Featured

ಜ.29 ರಿಂದ ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

ಜ.29 ರಿಂದ ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ

ಬೆಂಗಳೂರು: 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ  ರಾಯಭಾರಿಯಾಗಿ ನಟ ಪ್ರಕಾಶ್ ರಾಜ್  ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಬಂಧ ನಡೆದ ಸಭೆಯಲ್ಲಿ ಮಾತನಾಡಿದ ಅವರು, 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜ.29 ರಿಂದ ಫೆ.6ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು, ವಿಧಾನಸೌಧದ ಗ್ರ‍್ಯಾಂಡ್ ಸ್ಟೆಪ್ಸ್ ಮೇಲೆ ಉದ್ಘಾಟನೆಯಾಗಲಿದೆ. ನಾನೇ ಉದ್ಘಾಟನೆ ಮಾಡ್ತೀನಿ. ಈ ಚಲನಚಿತ್ರೋತ್ಸವಕ್ಕೆ ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಸಮಿತಿ ನಿರ್ಧರಿಸಿದಂತೆ ಪ್ರಕಾಶ್ ರಾಜ್ ಅವರನ್ನು ರಾಯಭಾರಿಯಾಗಿ ಆಯ್ಕೆ ಮಾಡಲಾಗಿದೆ. ಚಲನಚಿತ್ರೋತ್ಸವದಲ್ಲಿ 60 ದೇಶಗಳ 200 ಚಲನಚಿತ್ರಗಳು ಪ್ರದರ್ಶನ ಆಗಲಿದೆ. 400 ಪ್ರದರ್ಶನಗಳು ಇರಲಿವೆ. ಈ ವರ್ಷ ಆಸ್ಕರ್ ಪ್ರಶಸ್ತಿಗಳಿಗೆ ಶಾರ್ಟ್ ಲಿಸ್ಟ್ ಆಗಿರೋ ಚಿತ್ರಗಳು ಪ್ರದರ್ಶನ ಆಗಲಿವೆ. ಜೊತೆಗೆ ಇತ್ತೀಚಿಗೆ ಅಗಲಿದ ನಟ ಧರ್ಮೇಂದ್ರ, ಸರೋಜಾದೇವಿ, ಉಮೇಶ್, ಶಾಜಿ ಎನ್ ಕರುಣ್, ರಘು, ಇನ್ನಿತರ ಗಣ್ಯರ ಸ್ಮರಣಾರ್ಥ ಶ್ರದ್ಧಾಂಜಲಿ ಮತ್ತು ಸವಿನೆನಪು ವಿಭಾಗದಲ್ಲಿ ಚಲನಚಿತ್ರ ಪ್ರದರ್ಶಿಸಲಾಗುತ್ತದೆ. ಮಹಿಳೆಯರ ಸಬಲೀಕರಣದ ಥೀಮ್ ಮಾಡುವ ಯೋಚನೆ ಇದೆ. ಸಂಜೆ ಒಳಗೆ ಥೀಮ್ ಬಿಡುಗಡೆ ಮಾಡ್ತೀವಿ. ಈ ಎಲ್ಲಾ ಸಿನಿಮಾಗಳನ್ನು ಒಂದೇ ಕಡೆ ನೋಡಲು ಈ ಉತ್ಸವ ಅನುಕೂಲ ಮಾಡಿಕೊಡುತ್ತದೆ. ಲೂಲು ಮಾಲ್‌ನಲ್ಲಿರುವ ಸಿನಿ ಪೊಲಿಸ್‌ನ 11 ಸ್ಕ್ರೀನ್‌ನಲ್ಲಿ ಪ್ರದರ್ಶನ ಮಾಡಲಾಗುವುದು. ಈವರೆಗೂ 110 ಚಿತ್ರಗಳಿಂದ ಅರ್ಜಿ ಬಂದಿದ್ದು, ಡಿಸೆಂಬರ್ 31 ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವಾಗಿದೆ ಎಂದಿದ್ದಾರೆ.

 

Vishwa News 24

Recent Posts

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

1 hour ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 hours ago

ಮಂಗಳೂರು: ವಿದೇಶಿ ಉದ್ಯೋಗದ ಆಮಿಷಕ್ಕೆ ವಂಚಕರ ಬಲೆಗೆ ಬೀಳದಂತೆ ಯುವಜನತೆಗೆ ಪೊಲೀಸ್‌ ಆಯುಕ್ತರ ಎಚ್ಚರಿಕೆ – vishwanews24

ಮಂಗಳೂರು: ವಿದೇಶಿ ಉದ್ಯೋಗದ ಆಕಾಂಕ್ಷಿಗಳು ಯಾವುದೇ ಏಜೆನ್ಸಿಯನ್ನು ನಂಬುವ ಮುನ್ನಎಚ್ಚರ : ಸುಧೀರ್ ಕುಮಾರ್ ರೆಡ್ಡಿ ಮನವಿ ಮಂಗಳೂರು: ವಿದೇಶದಲ್ಲಿ…

2 hours ago

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ IT ಇಲಾಖೆ ಅಧಿಕಾರಿಗಳಿಂದ ದಾಳಿ – vishwanews24

ಅಟ್ಟಿಕಾ ಗೋಲ್ಡ್ ಕಂಪನಿಗೆ ಡಬಲ್ ಶಾಕ್ : ED ದಾಳಿ ಬೆನ್ನಲ್ಲೇ, IT ಇಲಾಖೆ ಅಧಿಕಾರಿಗಳಿಂದ ದಾಳಿ ಬೆಂಗಳೂರು: ಅಟ್ಟಿಕಾ…

2 hours ago

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಕೈತಪ್ಪುವ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ – vishwanews24

ಕಾನ್ಪುರದ ಉದ್ಯಮಿ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಆಸ್ತಿ ಬೇರೆ ಮಹಿಳೆಯ ಪಾಲಾಗಬಹುದೆಂಬ ಭೀತಿಯಿಂದ ತಂದೆಯನ್ನೇ ಮುಗಿಸಿದ ಮಗ …

3 hours ago