಯಕ) ಅವರಿಂದ ಲೈವ್ ಪರ್ಫಾರ್ಮೆನ್ಸ್ ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿದೆ ಎಂದು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಸಂಯೋಜಕರಾದ ಅಕ್ಷಯ್ ಕುಮಾರ್, ಅರ್ಜುನ್ ಪೈ, ಚೇತನ್ ಬೆಳ್ಳಿರಾಯ, ಸುಕೇಶ್ ಶೆಟ್ಟಿ ಇದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…