Featured

ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ – vishwanews24

ಜ.9 ರಂದು ಉಡುಪಿ ನಗರ ಸಭೆಯ ವ್ಯಾಪಕ ಭ್ರಷ್ಟಾಚಾರ ವಿರೋಧಿಸಿ ನಗರ ಬಿಜೆಪಿ ನೇತೃತ್ವದಲ್ಲಿ ಕಚೇರಿಗೆ ಮುತ್ತಿಗೆ

ಉಡುಪಿ ನಗರಸಭೆಯಲ್ಲಿ ಆಡಳಿತಾಧಿಕಾರಿಗಳ ಅವಧಿಯಲ್ಲಿ ನಡೆಯುತ್ತಿರುವ ವ್ಯಾಪಕ ಭ್ರಷ್ಟಾಚಾರ, ಕುಡಿಯುವ ನೀರಿನ ವಿಪರೀತ ಬೆಲೆ ಏರಿಕೆ, ಕಳಪೆ ಕಾಮಗಾರಿ, ಅಕ್ರಮ ಕಟ್ಟಡಗಳ ನಿರ್ಮಾಣಕ್ಕೆ ಅನುಮತಿ ಹಾಗೂ ಕಚೇರಿಯಲ್ಲಿ ಮಿತಿಮೀರಿದ ದಲ್ಲಾಳಿಗಳ ಹಾವಳಿಯನ್ನು ವಿರೋಧಿಸಿ ನಗರ ಬಿಜೆಪಿ ವತಿಯಿಂದ ನಗರ ಸಭಾ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದ್ದಾರೆ.

ನಗರಸಭೆಯ ಅಧಿಕಾರಿಗಳು ಕಾಂಗ್ರೆಸ್ ಪಕ್ಷದ ಏಜೆಂಟ್ ರೀತಿಯಲ್ಲಿ ವರ್ತಿಸುತ್ತಿದ್ದು, ನಗರಸಭಾ ಕಚೇರಿಯನ್ನು ಕಾಂಗ್ರೆಸ್ ಪಕ್ಷದ ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ ನೀಡದೇ ದಿವ್ಯ ನಿರ್ಲಕ್ಷ್ಯವಹಿಸುತ್ತಿದ್ದು ಅಧಿಕಾರಿಗಳು ರಾಜಾರೋಷವಾಗಿ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಸಾರ್ವಜನಿಕರು ತಮ್ಮ ದಿನನಿತ್ಯದ ಕೆಲಸಗಳಿಗೆ ಕಚೇರಿಗೆ ಅಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪ್ರತಿಭಟನೆಯಲ್ಲಿ ಶಾಸಕರಾದ ಯಶ್ಪಾಲ್ ಸುವರ್ಣ, ನಗರ ಬಿಜೆಪಿ ಅಧ್ಯಕ್ಷರಾದ ಮಹೇಶ್ ಠಾಕೂರ್, ನಗರಸಭಾ ಸದಸ್ಯರು, ಪಕ್ಷದ ಮುಖಂಡರು, ಸಾರ್ವಜನಿಕರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 hour ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 hours ago

ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ – VISHWAEWS24

ಭಾರತೀಯ ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ರಾಜಾ ಸುಬ್ರಮಣಿ ನೇಮಕ ಹೊಸದಿಲ್ಲಿ: ಲೆಫ್ಟಿನೆಂಟ್ ಜನರಲ್ (ನಿವೃತ್ತ) ಎನ್.ಎಸ್.…

2 hours ago