Featured

ಟರ್ಕಿ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ : ಸಾವಿನ ಸಂಖ್ಯೆ 76ಕ್ಕೆ ಏರಿಕೆ – vishwanews24

ಟರ್ಕಿ ಸ್ಕೀ ರೆಸಾರ್ಟ್‌ನಲ್ಲಿ ಬೆಂಕಿ ಅವಘಡ : ಸಾವಿನ ಸಂಖ್ಯೆ 76ಕ್ಕೆ ಏರಿಕೆ

ಇಸ್ತಾಂಬುಲ್:‌ ವಾಯುವ್ಯ ಟರ್ಕಿಯ ಸ್ಕೀ ರೆಸಾರ್ಟ್‌ನಲ್ಲಿರುವ ಹೋಟೆಲ್‌ನಲ್ಲಿ ಮಂಗಳವಾರ ಸಂಭವಿಸಿದ ಅಗ್ನಿ ದುರಂತರದಲ್ಲಿ ಮೃತಪಟ್ಟವರ ಸಂಖ್ಯೆ 76ಕ್ಕೆ ಏರಿಕೆಯಾಗಿದೆ. 51 ಮಂದಿ ಗಾಯಗೊಂಡಿದ್ದಾರೆ.

ಶಾಲೆ ಸೆಮಿಸ್ಟರ್‌ ಹಾಲಿಡೇಸ್‌ ಸಮಯದಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದಾಗಲೇ ಈ ಘಟನೆ ನಡೆದಿದೆ. 12 ಅಂತಸ್ತಿನ ಹೋಟೆನಲ್ಲಿ 234 ಅತಿಥಿಗಳಿಗೆ ಆತಿಥ್ಯ ವಹಿಸಲಾಗಿತ್ತು. ಸದ್ಯ ತನಿಖೆ ಆರಂಭಿಸಿರುವ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಅಗ್ನಿ ಅವಘಡಕ್ಕೆ ನಿಖರ ಕಾರಣ ಏನೇಂಬುದನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೇ 76 ಶವಗಳನ್ನು ಹೊರತೆಗೆಯಲಾಗಿದ್ದು, 45 ಶವಗಳನ್ನು ಮಾತ್ರ ಗುರುತಿಸಲಾಗಿದೆ. ಉಳಿದ ಶವಗಳ ಗುರುತು ಪತ್ತೆ ಮಾಡುವ ಕೆಲಸವನ್ನೂ ಅಧಿಕಾರಿಗಳು ಮಾಡುತ್ತಿದ್ದಾರೆ.

ರಾಜಧಾನಿ ಅಂಕಾರಾದ ವಾಯುವ್ಯಕ್ಕೆ 170 ಕಿಲೋಮೀಟರ್ (100 ಮೈಲುಗಳು) ದೂರದಲ್ಲಿರುವ ಕರ್ತಲ್ಕಯಾ ರೆಸಾರ್ಟ್‌ಗೆ ಹಲವಾರು ಸಚಿವರು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಯಿತು. ಘಟನೆಗೆ ಆಂತರಿಕ ಸಚಿವ ಅಲಿ ಯೆರ್ಲಿಕಾಯಾ ವಿಷಾದ ವ್ಯಕ್ತಪಡಿಸಿದ್ದಾರೆ.

ಮರದಿಂದಲೇ ಮಾಡಲಾಗಿರುವ 12 ಅಂತಸ್ತಿನ ಗ್ರ್ಯಾಂಡ್ ಕಾರ್ತಾಲ್ ಹೋಟೆಲ್‌ನಲ್ಲಿ ಬೆಳಗಿನ ಜಾವ 3:27ಕ್ಕೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಬೆಂಕಿ ಅವಘಡದಿಂದ ಪಾರಾಗಲು ಅನೇಕರು ಹೋಟೆಲ್‌ನ ಕಿಟಕಿಯಿಂದ ಜಿಗಿದು ಪ್ರಾಣ ಕಳೆದುಕೊಂಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago