ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕದ ನೂತನ ಅದ್ಯಕ್ಷರಾಗಿ ಆಯ್ಕೆಯಾದ ಸತೀಶ್ ಕುಂಪಲ ಅವರ ಅಧಿಕಾರ ಪದಗ್ರಹಣ ಸಮಾರಂಭ ಜನವರಿ 30 ಮಂಗಳವಾರದಂದು ಸಂಜೆ 4.30ಗಂಟೆಗೆ ನಗರದ ಹೊರವಲಯದ ಅಡ್ಯಾರ್ ಗಾರ್ಡನ್ ನಲ್ಲಿ ನಡೆಯಲಿದೆ.
ಜಿಲ್ಲಾ ಬಿಜೆಪಿ ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಸತೀಶ್ ಕುಂಪಲ ಅವರು ಪ್ರಸಕ್ತ ಬಿಜೆಪಿ ಅಧ್ಯಕ್ಷರಾದ ಸುದರ್ಶನ ಮೂಡುಬಿದಿರೆ ಅವರಿಂದ ಅಧಿಕಾರ ಸ್ವೀಕರಿಸಲಿದ್ದಾರೆ.
ಸಮಾರಂಭಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರರವರು ಆಗಮಿಸಲಿದ್ದು, ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್, ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ,ರಾಜ್ಯ ಬಿಜೆಪಿ ಘಟಕದ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ, ಮತ್ತು ಜಿಲ್ಲೆಯ ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ,ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್,ಭಾಗೀರಥಿ ಮುರುಳ್ಯ,ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ,ಹರೀಶ್ ಪೂಂಜಾ, ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್, ಸಹಿತ ಬಿಜೆಪಿ ಪಕ್ಷದ ಪ್ರಮುಖರು ಸಾಕ್ಷಿಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಸತೀಶ್ ಕುಂಪಲ ಅವರು ತಿಳಿಸಿದ್ದಾರೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…