Featured

ಜ.30 ರಂದು ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ  ಪೈಲಟ್ ಕಾರ್ಯಕ್ರಮ : ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ -Vishwanews24

ಜ.30 ರಂದು ಉಡುಪಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಗ್ರಾಮ ವಾಸ್ತವ್ಯ  ಪೈಲಟ್ ಕಾರ್ಯಕ್ರಮ : ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ -Vishwanews24

ಇಡೀ ರಾಜ್ಯದಲ್ಲಿ ಇದು ಪ್ರಥಮ ಪೈಲಟ್ ಕಾರ್ಯಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ..

ಉಡುಪಿ, : “ಜನವರಿ 30 ರಂದು ಬ್ರಹ್ಮಾವರ ತಾಲೂಕಿನ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳಿಗೆ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಎಲ್ಲಾ ಅಧಿಕಾರಿಗಳು ಭೇಟಿ ನೀಡಿ, ವಾಸ್ತವ್ಯ ಮಾಡಿ, ಸದ್ರಿ ಗ್ರಾಮಗಳಿಗೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಬಗ್ಗೆ ಸ್ಥಳದಲ್ಲೇ ಪರಿಹಾರ ಒದಗಿಸಲಿದ್ದಾರೆ, ಇಡೀ ರಾಜ್ಯದಲ್ಲಿ ಇದು ಪ್ರಥಮ ಪೈಲಟ್ ಕಾರ್ಯಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಡೆಯಲಿದೆ” ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಹೇಳಿದರು.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಗ್ರಾಮ ವಾಸ್ತವ್ಯ ಕುರಿತು ಕೈಗೊಳ್ಳಬೇಕಾದ ಕ್ರಮಗಳ ಕುರಿತು, ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜನವರಿ 30 ರಂದು ಗ್ರಾಮ ವಾಸ್ತವ್ಯ ನಡೆಯುವ ನೆಂಚಾರು ಮತ್ತು ನಾಲ್ಕೂರು ಗ್ರಾಮಗಳ ಸಾರ್ವಜನಿಕರ ಕುಂದು ಕೊರತೆಗಳ ಕುರಿತಂತೆ ಸಂಬಂದಪಟ್ಟ ಕಂದಾಯ ಇಲಾಖೆಯ ಅಧಿಕಾರಿಗಳು 3 ದಿನಗಳ ಮುಂಚಿತವಾಗಿಯೇ ಅರ್ಜಿಗಳನ್ನು ಸ್ವೀಕರಿಸಿ, ಅಗತ್ಯ ಕ್ರಮ ಕೈಗೊಳ್ಳಿ. ಸದ್ರಿ ಗ್ರಾಮ ವಾಸ್ತವ್ಯದ ದಿನ ಫಲಾನುಭವಿಗಳಿಗೆ ಅರ್ಜಿಗೆ ಸಂಬಂಧಿಸಿಂತೆ ಸೂಕ್ತ ಸೌಲಭ್ಯ ಒದಗಿಸುವ ಕುರಿತು ಕ್ರಮ ಕೈಗೊಳ್ಳಿ. ಸಂಬಂಧಪಟ್ಟ ತಾಲೂಕಿನ ತಹಸೀಲ್ದಾರ್‌ಗಳು, ತಾಲೂಕು ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳು ಹಾಗೂ ಎಲ್ಲಾ ಅಧಿಕಾರಿಗಳು ವಾಸ್ತವ್ಯ ಕಾರ್ಯಕ್ರಮದಲ್ಲಿ ಹಾಜರಿರಬೇಕು” ಎಂದು ಅಪರ ಜಿಲ್ಲಾಧಿಕಾರಿ ಸೂಚಿಸಿದರು.

ಕಾಪು ತಾಲೂಕು ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷತೆ ವಹಿಸಲಿರುವ ಸಾಹಿತಿ ಡಾ.ಭರತ್ ಕುಮಾರ್‌ ರವರಿಗೆ ಅಧಿಕೃತ ಆಹ್ವಾನ -Vishwanews24

“ಗ್ರಾಮಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಗ್ರಾಮದಲ್ಲಿನ ಎಲ್ಲಾ ಪಹಣಿಯಲ್ಲಿನ ಲೋಪದೋಷಗಳು ಮತ್ತು ಆಕಾರ್ ಬಂದ್ ತಾಳೆ ಹೊಂದುವ ಕುರಿತು ಖಚಿತಪಡಿಸಿಕೊಳ್ಳಬೇಕು. ಪೌತಿ ಹೊಂದಿದ ಖಾತೆದಾರರ ಹೆಸರನ್ನು, ನೈಜ ವಾರಿಸುದಾರರ ಹೆಸರಿಗೆ ಖಾತೆ ಮಾಡಲು ಕ್ರಮ ಕೈಗೊಳ್ಳಬೇಕು. ಗ್ರಾಮದ ಅರ್ಹ ವ್ಯಕ್ತಿಗಳಿಗೆ ಪಿಂಚಣಿ ದೊರೆಯುತ್ತಿರುವ ಬಗ್ಗೆ ಪರಿಶೀಲನೆ, ಬಿಟ್ಟು ಹೋದಂತಹ ಅರ್ಹ ಪ್ರಕರಣಗಳಿಗೆ ಸ್ಥಳದಲ್ಲಿಯೇ ಆದೇಶ ನೀಡುವುದು, ಗ್ರಾಮದಲ್ಲಿನ ಸ್ಮಶಾನ ಲಭ್ಯತೆ ಬಗ್ಗೆ ಪರಿಶೀಲನೆ, ಆಶ್ರಯ ಯೋಜನೆಗೆ ಸಂಬಂಧಿಸಿದಂತೆ ಅಗತ್ಯ ಜಮೀನು ಕಾದಿರಿಸಲು ಕ್ರಮ ಕೈಗೊಳ್ಳುವುದು, ಸರ್ಕಾರಿ ಜಮೀನಿನ ಅಕ್ರಮ ಒತ್ತುವರಿ ತೆರವು, ಆಧಾರ್ ಕಾರ್ಡ್ ಅನುಕೂಲತೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಮತದಾರರ ಪಟ್ಟಿ ಪರಿಷ್ಕರಣೆ, ಅತಿವೃಷ್ಠಿ/ಅನಾವೃಷ್ಠಿ ಎದುರಿಸಲು ಮುಂಜಾಗ್ರತಾ ಕ್ರಮಗಳು, ಬರ/ಪ್ರವಾಹ ಇದ್ದಲ್ಲಿ ಪರಿಹಾರ, ಶಾಲೆ ಹಾಗೂ ಅಂಗನವಾಡಿಗಳಿಗೆ ಭೇಟಿ ನೀಡಿ, ಆಹಾರ, ಕಲಿಕಾ ಕ್ರಮಗಳ ಬಗ್ಗೆ ಪರಿಶೀಲನೆ, ಗ್ರಾಮದಲ್ಲಿನ ವಸತಿ ನಿಲಯಗಳಿಗೆ ಭೇಟಿ ನೀಡಿ, ಸುಸ್ಥಿತಿಯಲ್ಲಿರುವ ಕುರಿತು ಪರಿಶೀಲನೆ, ಗ್ರಾಮದ ಎಲ್ಲಾ ಅರ್ಹ ಬಡ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು ಹಾಗೂ ಅನರ್ಹರು ಬಿ.ಪಿ.ಎಲ್ ಕಾರ್ಡ್ ಪಡೆದಿದ್ದಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳುವುದು, ಗುಡಿಸಲು ಇರುವ ವಾಸದ ಮನೆಗಳನ್ನು ಪತ್ತೆ ಹಚ್ಚಿ ಸರ್ಕಾರದ ವಿವಿಧ ಯೋಜನೆಯಡಿ ಮನೆ ಕಟ್ಟಲು ಅನುದಾನ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡುವುದು ಹಾಗೂ ಸರ್ಕಾರದಿಂದ ಸಾರ್ವಜನಿಕರಿಗೆ ದೊರೆಯುವ ಸವಲತ್ತುಗಳ ಬಗ್ಗೆ ಅರಿವು ಮೂಡಿಸಬೇಕು” ಎಂದು ಸದಾಶಿವ ಪ್ರಭು ತಿಳಿಸಿದರು.

ಕೆಂಪು ಕೋಟೆ ಹಿಂಸಾಚಾರ: ನಟ ದೀಪ್ ಸಿಧು ವಿರುದ್ಧ ಎಫ್‌ಐಆರ್ ದಾಖಲು -Vishwanews24

“ಗ್ರಾಮ ವಾಸ್ತವ್ಯ ಸಂದರ್ಭದಲ್ಲಿ ಸಂಬಂಧಪಟ್ಟ ಗ್ರಾಮದ ಪಿಡಿಓಗಳು ಮತ್ತು ಪಂಚಾಯತ್‌ಗಳ ಆಡಳಿತಾಧಿಕಾರಿಗಳು, ಕಂದಾಯ ಸಿಬ್ಬಂದಿ ಕಡ್ಡಾಯವಾಗಿ ಸ್ಥಳದಲ್ಲಿ ಹಾಜರಿರಬೇಕು. ಸಾರ್ವಜನಿಕರು ತಮ್ಮ ಕುಟುಂಬದ ವ್ಯಕ್ತಿ ಮರಣ ಹೊಂದಿದ್ದಲ್ಲಿ ಸಂಬಂಧಪಟ್ಟ ಇಲಾಖೆಯಿಂದ ಮರಣ ಪ್ರಮಾಣ ಪತ್ರ ಪಡೆದು, ಪೌತಿ ಖಾತೆ ಬದಲಾವಣೆ ಮಾಡಿಕೊಳ್ಳಬೇಕು. ಸಾಮಾಜಿಕ ಭದ್ರತಾ ಯೋಜನೆಯಗಳಡಿಯಲ್ಲಿ ಪಿಂಚಣಿ ಪಡೆಯುತ್ತಿದ್ದ ವ್ಯಕ್ತಿ ಮೃತಪಟ್ಟಲ್ಲಿ ಕೂಡಲೇ ಮಾಹಿತಿ ನೀಡಿ, ಅನವಶ್ಯಕವಾಗಿ ಪಿಂಚಣಿ ಹಣ ಅನರ್ಹರಿಗೆ ತಲುಪಿ ದುರುಪಯೋಗವಾಗದಂತೆ ಎಚ್ಚರವಹಿಸಬೇಕು, ಇಲ್ಲವಾದಲ್ಲಿ ಮೃತರ ಹೆಸರಿನಲ್ಲಿ ಪಿಂಚಣಿ ಪಡೆದವರಿಂದಲೇ ಮೊತ್ತವನ್ನು ವಸೂಲಿ ಮಾಡಲಾಗುವುದು ಮತ್ತು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಅಪರ ಜಿಲ್ಲಾಧಿಕಾರಿ ಎಚ್ಚರಿಸಿದರು.

“ಪ್ರತೀ ತಿಂಗಳ 3 ನೇ ಶನಿವಾರ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಉಪ ನಿರ್ದೇಶಕರು, ಭೂ ದಾಖಲೆಗಳ ಸಹಾಯಕ ನಿರ್ದೇಶಕರು, ಉಪ ವಿಭಾಗದ ಸಹಾಯಕ ಆಯುಕ್ತರು, ಸಂಬಂಧಪಟ್ಟ ತಹಸೀಲ್ದಾರ್ ಮತ್ತು ಕಂದಾಯ ನಿರೀಕ್ಷಕರು ಮತ್ತು ಗ್ರಾಮ ಲೆಕ್ಕಿಗರೊಂದಿಗೆ ಗ್ರಾಮ ವಾಸ್ತವ್ಯ ನಡೆಯಲಿದ್ದು, ಜಿಲ್ಲಾಧಿಕಾರಿ ಭೇಟಿ ನೀಡುವ ತಾಲೂಕಿನ ತಹಸೀಲ್ದಾರ್ ಹೊರತುಪಡಿಸಿ, ಉಳಿದ ತಾಲೂಕುಗಳ ತಹಸೀಲ್ದಾರ್‌ಗಳು ತಮ್ಮ ವ್ಯಾಪ್ತಿಗೆ ಬರುವ ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಲಿದ್ದು, ಬೆಳಗ್ಗೆ 10 ರಿಂದ 5 ಗಂಟೆಯವರೆಗೆ ವಾಸ್ತವ್ಯ ಮಾಡಲಿದ್ದಾರೆ” ಎಂದರು.

ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ಹಾಗೂ ಜಿಲ್ಲೆಯ ಎಲ್ಲಾ ತಹಸೀಲ್ದಾರ್‌ಗಳು ಮತ್ತು ತಾ.ಪಂ. ಕಾರ್ಯನಿರ್ವಹಣಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಮುಂಬೈಯನ್ನು ಕರ್ನಾಟಕಕ್ಕೆ ಸೇರ್ಪಡೆ ಮಾಡಬೇಕು, ಅಲ್ಲಿಯವರಗೆ ಮುಂಬೈಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸುವಂತೆ ಕೇಂದ್ರ ಸರ್ಕಾರವನ್ಮು ಒತ್ತಾಯಿಸುತ್ತೇನೆ : ಲಕ್ಷ್ಮಣ ಸವದಿ -Vishwanews24

Vishwa News 24

Recent Posts

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

18 hours ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

19 hours ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

19 hours ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

19 hours ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

19 hours ago

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ – vishwanews24

2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…

20 hours ago