Featured

ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್ – Vishwanews24

ಟರ್ಕಿ ಭೂಕಂಪ : ಅವಶೇಷಗಳಡಿ 17 ಗಂಟೆ ಕಾಲ ಆಸರೆ ನೀಡಿ ತಮ್ಮನನ್ನು ರಕ್ಷಿಸಿದ 7 ವರ್ಷದ ಪುಟ್ಟ ಬಾಲಕಿಯ ಫೋಟೋ ವೈರಲ್

ಟರ್ಕಿ: ಭೂಕಂಪನದಿಂದ ನಲುಗಿರುವ ಟರ್ಕಿ-ಸಿರಿಯಾದ ಜನರ ಸ್ಥಿತಿ ಪ್ರತಿಯೊಬ್ಬರ ಮನಕಲಕುವಂತಿದೆ. ಅದರಲ್ಲೂ ಪ್ರಸ್ತುತ ವೈರಲ್ ಆಗುತ್ತಿರುವ ಫೋಟೋವೊಂದು ಪುಟ್ಟ ಮಗುವಿನ ಹೃದಯ ವೈಶಾಲ್ಯತೆಗೆ ಹಿಡಿದ ಕನ್ನಡಿಯಂತಿದೆ.

ಭೂಕಂಪನದಿಂದಾಗಿ ಕುಸಿತಗೊಂಡ ಕಟ್ಟಡದ ಅವಶೇಷಗಳಡಿಯಲ್ಲಿ ಅಕ್ಕ ಮತ್ತು ತಮ್ಮ ಇಬ್ಬರೂ ಬಾಕಿಯಾಗಿದ್ದಾರೆ. ಈ ವೇಳೆ ತನ್ನ ತಮ್ಮನಿಗೆ ಏನೂ ಆಗದಿರಲೆಂದು ಅಕ್ಕ ತನ್ನ ಕೈಯನ್ನು ರಕ್ಷಣಾತ್ಮಕವಾಗಿ ಚಾಚಿಕೊಂಡು ಅದರ ಮೇಲೆ ತಮ್ಮನ ತಲೆ ಇಟ್ಟಿರುವ ಫೋಟೋ ಮನಕಲಕುವಂತಿದೆ. ಅತ್ಯಂತ ಕಷ್ಟದ ಸಮಯದಲ್ಲಿಯೂ 7 ವರ್ಷದ ಈ ಪುಟ್ಟ ಬಾಲಕಿ ತನ್ನ ತಮ್ಮನ ರಕ್ಷಣೆಯ ಜವಾಬ್ದಾರಿ ಹೊತ್ತ ಈ ಫೋಟೋ ಭಾವನಾತ್ಮಕವಾಗಿದೆ.

ಫೋಟೋವನ್ನು ವಿಶ್ವಸಂಸ್ಥೆ ಪ್ರತಿನಿಧಿ ಮೊಹಮ್ಮದ್​ ಸಫಾ ಎಂಬುವವರು ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ಅಕ್ಕ ಮತ್ತು ತಮ್ಮ 17 ಗಂಟೆ ಕಾಲ ಈ ಸ್ಥಿತಿಯಲ್ಲಿ ಕಳೆದಿದ್ದಾರೆ. ಬಳಿಕ ಅವರಿಬ್ಬರನ್ನೂ ರಕ್ಷಿಸಲಾಯಿತು ಎಂದು ತಿಳಿಸಿದ್ದಾರೆ.

ಸಾವು, ಕಟ್ಟಡ ಕುಸಿತಗಳಂತಹ ನಕಾರಾತ್ಮಕ ಫೋಟೋಗಳನ್ನೇ ನಾವು ಶೇರ್ ಮಾಡುತ್ತೇವೆ. ಆದರೆ ಇಂತಹ ಫೋಟೋಗಳನ್ನು ಶೇರ್ ಮಾಡುವುದನ್ನು ಮರೆಯಬಾರದು ಎಂದವರು ಇದೇ ವೇಳೆ ಬರೆದುಕೊಂಡಿದ್ದಾರೆ. ಇನ್ನು ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನಿಜಕ್ಕೂ ಇದೊಂದು ಪವಾಡ ಎಂದು ನೆಟ್ಟಿಗರು ಬರೆದಿದ್ದಾರೆ. ಆ ಬಾಲಕಿ ಪುಟ್ಟ ಹೀರೋ ಎಂಬುದಾಗಿಯೂ ಕಮೆಂಟ್ ಮಾಡಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago